Homeಮುಖಪುಟನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾಗಾ ಮಹಿಳೆಯ ಹತ್ಯೆ: 9 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ವೇಳೆ ನಾಗಾ ಜನಾಂಗದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ 9 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಅಸ್ಸಾಂನ ಗುವಾಹಟಿಯಲ್ಲಿರುವ ವಿಶೇಷ ಸಿಬಿಐ ನ್ಯಾಯಾಧೀಶರ ಮುಂದೆ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದ ಬಗ್ಗೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ.

ಆಗಸ್ಟ್‌ನಲ್ಲಿ ನಾಗಾ ಸಮುದಾಯದ ಮಹಿಳೆಯ ಹತ್ಯೆಯ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ಹತ್ಯೆಗೀಡಾದ ಮಹಿಳೆಯ ಕುಟುಂಬವು ಜುಲೈ 23 ರಂದು ವೀಡಿಯೊವನ್ನು ನೋಡಿದೆ ಎಂದು ಹೇಳಿದೆ. ಆದರೆ ಆ.4ರಂದು ಈ ಕುರಿತ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿತ್ತು. ವಿಡಿಯೋದಲ್ಲಿ ಲೂಸಿ ಮರಿಂಗ್(55) ಎಂಬ ಮಹಿಳೆಯ ತೆಲೆಗೆ 20 ಬಾರಿ ಶೂಟ್‌ ಮಾಡಲಾಗಿದೆ. ವಿಡಿಯೋದಲ್ಲಿ ಮಹಿಳೆಯ ತಲೆ ಛಿದ್ರವಾಗಿರುವುದು ಕಂಡು ಬಂದಿತ್ತು.

2023ರ ಜುಲೈ 15ರಂದು ಮಧ್ಯಾಹ್ನ 12:10ರ ಸುಮಾರಿಗೆ ಸಶಸ್ತ್ರದಾರಿ ದುಷ್ಕರ್ಮಿಗಳು ಸೇರಿದಂತೆ ಸುಮಾರು 100 ಜನರ ಗುಂಪೊಂದು ಸಾವೊಂಬಂಗ್ ಗೇಟ್‌ನಲ್ಲಿ ಒಬ್ಬ ಮಹಿಳೆಯನ್ನು ಅಪಹರಿಸಿದ್ದರು. ಅದೇ ದಿನ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆಯಲ್ಲಿ 9 ಆರೋಪಿಗಳು ಭಾಗಿಯಾಗಿರುವುದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಇತರ ಆರೋಪಿಗಳನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಲಾಮಲೈ ಪೊಲೀಸ್ ಠಾಣೆಯು ಮೊದಲು ಈ ಕುರಿತು ಪ್ರಕರಣ ದಾಖಲಿಸಿತ್ತು. ಬಳಿಕ ಮಣಿಪುರ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಪ್ರಕರಣದಲ್ಲಿ ಐವರು ಮಹಿಳೆಯರು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಮಾರಿಂಗ್ ಬುಡಕಟ್ಟಿಗೆ ಸೇರಿದ ಲೂಸಿಯನ್ನು ಒಂದು ಗುಂಪು ಅಪಹರಿಸಿ ಇಂಫಾಲ್ ಪೂರ್ವದ ಸಾವೊಂಬಂಗ್‌ಗೆ ಕರೆಯದ್ದು ಹತ್ಯೆ ನಡೆಸಿದೆ. ಇಂಫಾಲ್ ಪಶ್ಚಿಮದಲ್ಲಿರುವ ತನ್ನ ಮನೆಯಿಂದ ಸುಮಾರು 10 ಕಿಮೀ ದೂರದಲ್ಲಿ ಘಟನೆ ನಡೆದಿದೆ.

ಮಣಿಪುರದಲ್ಲಿ ಮೈತೈ-ಕುಕಿ ಸಮುದಾಯದ ನಡುವಿನ ಸಂಘರ್ಷದ ನಡುವೆ ಮಹಿಳೆಯ ಹತ್ಯೆಯು ನಾಗಾ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಯುನೈಟೆಡ್ ನಾಗಾ ಕೌನ್ಸಿಲ್ ಕೃತ್ಯವನ್ನು ಖಂಡಿಸಿ ಪ್ರತಿಭಟಿಸಿತ್ತು. ಬಂದ್‌ಗೆ ಕರೆ ನೀಡಿತ್ತು.

ಮಣಿಪುರದಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದ ಹಿಂಸಾಚಾರದಲ್ಲಿ 194 ಜನರು ಮೃತಪಟ್ಟು 67,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತೈ ಸಮುದಾಯದವರು ಇಂಫಾಲ್‌ ಕಣಿವೆಯಲ್ಲಿ ವಾಸಿಸುತ್ತಿದ್ದು, ಇವರ ಮೀಸಲಾತಿ ಬೇಡಿಕೆಯನ್ನು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ, ರಾಜ್ಯದ ಜನಸಂಖ್ಯೆಯಲ್ಲಿ ಶೇ 40ರಷ್ಟಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ವಿರೋಧಿಸಿ ಪ್ರತಿಭಟನೆ ನಡೆಸಿದವು. ಈ ವೇಳೆ ಹಿಂಸಾಚಾರ ನಡೆದಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...