HomeಮುಖಪುಟFCRA ಉಲ್ಲಂಘನೆಯ ಆರೋಪ: ಸಿಬಿಐನಿಂದ ಪ್ರಬೀರ್ ಪುರ್ಕಾಯಸ್ಥ ನಿವಾಸದಲ್ಲಿ ಶೋಧ

FCRA ಉಲ್ಲಂಘನೆಯ ಆರೋಪ: ಸಿಬಿಐನಿಂದ ಪ್ರಬೀರ್ ಪುರ್ಕಾಯಸ್ಥ ನಿವಾಸದಲ್ಲಿ ಶೋಧ

- Advertisement -
- Advertisement -

ನ್ಯೂಸ್‌ಕ್ಲಿಕ್ ನ್ಯೂಸ್ ಪೋರ್ಟಲ್‌ ವಿರುದ್ಧ ಎಫ್‌ಸಿಆರ್‌ಎ ಉಲ್ಲಂಘನೆಯ ಆರೋಪದ ಮೇಲೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಇಂದು ಸಿಬಿಐ ಅಧಿಕಾರಿಗಳು ಎರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಪ್ರಕರಣದಲ್ಲಿ ಇತ್ತೀಚೆಗೆ ದೆಹಲಿ ಪೊಲೀಸರು ಬಂಧಿಸಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಬಿಐ ಅಧಿಕಾರಿಗಳ ತಂಡವು ಶೋಧ ನಡೆಸಿದೆ.

ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯನ್ನು (ಎಫ್‌ಸಿಆರ್‌ಎ) ಉಲ್ಲಂಘಿಸಿ ಪೋರ್ಟಲ್ ವಿದೇಶಿ ಹಣವನ್ನು ಸ್ವೀಕರಿಸಿದೆ ಎಂದು ಆರೋಪಿಸಲಾಗಿದೆ.

ಚೀನಾದ ಕಮ್ಯುನಿಸ್ಟ್ ಪಕ್ಷದ ಪ್ರಚಾರ ವಿಭಾಗದ ಸಕ್ರಿಯ ಸದಸ್ಯ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ಹಣವನ್ನು ಪಡೆಯಲಾಗಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ. ಚೀನಾದಿಂದ ಹಣ ಪಡೆದುಕೊಂಡು ಭಾರತ ವಿರೋಧಿ ಅಭಿಯಾನವನ್ನು ನ್ಯೂಸ್‌ ಕ್ಲಿಕ್ ಸಂಸ್ಥೆ ನಡೆಸುತ್ತಿದೆ ಎಂದು ಆರೋಪಿಸಲಾಗಿದೆ.

ಆದರೆ ತಮ್ಮ ಮೇಲಿನ ದೆಹಲಿ ಪೊಲೀಸರ ಆರೋಪಗಳನ್ನು ಪೋರ್ಟಲ್ ನಿರಾಕರಿಸಿದೆ.

ಅಕ್ಟೋಬರ್ 3 ರಂದು ದೆಹಲಿ ಪೊಲೀಸರು ಪೋರ್ಟಲ್‌ನ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ಆರ್(HR) ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದರು. ನ್ಯೂಸ್‌ಕ್ಲಿಕ್ ಕಚೇರಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳಿಂದ 300ಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದರು.

ಅಕ್ಟೋಬರ್ 4 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ, ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ನ್ಯೂಸ್ ಕ್ಲಿಕ್‌ ವಿರುದ್ಧದ ಪ್ರಕರಣ: 25 ಪತ್ರಕರ್ತರನ್ನು 2ನೇ ಬಾರಿಗೆ ವಿಚಾರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...