Homeಮುಖಪುಟಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರ ಕೋಲ್ಕತ್ತಾದ ಮನೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಈ ವಾರದ ಆರಂಭದಲ್ಲಿ ಮೊಯಿತ್ರಾ ವಿರುದ್ಧದ ಆರೋಪಗಳನ್ನು ತನಿಖೆ ಮಾಡಿ ಆರು ತಿಂಗಳೊಳಗೆ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಕೇಳಿತ್ತು. ಇದಲ್ಲದೆ ಪ್ರತಿ ತಿಂಗಳು ತನಿಖೆಯ ಸ್ಥಿತಿಗತಿಗಳ ಬಗ್ಗೆ ವರದಿಗಳನ್ನು ಸಲ್ಲಿಸುವಂತೆ ಸಿಬಿಐಗೆ ತಿಳಿಸಿತ್ತು.

ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಲೋಕಸಭೆಯಲ್ಲಿ ಮಂಡಿಸಿದ್ದರು. ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದರ ಆಧಾರದಲ್ಲಿ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು. ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದನ್ನು ಪ್ರಶ್ನಿಸಿ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನು ಓದಿ: ಚುನಾವಣಾ ಬಾಂಡ್: 745 ಕೋಟಿ ದೇಣಿಗೆ ಹೈದರಾಬಾದ್‌ ಮೂಲದ ಕಂಪೆನಿಗಳಿಂದ ಪಡೆದಿದ್ದ ಬಿಜೆಪಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...