Homeಮುಖಪುಟದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಸಿಬಿಐ ದಾಳಿ

ಅಮೆರಿಕದ ಅತಿದೊಡ್ಡ ಪತ್ರಿಕೆ NYT ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಅವರ ಮನೆ ಬಾಗಿಲಿಗೆ ಬಂದಿಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ

- Advertisement -
- Advertisement -

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಳಿಯ ಬಗ್ಗೆ ಇಂದು ಬೆಳಿಗ್ಗೆ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದು, “ಸಿಬಿಐ ಇಲ್ಲಿ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕರಿಸುತ್ತೇನೆ, ನನ್ನ ವಿರುದ್ಧ ಅವರಿಗೆ ಏನೂ ಸಿಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ದೆಹಲಿ ಹೈಕೋರ್ಟ್ ತಾಕೀತು

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ದೆಹಲಿ ಮುಖ್ಯಮಂತ್ರಿ ಅದಕ್ಕೆ ಶುಭಕೋರಿದ್ದು, ದೆಹಲಿ ಭಾರತವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಅದೇ ದಿನ ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿದೆ.

ಇದನ್ನೂ ಓದಿ: ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ಸಿಸೋಡಿಯಾ ಅವರನ್ನು ತನಿಖಾ ಸಂಸ್ಥೆಗಳು ಗುರಿಯಾಗಿಸುತ್ತವೆ ಎಂದು ಭವಿಷ್ಯ ನುಡಿದಿದ್ದ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, “ಸಿಬಿಐಗೆ ಸ್ವಾಗತ. ಸಂಪೂರ್ಣವಾಗಿ ಸಹಕರಿಸುತ್ತೇನೆ. ಈ ಹಿಂದೆಯೂ ಹಲವು ಪರೀಕ್ಷೆಗಳು ಹಾಗೂ ದಾಳಿಗಳು ನಡೆದಿವೆ. ಏನೂ ಹೊರಬರಲಿಲ್ಲ. ಇನ್ನೂ ಏನೂ ಹೊರಬರುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ತನ್ನ ರಾಜಕೀಯ ಯೋಜನೆಯ ಭಾಗವಾಗಿ ಬಿಜೆಪಿ ತನ್ನ ಸಚಿವರನ್ನು ಪಟ್ಟುಬಿಡದೆ ಗುರಿಯಾಗಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ. “ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌‌ ಟೈಮ್ಸ್‌ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ, ಮುಖಪುಟದಲ್ಲಿ ಮನೀಶ್ ಸಿಸೋಡಿಯಾ ಅವರ ಚಿತ್ರವನ್ನು ಮುದ್ರಿಸಿದ ದಿನವೇ ಸಿಬಿಐ ಸಿಸೋಡಿಯಾ ಅವರ ಮನೆ ಬಾಗಿಲಿಗೆ ಬಂದಿಳಿದಿದೆ” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ಜುಲೈನಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ನಿಯಮಗಳ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಸಂಪೂರ್ಣ ಕಾರ್ಯವಿಧಾನದ ಲೋಪ ಎಂದು ಆರೋಪಿಸಿ ವರದಿಯನ್ನು ಸಲ್ಲಿಸಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿ ಸರ್ಕಾರದ ಅಬಕಾರಿ ನೀತಿಯನ್ನು ಮನೀಷ್ ಸಿಸೋಡಿಯಾ ಅವರಂತಹ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳಿಗೆ ಹಾಗೂ ಖಾಸಗಿ ಮದ್ಯದ ಉದ್ಯಮಿಗಳಿಗೆ ಆರ್ಥಿಕ ಲಾಭದ ಏಕೈಕ ಗುರಿಯೊಂದಿಗೆ ಜಾರಿಗೊಳಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಳೆದ ತಿಂಗಳು ಆರೋಪಿಸಿದ್ದರು.

“ಅಬಕಾರಿ ಇಲಾಖೆಯ ಉಸ್ತುವಾರಿ ಸಚಿವ ಮನೀಶ್ ಸಿಸೋಡಿಯಾ ಅವರು ಕಾನೂನುಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯನ್ನು ಉಲ್ಲಂಘಿಸುವ ಪ್ರಮುಖ ನಿರ್ಧಾರಗಳು ಹಾಗೂ ಕ್ರಮಗಳನ್ನು ತೆಗೆದುಕೊಂಡು ಕಾರ್ಯಗತಗೊಳಿಸಿದ್ದಾ. ಇದು ಭಾರಿ ಆರ್ಥಿಕ ಪರಿಣಾಮಗಳನ್ನು ಹೊಂದಿದೆ” ಎಂದು ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

ಖಾಸಗಿ ಉದ್ಯಮಿಗಳಿಗೆ ಮದ್ಯ ಮಾರಾಟದ ಪರವಾನಗಿಗಳನ್ನು ಹಸ್ತಾಂತರಿಸಿ, ಸರ್ಕಾರಿ ಮಳಿಗೆಗಳನ್ನು ಮುಚ್ಚುವ ನೀತಿಯನ್ನು ಜುಲೈ 30 ರಂದು ಸಿಸೋಡಿಯಾ ಅವರು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...