Homeಮುಖಪುಟಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

- Advertisement -
- Advertisement -

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಸಂದರ್ಶನವೊಂದರಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಇದೀಗ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆಗೆ ಕರೆದಿದೆ.

ಕೆಲವು ಸ್ಪಷ್ಟೀಕರಣಗಳಿಗಾಗಿ ಸಿಬಿಐ ನನ್ನನ್ನು ಕರೆದಿದೆ. ಅವರು ನನ್ನಿಂದ ಕೆಲವು ಸ್ಪಷ್ಟೀಕರಣಗಳನ್ನು ಬಯಸುತ್ತಿದ್ದಾರೆ ಹಾಗಾಗಿ ನನ್ನ ಉಪಸ್ಥಿತಿಯನ್ನು ಅವರು ಬಯಸುತ್ತಿದ್ದಾರೆ. ಆದರೆ ನಾನು ಈಗ ರಾಜಸ್ಥಾನಕ್ಕೆ ಹೋಗುತ್ತಿದ್ದೇನೆ ಹಾಗಾಗಿ ನಾನು ಅವರಿಗೆ ಏಪ್ರಿಲ್ 27 ರಿಂದ 29 ರವರೆಗೆ ದಿನಾಂಕಗಳನ್ನು ನೀಡಿದ್ದೇನೆ” ಎಂದು ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಮಲಿಕ್ ಅವರು 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದಾಗ ವಿಮಾ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿದ್ದರು.

ಮಲಿಕ್ ಅವರು ಇತ್ತಿಚೆಗೆ ದಿ ವೈರ್ ಸಂದರ್ಶನದಲ್ಲಿ, ವಿಮಾ ಯೋಜನೆಯಲ್ಲಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆ ನಂತರ ಸಿಬಿಐ ಕ್ರಮ ಬಂದಿತು. ಆಪಾದಿತ ಹಗರಣದ ಕುರಿತು ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಸಿಬಿಐ ಬಯಸಿದೆ ಎಂದು ಮೂಲಗಳು ತಿಳಿಸಿವೆ.

ದಿ ವೈರ್ ಸಂದರ್ಶನದಲ್ಲಿ ಸತ್ಯಪಾಲ್ ಹೇಳಿದ್ದೇನು?

ಭ್ರಷ್ಟಾಚಾರದ ವಿಷಯದ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದರು.

ಅದೇ ರೀತಿ ಗೋವಾದ ರಾಜ್ಯಪಾಲನಾಗಿದ್ದಾಗ ಅಲ್ಲಿನ ಭ್ರಷ್ಟಾಚಾರಗಳ ಕುರಿತು ಪ್ರಧಾನಿ ಮೋದಿಯವರಿಗೆ ದೂರು ನೀಡಿದ್ದೆ. ಅವುಗಳನ್ನು ಸರಿಪಡಿಸುವ ಬದಲು ನಿರ್ಲಕ್ಷ್ಯ ಮಾಡಿದ್ದಲ್ಲದೆ ನನ್ನನ್ನು ಗೋವಾದ ರಾಜ್ಯಪಾಲ ಸ್ಥಾನದಿಂದ ಕಿತ್ತು ಮೇಘಾಲಯಕ್ಕೆ ಕಳಿಸಿದರು. ಪ್ರಧಾನಿಯವರ ಸುತ್ತಲಿನ ಜನರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಆಗಾಗ್ಗೆ ಪ್ರಧಾನಿ ಕಚೇರಿಯ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಇದೆಲ್ಲವನ್ನೂ ಮೋದಿಯವರ ಗಮನಕ್ಕೆ ತಂದಿದ್ದೇನೆ, ಆದರೆ ಪ್ರಧಾನಿ ಕಾಳಜಿ ತೋರುತ್ತಿಲ್ಲ. ಹಾಗಾಗಿ ನಾನು ಖಚಿತವಾಗಿ ಹೇಳಬಲ್ಲೆ ಭ್ರಷ್ಟಾಚಾರ ಕುರಿತು ನರೇಂದ್ರ ಮೋದಿಯವರಿಗೆ ಹೆಚ್ಚಿನ ದ್ವೇಷವಿಲ್ಲ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು.

ಪುಲ್ವಾಮ ದಾಳಿ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಸತ್ಯಪಾಲ್

”ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...