Homeಮುಖಪುಟಪ್ರಶ್ನೆಗಾಗಿ ನಗದು ಆರೋಪ: ಮಹುವಾ ಮೊಯಿತ್ರಾ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ

ಪ್ರಶ್ನೆಗಾಗಿ ನಗದು ಆರೋಪ: ಮಹುವಾ ಮೊಯಿತ್ರಾ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ

- Advertisement -
- Advertisement -

‘ಪ್ರಶ್ನೆಗಾಗಿ ನಗದು ಆರೋಪ’ಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ದ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಾಥಮಿಕ ತನಿಖೆ ಆರಂಭಿಸಿದೆ.

ಲೋಕಪಾಲರ ನಿರ್ದೇಶನದ ಮೇರೆಗೆ ಮಹುವಾ ವಿರುದ್ದ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಇದರ ಫಲಿತಾಂಶದ ಆಧಾರದ ಮೇಲೆ ಮಹುವಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆ ಎಂದು ಸಿಬಿಐ ನಿರ್ಧರಿಸಲಿದೆ.

ಪ್ರಾಥಮಿಕ ತನಿಖೆ ವೇಳೆ ಸಿಬಿಐ ಮಹುವಾ ಅವರನ್ನು ಬಂಧಿಸಲು ಅಥವಾ ಅವರಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ಪರಿಶೀಲನೆ ನಡೆಸಲು ಸಾಧ್ಯವಿಲ್ಲ. ಆದರೆ, ಮಹುವಾ ಅವರಿಂದ ಮಾಹಿತಿ ಪಡೆಯಬಹುದು, ದಾಖಲೆಗಳನ್ನು ಪರಿಶೀಲಿಸಬಹುದು ಅವರನ್ನು ವಿಚಾರಣೆಗೆ ಒಳಪಡಿಸಬಹುದು. ಲೋಕಪಾಲರ ಆದೇಶದ ಮೇರೆಗೆ ಈ ತನಿಖೆ ಆರಂಭಿಸಿರುವುದರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರದಿ ಸಲ್ಲಿಸಲಾಗುತ್ತದೆ.

ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಸಿಬಿಐಗೆ ದೂರು ಸಲ್ಲಿಸಿದ್ದರು.

ದೇಹದ್ರಾಯ್ ಅವರು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೂ ಈ ಸಂಬಂಧ ಪತ್ರ ಬರೆದಿದ್ದಾರೆ. ದುಬೆ ಈಗಾಗಲೇ ಮಹುವಾ ಮೊಯಿತ್ರಾ ವಿರುದ್ದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಲೋಕಪಾಲರಿಗೆ ದೂರು ನೀಡಿದ್ದು, ಈ ಸಂಬಂಧ ಲೋಕಸಭೆಯ ನೈತಿಕ ಸಮಿತಿ ಮಹುವಾ ಮೊಯಿತ್ರಾ ಅವರ ಹೇಳಿಕೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...