Homeಮುಖಪುಟಅಡುಗೆಯವನಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಸಿಬಿಐ

ಅಡುಗೆಯವನಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಸಿಬಿಐ

- Advertisement -
- Advertisement -

ಸುಮಾರು 25 ರಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ತನ್ನ ಮೊಬೈಲ್ ಫೋನ್ ಮತ್ತು ಕ್ಯಾಮೆರಾದಲ್ಲಿ ಈ ವಿಡಿಯೊಗಳನ್ನು ರೆಕಾರ್ಡ್ ಮಾಡಿ, ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡುತ್ತಿದ್ದ ಗೋವಾ ನಿವಾಸಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ಆರೋಪಿಗಳನ್ನು ಮಂಗಳವಾರ ಗೋವಾದ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಮಕ್ಕಳ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರಿಸಿ ಭಾರತೀಯರಿಗೆ ಮತ್ತು ವಿದೇಶಿಯರಿಗೆ ಮಾರಾಟ ಮಾಡಿದ್ದಾರೆ.

ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದಾರೆ ಎಂದು ಸಿಬಿಐ 2020 ರ ಜೂನ್ 22 ರಂದು ಗೋವಾ ನಿವಾಸಿ ಮತ್ತು ಇತರ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿತ್ತು.

29 ವರ್ಷದ ಆರೋಪಿ ಗೋವಾದಲ್ಲಿನ ಹೋಟೆಲ್‌ವೊಂದರಲ್ಲಿ ಅಡುಗೆಯವನಾಗಿ ಕಾರ್ಯ ನಿರ್ವಹಿಸುತ್ತಿದ್ದನು.

 ಇದನ್ನೂ ಓದಿ: ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

“ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ಒಳಗೊಂಡಿರುವ ಛಾಯಾಚಿತ್ರಗಳು ಮತ್ತು ವಿಡಿಯೊಗಳನ್ನು ಅಂತರ್ಜಾಲದ ಸೌಲಭ್ಯವನ್ನು ಬಳಸಿಕೊಂಡು ಆರೋಪಿಯು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ನಂತರ, ಫೋಟೋಗಳು ಮತ್ತು ವಿಡಿಯೊಗಳನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲಾಗಿದೆ” ಎಂದು ಸಿಬಿಐ ಮಾಹಿತಿ ನೀಡಿದೆ.

ದೇಶದ ಹೊರಗಿನ ಇತರ ಶಿಶುಕಾಮಿಗಳೊಂದಿಗೆ ಸಂಪರ್ಕ ಸಾಧಿಸಲು ಇ- ಮೇಲ್ ಸೌಲಭ್ಯವನ್ನು ಸಹ ಆರೋಪಿ ಬಳಸಿದ್ದಾನೆ ಎಂದು ಸಿಬಿಐ ತಿಳಿಸಿದೆ.

ವಿದೇಶಿ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ವ್ಯಾಪಾರ ಮಾಡಲು ಆರೋಪಿಗಳು ಸಾಮಾಜಿಕ ಜಾಲತಾಣಗಳ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ಪ್ಲಾಟ್‌ಫಾರ್ಮ್‌ಗಳನ್ನು ಸಹ ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾದ ಆರೋಪಿಗಳ ನಿವಾಸದಲ್ಲಿ ನಡೆಸಿದ ಶೋಧದ ಸಮಯದಲ್ಲಿ, ಮೊಬೈಲ್ ಫೋನ್, ಹಾರ್ಡ್ ಡ್ರೈವ್, ಪೆಂಡ್ರೈವ್ ಮತ್ತು ಲ್ಯಾಪ್ಟಾಪ್ ಅನ್ನು ಸಿಬಿಐ ವಶಪಡಿಸಿಕೊಂಡಿದೆ.


ಇದನ್ನೂ ಓದಿ: ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...