Homeಮುಖಪುಟಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ಸಿಸೋಡಿಯಾ ಮೇಲೆ ಸಿಬಿಐ ರೈಡ್‌| 12 ಐಎಎಸ್‌ ಅಧಿಕಾರಿಗಳ ವರ್ಗಾವಣೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

- Advertisement -
- Advertisement -

ಮದ್ಯ ನೀತಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬಳಿಕ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ರೈಡ್‌ ಮಾಡಲಾಗಿದ್ದು, ಇದರ ಬೆನ್ನಲ್ಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶುಕ್ರವಾರ ಸಂಜೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಅಬಕಾರಿ ಇಲಾಖೆಯ ಉಸ್ತುವಾರಿಯನ್ನು ಮನೀಶ್ ಸಿಸೋಡಿಯಾ ಅವರೇ ನೋಡಿಕೊಳ್ಳುತ್ತಿದ್ದು ಸಿಬಿಐ ದಾಳಿ ನಡೆಸಿದೆ. ಮದ್ಯದ ನೀತಿ ಉಲ್ಲಂಘನೆಗಳ ಕುರಿತು ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳ ಹೆಸರುಗಳು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ವರ್ಗಾವಣೆ ಆದೇಶ ಹೊರಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳ ಪಟ್ಟಿಯಲ್ಲಿ ಸಿಸೋಡಿಯಾ ಅವರ ಹೆಸರು ಮೊದಲ ಸ್ಥಾನದಲ್ಲಿದೆ. ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಮತ್ತು ನಕಲಿ ಖಾತೆ ಆರೋಪಗಳನ್ನು ಹೊರಿಸಲಾಗಿದೆ.

ದೆಹಲಿಯಲ್ಲಿರುವ ಸಿಸೋಡಿಯಾ ಅವರ ಮನೆಯ ಜೊತೆಗೆ, ಏಳು ರಾಜ್ಯಗಳಾದ್ಯಂತ 31 ಇತರ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯ ನಡೆಸಿದೆ. 14 ಗಂಟೆಗಳ ದಾಳಿಯ ನಂತರ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್ ಮತ್ತು ಫೋನ್ ಅನ್ನು ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

ನವೆಂಬರ್‌ನಲ್ಲಿ ಜಾರಿಗೆ ತಂದ ನೀತಿಯಡಿ ಮದ್ಯದಂಗಡಿ ಪರವಾನಗಿಯನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ. ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧಗಳ ವಿಭಾಗದಿಂದ ತನಿಖೆಯನ್ನು ಪ್ರಾರಂಭಿಸಿದ ನಂತರ ಜುಲೈ 30 ರಂದು ಸಿಸೋಡಿಯಾ ಅವರು ಪರವಾನಗಿಯನ್ನು ಹಿಂದಕ್ಕೆ ಪಡೆದರು.

ದೆಹಲಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿಯಿಲ್ಲದೆ ದೆಹಲಿಯಲ್ಲಿ ಮದ್ಯ ಮಾರಾಟ ಮಾಡಲು ಯಾರಿಗೆ ಅವಕಾಶ ನೀಡಬಹುದು ಎಂಬ ಹೊಸ ನೀತಿಯನ್ನು ಸಿಸೋಡಿಯಾ ಪರಿಚಯಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಸಿಸೋಡಿಯಾ ಅವರ ಸಹವರ್ತಿ ನಿರ್ವಹಿಸುತ್ತಿರುವ ಕಂಪನಿಗೆ ಮದ್ಯದ ವ್ಯಾಪಾರಿಯೊಬ್ಬರು ₹ 1 ಕೋಟಿ ಪಾವತಿಸಿದ್ದಾರೆ ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಪ್ರಸ್ತಾಪಿಸಿದೆ. ಅಬಕಾರಿ ನೀತಿಯ ರಚನೆ, ಅನುಷ್ಠಾನದಲ್ಲಿನ ಅಕ್ರಮಗಳಲ್ಲಿ ಮದ್ಯದ ಕಂಪನಿಗಳು ಮತ್ತು ಮಧ್ಯವರ್ತಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಇದನ್ನೂ ಓದಿರಿ: ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

ಹೊಸ ಮದ್ಯ ನೀತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮುಖ್ಯ ಕಾರ್ಯದರ್ಶಿಯವರು ವರದಿ ನೀಡಿದ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕಳೆದ ತಿಂಗಳು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಎಎಪಿಯು ಅಬಕಾರಿ ನೀತಿಯನ್ನು ಏಕೈಕ ಗುರಿ ಸಾಧನೆಗೆ ತಂದಿದೆ. ಖಾಸಗಿ ಮದ್ಯದ ಬ್ಯಾರನ್‌ಗಳಿಗೆ ಆರ್ಥಿಕ ಲಾಭ ತಂದುಕೊಡುವುದಕ್ಕಾಗಿ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮನೀಶ್‌ ಸಿಸೋಡಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. “ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಬಿಜೆಪಿಯು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ” ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಿಸೋಡಿಯಾ ಅವರನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರೀಯ ಸಂಸ್ಥೆಗಳು ಸಂವಿಧಾನಕ್ಕೆ ಬದ್ದವೋ ಇಲ್ಲವೇ ಯಾವುದೋ ರಾಜಕೀಯ ಪಕ್ಷಗಳ ಗುಲಾಮರೇ,ಯಾವುದು ಶಾಶ್ವತವಲ್ಲ, ಇಲ್ಲಿ ಕಾರ್ಯವಹಿಸುವ ಎಲ್ಲರೂ ಆನ್ನಾ ತಿನ್ನೋದು ಸಾರ್ವಜನಿಕರ ತೆರಿಗೆ ಹಣದ ಬಿಕ್ಷೆಯಿಂದ ಅನ್ನೋದು ಈ ಸಂಸ್ಥೆಗಳು ,ಗವರ್ನರ್ ಜನರಲ್ ಅನ್ನಿಸಿಕೊಳ್ಳೋ ಕೇಂದ್ರ ಸರ್ಕಾರದ ಗುಲಾಮ,ಕೇಂದ್ರ ಸರ್ಕಾರದ ಪ್ರಧಾನಿಯಿಂದ ಹಿಡಿದು ಎಲ್ಲಾ ಮಂತ್ರಿಗಳಿಗೂ ಅನ್ವಹಿಸತ್ತೆ.

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...