Homeಮುಖಪುಟಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

- Advertisement -
- Advertisement -

ಹೊಸ ಮುಖ್ಯಸ್ಥರ ನೇಮಕದ ಬಗ್ಗೆ ಒಮ್ಮತ ಮಡದ ಕಾರಣ, ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಬುಧವಾರ ಒಂದು ವರ್ಷ ವಿಸ್ತರಿಸಿದೆ.

ಕರ್ನಾಟಕ ಕೇಡರ್‌ನ 1986 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸೂದ್, ಈ ವರ್ಷ ಮೇ 24 ರಂದು ತಮ್ಮ ಎರಡು ವರ್ಷಗಳ ಸ್ಥಿರ ಅವಧಿಯನ್ನು ಪೂರ್ಣಗೊಳಿಸಬೇಕಿತ್ತು. ಆದರೂ, ಉನ್ನತ ಅಧಿಕಾರದ ಆಯ್ಕೆ ಸಮಿತಿಯ ಚರ್ಚೆಯ ನಂತರ ಅವರ ಉತ್ತರಾಧಿಕಾರಿಯ ನಿರ್ಧಾರವನ್ನು ಅಂತಿಮಗೊಳಿಸಲು ಸಾಧ್ಯವಾಗಲಿಲ್ಲ.

“ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಂಪುಟದ ನೇಮಕಾತಿ ಸಮಿತಿಯು, ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ಪ್ರವೀಣ್ ಸೂದ್, ಐಪಿಎಸ್ (ಕೆಎನ್: 1986) ಅವರ ಅಧಿಕಾರಾವಧಿಯನ್ನು 24.05.2025 ರಿಂದ ಒಂದು ವರ್ಷದ ಅವಧಿಗೆ ವಿಸ್ತರಿಸಲು ಅನುಮೋದನೆ ನೀಡಿದೆ” ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಸಿಬಿಐ ನಿರ್ದೇಶಕರ ಆಯ್ಕೆಯನ್ನು ಪ್ರಧಾನ ಮಂತ್ರಿ ಅಧ್ಯಕ್ಷತೆಯ ಮೂವರು ಸದಸ್ಯರ ಸಮಿತಿಯು ನಿಯಂತ್ರಿಸುತ್ತದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿದೆ.

ಈ ವಾರದ ಆರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ನೇಮಕಾತಿಯನ್ನು ಅಂತಿಮಗೊಳಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭೇಟಿಯಾದರು. ಆದರೂ, ಯಾವುದೇ ಒಮ್ಮತ ಮೂಡದೆ ಸಭೆ ಕೊನೆಗೊಂಡಿತು ಎಂದು ವರದಿಯಾಗಿದೆ.

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಯಾರು?

1964 ರಲ್ಲಿ ಜನಿಸಿದ ಪ್ರವೀಣ್ ಸೂದ್ ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಹಳೆಯ ವಿದ್ಯಾರ್ಥಿ. ಅವರು 1986 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರಿದರು. 1989 ರಲ್ಲಿ ಮೈಸೂರಿನಲ್ಲಿ ಸಹಾಯಕ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ನಂತರ ಅವರು ಬಳ್ಳಾರಿ ಮತ್ತು ರಾಯಚೂರಿನಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ, ಬೆಂಗಳೂರು ನಗರದಲ್ಲಿ ಪೊಲೀಸ್ ಉಪ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ) ಸೇವೆ ಸಲ್ಲಿಸಿದರು.

1999 ರಲ್ಲಿ, ಸೂದ್ ಅವರನ್ನು ಮಾರಿಷಸ್ ಸರ್ಕಾರಕ್ಕೆ ಪೊಲೀಸ್ ಸಲಹೆಗಾರರಾಗಿ ನಿಯೋಜಿಸಲಾಯಿತು. ಅವರು ಮೂರು ವರ್ಷಗಳ ಕಾಲ ಈ ಹುದ್ದೆಯನ್ನು ನಿರ್ವಹಿಸಿದರು. ಈ ವಿದೇಶಿ ನಿಯೋಜನೆಯ ಸಮಯದಲ್ಲಿ, ಅವರು ಯುರೋಪ್ ಮತ್ತು ಉತ್ತರ ಅಮೆರಿಕಾದಲ್ಲಿನ ಪೊಲೀಸ್ ವ್ಯವಸ್ಥೆಗಳಿಗೆ ಅಮೂಲ್ಯವಾದ ಮಾನ್ಯತೆಯನ್ನು ಪಡೆದರು.

ಭಾರತಕ್ಕೆ ಹಿಂದಿರುಗಿದ ನಂತರ, 2003 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಮತ್ತು ನ್ಯೂಯಾರ್ಕ್‌ನ ಸಿರಾಕ್ಯೂಸ್ ವಿಶ್ವವಿದ್ಯಾಲಯದ ಮ್ಯಾಕ್ಸ್‌ವೆಲ್ ಸ್ಕೂಲ್ ಆಫ್ ಸಿಟಿಜನ್‌ಶಿಪ್ ಅಂಡ್ ಪಬ್ಲಿಕ್ ಅಫೇರ್ಸ್‌ನಲ್ಲಿ ಸಾರ್ವಜನಿಕ ನೀತಿ ಮತ್ತು ನಿರ್ವಹಣೆಯಲ್ಲಿ ಸ್ನಾತಕೋತ್ತರ ಅಧ್ಯಯನವನ್ನು ಮುಂದುವರಿಸಲು ಅವರು ರಜೆ ಪಡೆದರು.

ಸೂದ್ ಕರ್ನಾಟಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸಿಬಿಐ ನಿರ್ದೇಶಕರಾಗಿ ಅವರ ಅಧಿಕಾರಾವಧಿಯು ಹಲವಾರು ಉನ್ನತ ಮಟ್ಟದ ತನಿಖೆಗಳು ಮತ್ತು ಸಾಂಸ್ಥಿಕ ಸುಧಾರಣೆಗಳಿಂದ ಗುರುತಿಸಲ್ಪಟ್ಟಿದೆ.

ಭಾರತ-ಪಾಕ್ ನಡುವೆ ಉದ್ವಿಗ್ನತೆ; ಸಂಯಮದಿಂದ ವರ್ತಿಸುವಂತೆ ಯುಎಇ ಉಪ ಪ್ರಧಾನಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...