Homeಮುಖಪುಟನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ಬಿಹಾರ ಪೊಲೀಸರು "ಪೂರ್ಣ ಪ್ರಮಾಣದ ಎಫ್ಐಆರ್" ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಸಿಬಿಐ ವಹಿಸಲು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ.

ಸುಶಾಂತ್ ಸಿಂಗ್ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಪಾಟ್ನಾದಲ್ಲಿ ನೋಂದಾಯಿಸಲಾದ ಎಫ್ಐಆರ್ ಸರಿಯಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಹಾರ ಸಮರ್ಥವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಪ್ರಕರಣದ ಪ್ರಮುಖ ಅಂಶಗಳು ಇಲ್ಲಿವೆ:

  • ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ, ನಟ ರಿಯಾ ಚಕ್ರವರ್ತಿ ಪಾಟ್ನಾದಲ್ಲಿ ಸುಶಾಂತ್ ಕುಟುಂಬ ನೋಂದಾಯಿಸಿರುವ ಎಫ್‌ಐಆರ್ ಅಥವಾ ಪ್ರಾಥಮಿಕ ಮಾಹಿತಿ ವರದಿಯನ್ನು ಮುಂಬೈಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೋರೆ ಹೊಗಿದ್ದರು.
  • ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
  • ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ ಚಲನಚಿತ್ರ ಜಗತ್ತಿನಲ್ಲಿ ಪ್ರತಿಭಾನ್ವಿತ ನಟರಾಗಿದ್ದರು. ಆದರೆ ಈ ಉದಯೋನ್ಮುಖ ನಟನ ಪೂರ್ಣ ಸಾಮರ್ಥ್ಯ ಬೆಳಕಿಗೆ ಬರುವ ಮೊದಲೇ ಅವರು ನಿಧನರಾದರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳು ತನಿಖೆಯ ಫಲಿತಾಂಶಕ್ಕಾಗಿ ತೀವ್ರವಾಗಿ ಕಾಯುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
  • ಸಿಬಿಐ ತನಿಖೆಗೆ ಸಹಕರಿಸಲು ಮತ್ತು ಎಲ್ಲಾ ಸಹಾಯವನ್ನು ನೀಡಲು ಮಹಾರಾಷ್ಟ್ರಕ್ಕೆ ಆದೇಶಿಸಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿದ್ದರೆ, ಅದನ್ನೂ ಸಹ ಸಿಬಿಐ ತನಿಖೆ ನಡೆಸಲಿದೆ ಎಂದು ಉನ್ನತ ನ್ಯಾಯಾಲಯ ಹೇಳಿದೆ.
  • ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಿತ್ತು.
  • ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದರು.
  •  ನಟನ ಆರ್ಥಿಕ ಸ್ಥಿತಿ ಮತ್ತು ಅವರ ಖಾತೆಯಿಂದ ಕೋಟಿಗಟ್ಟಲೆ ಹಣ ತೆಗೆದುಕೊಳ್ಳಲಾಗಿದೆ ಎನ್ನುವ ದೂರಿನ ಮೇರೆಗೆ ಬಿಹಾರ ಪೊಲೀಸ್ ದೂರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ತನಿಖೆ ನಡೆಸಲು ಕಾರಣವಾಯಿತು.
  • ರಿಯಾ ಚಕ್ರವರ್ತಿ ಸುಶಾಂತ್ ಅವರ ತಂದೆಯ ಆರೋಪವನ್ನು “ಸಂಪೂರ್ಣ ಅಸಂಬದ್ಧ” ಎಂದು ನಿರಾಕರಿಸಿದ್ದಾರೆ. ತಾನು ನ್ಯಾಯಾಲಯದ ವಾದಗಳಲ್ಲಿ, ಮುಂಬೈ ಪೊಲೀಸ್ ತನಿಖೆಯನ್ನು ರದ್ದುಗೊಳಿಸುವ ಕ್ರಮವು ಬಿಹಾರ ಚುನಾವಣೆಗೆ ಮುನ್ನ ರಾಜಕೀಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.
  • ನ್ಯಾಯಾಲಯದ ಆದೇಶದ ನಂತರ, ಬಿಹಾರದಿಂದ ಮತ್ತು ಚಲನಚಿತ್ರೋದ್ಯಮದಿಂದಲೂ ಹಲವು ಪ್ರತಿಕ್ರಿಯೆಗಳು ಬಂದವು. “ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ಆಧಾರದ ಮೇಲೆ ಸಿಬಿಐ, ಸುಶಾಂತ್ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ” ಎಂದು ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.
  • ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದ ಸುಶಾಂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, “ದೇವರಿಗೆ ಧನ್ಯವಾದಗಳು! ನೀವು ನಮ್ಮ ಪ್ರಾರ್ಥನೆಗೆ ಉತ್ತರಿಸಿದ್ದೀರಿ !! ಆದರೆ ಇದು ಕೇವಲ ಪ್ರಾರಂಭ. ಸತ್ಯದತ್ತ ಮೊದಲ ಹೆಜ್ಜೆ! ಸಂಪೂರ್ಣ ನಂಬಿಕೆಯಿದೆ. ಸಿಬಿಐ !!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...