Homeಕರ್ನಾಟಕಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

’ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’- ಸಂಸದ ಡಿ.ಕೆ.ಸುರೇಶ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಏಕಕಾಲದಲ್ಲಿ ಸಹೋದರರಿಬ್ಬರ ಮನೆ ಮೇಲೆ ಮತ್ತು ಕನಕಪುರದ ಹಲವು ಸ್ಥಳಗಳಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ಸಿಬಿಐ ದಾಳಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ದಾಳಿಯನ್ನು ರಾಜಕೀಯ ಷಡ್ಯಂತ್ರ ಎಂದಿರುವ ಸಂಸದ ಡಿ.ಕೆ.ಸುರೇಶ್, ’ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ’ ಎಂದಿದ್ದಾರೆ.

 

’ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’ ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಹಾಗಾಗಿ ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

‘ಇಂದು ಮುಂಜಾನೆಯಿಂದ ನಡೆದ ಸಿಬಿಐ ವಿಚಾರಣೆ ಈಗಷ್ಟೆ ಮುಕ್ತಾಯವಾಗಿದೆ. ಹಿಂದೆ IT ಮತ್ತು ED ಅಧಿಕಾರಿಗಳು ನಡೆಸಿದ ವಿಚಾರಣೆಯ ದಾಖಲೆ ಪ್ರತಿಗಳ ನಕಲನ್ನು ಸಿಬಿಐ ಅಧಿಕಾರಿಗಳು ತಗೆದುಕೊಂಡಿರುತ್ತಾರೆ. ನನ್ನ ದೆಹಲಿ ನಿವಾಸದಲ್ಲಿ ಇನ್ನೂ ಪರಿಶೀಲನೆ ನಡೆಯುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ಸ್ಪಂದಿಸಿದ್ದೇವೆ’ ಎಂದು ತಾವು ಸಿಬಿಐಗೆ ಸಂಪೂರ್ಣ ಸಹಕಾರ ನೀಡಿದ್ದೇವೆ ಎಂದು ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಬೆಳಗ್ಗೆ ಸಹೋದರರಿಬ್ಬರ ಮನೆ ಮೇಲೆ ಸಿಬಿಐ ದಾಳಿಯಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದರು.

ರಾಜ್ಯದ ಹಲವು ಕಡೆಗಳಲ್ಲಿ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಗೆ ಎನ್‌ಎಸ್‌ಯುಐ ಸಂಘಟನೆ ಮುತ್ತಿಗೆ ಹಾಕಲು ಪ್ರಯತ್ನಿಸಿತ್ತು. ಎನ್‌ಎಸ್‌ಯುಐನ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...