Homeಮುಖಪುಟ`ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ': ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ...

`ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

- Advertisement -
- Advertisement -

ತಾನು ಎಎಪಿ ಬಿಟ್ಟು ಬಿಜೆಪಿ ಸೇರುವುದಾದರೆ ತನ್ನ ವಿರುದ್ಧದ ಎಲ್ಲಾ ಸಿಬಿಐ ಮತ್ತು ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸುವುದಾಗಿ ಬಿಜೆಪಿಯು ತನಗೆ ಆಫರ್ ನೀಡಿದೆ ಎಂದು ಅಬಕಾರಿ ನೀತಿ ಆಪಾದಿತ ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮನೀಶ್‌ ಸಿಸೋಡಿಯಾ, “ಎಎಪಿಯನ್ನು ಬಿಟ್ಟು ಬಿಜೆಪಿಗೆ ಸೇರಿಕೊಳ್ಳಿ, ಎಲ್ಲಾ ಸಿಬಿಐ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ರಜಪೂತ, ಮಹಾರಾಣಾ ಪ್ರತಾಪ್ ವಂಶಸ್ಥ. ನನ್ನ ತಲೆಯನ್ನು ಕತ್ತರಿಸುತ್ತೇನೆ ಆದರೆ ಭ್ರಷ್ಟ ಪಿತೂರಿಗಾರರ ಮುಂದೆ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಮಾಡಲು ಬಯಸುತ್ತೀರೋ ಅದನ್ನು ಮಾಡಿ ಎಂಬುವುದು ಬಿಜೆಪಿಗೆ ನನ್ನ ಉತ್ತರ” ಮನೀಶ್‌ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಜನರು ಮತ್ತು ಘಟಕಗಳಲ್ಲಿ ಸಿಸೋಡಿಯಾ ಕೂಡ ಒಬ್ಬರಾಗಿದ್ದಾರೆ.

ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನೀಶ್ ಸಿಸೋಡಿಯಾ ಅವರನ್ನು ಬೆಂಬಲಿಸಿದ್ದಾರೆ. “ದೆಹಲಿಯ ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಮನೀಶ್ ಸಿಸೋಡಿಯಾ ಅವರಿಗೆ ‘ಭಾರತ ರತ್ನ’ ಸಿಗಬೇಕು. ಆದರೆ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರವು ಅವರನ್ನು ಬೇಟೆಯಾಡುತ್ತಿದೆ” ಎಂದು ಹೇಳಿದ್ದಾರೆ.

ಸಿಸೋಡಿಯಾ ಹೇಳಿಕೆ ನಿರಾಕರಿಸಿದ ಬಿಜೆಪಿ

ಸಿಸೋಡಿಯಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ, “ಮನೀಷ್ ಸಿಸೋಡಿಯಾ ಅವರು ಪ್ರತಿದಿನ ಬೆಳಿಗ್ಗೆ ‘ಪ್ರಾಣಾಯಾಮ’ ಮಾಡಬೇಕು. ಅವರು ಗಾಂಜಾ ಸೇವಿಸಿದ್ದಾರೆಯೇ? ಅವರು ಬಿಜೆಪಿಗೆ ಸೇರಲು ಕೇಳಿದ ವ್ಯಕ್ತಿಯ ಹೆಸರನ್ನು ಹೇಳಬೇಕು. ಎಂತಹ ಪರಿಸ್ಥಿತಿಯಲ್ಲೂ ಬಿಜೆಪಿ ಅವರನ್ನು ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಸಿಸೋಡಿಯಾ ಅವರ ಹೇಳಿಕೆಯನ್ನು ನಿರಾಕರಿಸಿದ ಬಿಜೆಪಿ, “ಎಎಪಿ ಭ್ರಷ್ಟಾಚಾರದಲ್ಲಿ ದಾಖಲೆಗಳನ್ನು ಮುರಿದಿದೆ” ಎಂದು ಅಬಕಾರಿ ನೀತಿ ಪ್ರಕರಣವನ್ನು ಉಲ್ಲೇಖಿಸಿ ಆರೋಪಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...