Homeಮುಖಪುಟದಾಭೋಲ್ಕರ್, ಪನ್ಸಾರೆ, ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಗೆ ಸಂಬಂಧ ಇದೆಯಾ?ಸುಪ್ರೀಂಕೋರ್ಟ್ ಪ್ರಶ್ನೆ

ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಗೆ ಸಂಬಂಧ ಇದೆಯಾ?ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

ವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಎಂಎಂ ಕಲಬುರ್ಗಿ ಅವರ ಹತ್ಯೆಗೆ ಯಾವುದಾದರೂ ಸಂಬಂಧ ಇತ್ತೇ  ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಕೇಳಿದೆ.

ಮೂಢನಂಬಿಕೆಯ ವಿರುದ್ಧ ಹೋರಾಡಿದ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20ರಂದು ಪುಣೆಯಲ್ಲಿ ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವಾಗ ಇಬ್ಬರು ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಫೆಬ್ರವರಿ 20, 2015ರಂದು ಪನ್ಸಾರೆ ಅವರ ಹತ್ಯೆಯಾಗಿತ್ತು. ಸೆಪ್ಟೆಂಬರ್ 5, 2017ರಂದು ಗೌರಿ ಲಂಕೇಶ್ ಹತ್ಯೆಯಾಗಿದ್ದರು. ಎಂಎಂ ಕಲ್ಬುರ್ಗಿ ಅವರನ್ನು 2015ರ ಆ.30ರಂದು  ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ನರೇಂದ್ರ ದಾಭೋಲ್ಕರ್ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಅವರು  ತಂದೆಯ ಹತ್ಯೆಯ ತನಿಖೆಯ ಮೇಲ್ವಿಚಾರಣೆ ಮಾಡುವಂತೆ ಕೋರಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಮುಂದುವರಿಸಲು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿದ  ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಈ ಪ್ರಶ್ನೆಯನ್ನು ಕೇಂದ್ರೀಯ ತನಿಖಾ ದಳಕ್ಕೆ  (ಸಿಬಿಐಗೆ) ಕೇಳಿದೆ.

ಮುಕ್ತಾ ದಾಭೋಲ್ಕರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, ನಾಲ್ಕು ಹತ್ಯೆಗಳ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಲಭ್ಯವಿರುವ ಪುರಾವೆಗಳು ಈ ಪ್ರಕರಣಗಳಿಗೆ ಸಂಬಂಧ ಇದೆ  ಎಂದು ಸೂಚಿಸಿದೆ ಮತ್ತು ಮುಕ್ತಾ ದಾಭೋಲ್ಕರ್ ಅವರು ಹೈಕೋರ್ಟ್‌ನಲ್ಲಿ ಈ ವಿಷಯವನ್ನು ಎತ್ತಿದ್ದರು ಎಂದು ಹೇಳಿದ್ದಾರೆ.

ವಿಚಾರಣೆಯನ್ನು ಎದುರಿಸುತ್ತಿರುವ ಆರೋಪಿಗಳಿಗೆ (ದಾಭೋಲ್ಕರ್ ಪ್ರಕರಣದಲ್ಲಿ), ನಿಮ್ಮ ಪ್ರಕಾರ, ಆ ನಾಲ್ಕು ಕೊಲೆಗಳಲ್ಲಿ ಯಾವುದೇ ಲಿಂಕ್  ಇಲ್ಲವೇ? ಸರಿಯೇ? ಅದನ್ನೇ ನೀವು ಹೇಳುತ್ತೀರಾ? ಎಂದು  ನ್ಯಾಯಮೂರ್ತಿ ಧುಲಿಯಾ ಅವರು ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಪ್ರಶ್ನಿಸಿದ್ದಾರೆ.

ಅದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು ಮತ್ತು  ಅದನ್ನು ಪರಿಶೀಲಿಸುವಂತೆ ಸಿಬಿಐಗೆ  ತಿಳಿಸಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...