Homeಮುಖಪುಟರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರ ಸಹೋದರನ ಮನೆ ಮೇಲೆ ಸಿಬಿಐ ದಾಳಿ

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರ ಸಹೋದರನ ಮನೆ ಮೇಲೆ ಸಿಬಿಐ ದಾಳಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಮನೆ ಮೇಲೆ ಶುಕ್ರವಾರ (ಜೂನ್ 17) ಕೇಂದ್ರ ತನಿಖಾ ದಳವು (CBI)  ಭ್ರಷ್ಟಾಚಾರದ ಹೊಸ ಪ್ರಕರಣದಲ್ಲಿ ದಾಳಿ ನಡೆಸಿದೆ. ತನಿಖಾ ಸಂಸ್ಥೆಯ ತಂಡವು ಅಗ್ರಸೇನ್ ಗೆಹ್ಲೋಟ್ ಅವರ ವ್ಯವಹಾರ ಕಚೇರಿಗೂ ತೆರಳಿ, ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಸಗೊಬ್ಬರ ರಫ್ತು ಪ್ರಕರಣದ ಆರೋಪದಲ್ಲಿ ಸಿಎಂ ಸಹೋದರ ಅಗ್ರಸೇನ್ ಗೆಹ್ಲೋಟ್ ಈಗಾಗಲೇ ಜಾರಿ ನಿರ್ದೇಶನಾಲಯದ (ED) ವಿಚಾರಣೆಯನ್ನು ಎದುರಿಸುತ್ತಿದ್ದಾರೆ. 2007 ಮತ್ತು 2009 ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರವನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಗೆಹ್ಲೋಟ್ ಅವರಿಗೆ ಸೇರಿದ ಸ್ಥಳಗಳಲ್ಲಿಯೂ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯು ಭ್ರಷ್ಟಾಚಾರದ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ರಸಗೊಬ್ಬರ ಪ್ರಕರಣದಲ್ಲಿ, ಇಡಿ ಸರಾಫ್ ಇಂಪೆಕ್ಸ್ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದೆ. ಅಗ್ರಸೇನ್ ಗೆಹ್ಲೋಟ್ ಒಡೆತನದ ಸಂಸ್ಥೆಯಾದ ಅನುಪಮ್ ಕೃಷಿ, ಸರಾಫ್ ಇಂಪೆಕ್ಸ್ ಮೂಲಕ 2007 ರಿಂದ 2009 ರ ಅವಧಿಯಲ್ಲಿ ಭಾರತೀಯ ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದ್ದ ಪೊಟ್ಯಾಷ್ ಅನ್ನು ವಿದೇಶಗಳಿಗೆ ರಫ್ತು ಮಾಡಿದೆ. ರಫ್ತು ಮಾಡಿದ ರಸಗೊಬ್ಬರವು ರಾಜಸ್ಥಾನದ ರೈತರಿಗೆ ಮೀಸಲಾಗಿತ್ತು ಎಂದು ಇಡಿ ಆರೋಪಿಸಿದೆ.

ಇದಕ್ಕೂ ಮೊದಲು 2020 ರಲ್ಲಿ ಜಾರಿ ನಿರ್ದೇಶನಾಲಯ ಅಗ್ರಸೇನ್ ಗೆಹ್ಲೋಟ್ ಅವರ ಆಸ್ತಿ ಮೇಲೆ ದಾಳಿಗಳನ್ನು ನಡೆಸಿತ್ತು. ಜೋಧ್‌ಪುರದಲ್ಲಿರುವ ಅಗ್ರಸೇನ್ ಗೆಹ್ಲೋಟ್ ಅವರ ನಿವಾಸ ಮತ್ತು ರಾಜಸ್ಥಾನದ ಇತರ ಸ್ಥಳಗಳಲ್ಲಿ ಸಿಬಿಐ ದಾಳಿಗಳು ಇನ್ನೂ ನಡೆಯುತ್ತಿವೆ.

ಈ ದಾಳಿಗಳು ದ್ವೇಷದ ರಾಜಕಾರಣ ಎಂದಿರುವ ಕಾಂಗ್ರೆಸ್ “ಇದು ಎಲ್ಲ ಮಿತಿಗಳನ್ನು ಮೀರಿದ ಸೇಡಿನ ರಾಜಕಾರಣ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಶೋಕ್ ಗೆಹ್ಲೋಟ್ ಮುಂಚೂಣಿಯಲ್ಲಿದ್ದರು. ಇದು ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರತಿಕ್ರಿಯೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...