ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಕೇಂದ್ರೀಯ ತನಿಖಾ ದಳದಿಂದ ತನಿಖೆಗೆ ಆದೇಶಿಸಿದೆ ಎಂದು ಬಿಜೆಪಿಯ ನಿಶಿಕಾಂತ್ ದುಬೆ ಇಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
”ನನ್ನ ದೂರಿನ ಆಧಾರದ ಮೇಲೆ, ರಾಷ್ಟ್ರೀಯ ಭದ್ರತೆಗೆ ರಾಜಿ ಮಾಡಿಕೊಳ್ಳುವ ಮಹುವಾ ಮೊಯಿತ್ರಾ ಅವರ ಭ್ರಷ್ಟಾಚಾರದ ಕುರಿತು ಲೋಕಪಾಲ್ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ” ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್‌ನ್ನು ಗುರಿಯಾಗಿಸಲು ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣವನ್ನು ಸ್ವೀಕರಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.
”ಮೊಯಿತ್ರಾ ಅವರು ತಮ್ಮ ಸಂಸದೀಯ ಲಾಗಿನ್‌ನ್ನು ಉದ್ಯಮಿಯೊಂದಿಗೆ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ರಾಜಿ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಅವರು, ಅವರನ್ನು ತಕ್ಷಣವೇ ಸಂಸತ್ತಿನಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ


