Homeಮುಖಪುಟಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

ಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪಾಸ್‌ಪೋರ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಪ.ಬಂಗಾಳ, ಸಿಕ್ಕಿಂನ ಗ್ಯಾಂಗ್‌ಟಾಕ್‌ ಸೇರಿ 50 ಸ್ಥಳಗಳಲ್ಲಿ ಶೋಧವನ್ನು ನಡೆಸಿದ್ದಾರೆ.

ನಕಲಿ ದಾಖಲೆಗಳನ್ನು ಬಳಸಿ ಅನಿವಾಸಿಗಳು ಸೇರಿದಂತೆ ಅನರ್ಹ ವ್ಯಕ್ತಿಗಳಿಗೆ ಪಾಸ್‌ಪೋರ್ಟ್ ನೀಡಿದ ಆರೋಪದಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳು ಸೇರಿ 24 ಮಂದಿ ವಿರುದ್ಧ ಕೇಂದ್ರೀಯ ತನಿಖಾ ದಳ(ಸಿಬಿಐ) ಎಫ್‌ಐಆರ್‌ ದಾಖಲಿಸಿದೆ.

ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್‌ಟಾಕ್‌ನ 50 ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಗ್ಯಾಂಗ್‌ಟಾಕ್‌ನಲ್ಲಿ ಒಬ್ಬ ಅಧಿಕಾರಿ ಮತ್ತು ಮಧ್ಯವರ್ತಿಯನ್ನು ಸಿಬಿಐ ಬಂಧಿಸಿದೆ ಎಂದು ವರದಿ ತಿಳಿಸಿದೆ.

ನಕಲಿ ದಾಖಲೆಗಳನ್ನು ಬಳಸಿ ಅನರ್ಹರಿಗೆ ಪಾಸ್‌ಪೋರ್ಟ್‌ಗಳನ್ನು ನೀಡುತ್ತಿರುವ 16 ಅಧಿಕಾರಿಗಳು ಸೇರಿದಂತೆ 24 ವ್ಯಕ್ತಿಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕೋಲ್ಕತ್ತಾ, ಸಿಲಿಗುರಿ, ಗ್ಯಾಂಗ್ಟಾಕ್ ಮತ್ತು ಇತರ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಇದಕ್ಕೂ ಮೊದಲು ಸೌದಿ ಅರೇಬಿಯಾ ರಾಯಭಾರಿ ಕಚೇರಿಯ ನಕಲಿ ಪಾಸ್‌ಪೋರ್ಟ್‌ಗಳು, ವೀಸಾ ಸ್ಟಿಕ್ಕರ್‌ಗಳು ಮತ್ತು ರಬ್ಬರ್ ಸ್ಟ್ಯಾಂಪ್‌ಗಳನ್ನು ಹೊಂದಿದ್ದ ಆರೋಪದ ಮೇಲೆ ಎರಡು ದಶಕಗಳ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಇದನ್ನು ಓದಿ: ಭಯೋತ್ಪಾದನ ಕೃತ್ಯದ ಆರೋಪಿ ವೈಭವ್ ರಾವುತ್ ಜೈಲಿನಿಂದ ಬಿಡುಗಡೆ ವೇಳೆ ಅದ್ದೂರಿ ಸ್ವಾಗತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...