Homeಮುಖಪುಟತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಈವರೆಗೆ ಬಂಧಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್ ಉಲ್ಲಂಘಿಸಿ ತಮ್ಮ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ತಮಿಳುನಾಡಿನ ತುತುಕುಡಿಯ ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆಗೊಳಗಾಗಿ ಸಾವಿಗೀಡಾದ ತಂದೆ-ಮಗನ ಲಾಕಪ್‌ಡೆತ್‌‌ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಬುಧವಾರ ಎರಡು ಪ್ರಕರಣಗಳನ್ನು ದಾಖಲಿಸಿದೆ.

ತನಿಖೆಗಾಗಿ ರಚಿಸಲಾದ ಸಿಬಿಐ ತಂಡವನ್ನು ತನಿಖಾ ಸ್ಥಳಕ್ಕೆ ಕಳುಹಿಸಲಾಗುತ್ತಿದೆ.

ಪಿ ಜಯರಾಜ್ ಮತ್ತು ಜೆ ಬೆನಿಕ್ಸ್ ಸಾವಿನ ಬಗ್ಗೆ ಕೇಂದ್ರದ ಸಂಸ್ಥೆ ತನಿಖೆ ನಡೆಸುವಂತೆ ಕೋರಿ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದ ಪತ್ರದ ಕೇಂದ್ರ ಸರ್ಕಾರ ಮಂಗಳವಾರ ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸಿದೆ.

ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಈವರೆಗೆ ಬಂಧಿಸಲಾಗಿದೆ.

ಪಿ. ಜಯರಾಜ್ (59) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರನ್ನು ಕೊರೊನಾ ವೈರಸ್ ಲಾಕ್ ಡೌನ್ ಜೂನ್ 19 ರಂದು ವಿಧಿಸಲಾಗಿದ್ದ ಕರ್ಫ್ಯೂ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ ಅಂಗಡಿಯನ್ನು ತೆರೆದಿಟ್ಟದ್ದಕ್ಕಾಗಿ ಬಂಧಿಸಲಾಯಿತು.

ತಂದೆ ಹಾಗೂ ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಹಿಂಸಿಸಲಾಯಿತು ಎಂದು ಆರೋಪಿಸಲಾಗಿದೆ, ನಂತರ ಅವರನ್ನು ಜೂನ್ 22 ರಂದು ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದೇ ರಾತ್ರಿ ಮಗ ಸಾವನ್ನಪ್ಪಿದ್ದರೆ, ತಂದೆ ಜೂನ್ 23 ರ ಬೆಳಿಗ್ಗೆ ಕೊನೆಯುಸಿರೆಳೆದಿದ್ದರು.

ಈ ಪ್ರಕರಣದಲ್ಲಿ ಒಬ್ಬ ಮಹಿಳಾ ಪೊಲೀಸ್ ಮಾತ್ರ ಪ್ರತ್ಯಕ್ಷದರ್ಶಿಯಾಗಿದ್ದು, ಘಟನೆಯ ತನಿಖೆ ನಡೆಸಿದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂ ಎಸ್ ಬಾರತಿದಾಸನ್ ಅವರಿಗೆ, ಜೂನ್ 19 ರಂದು ರಾತ್ರಿಯಿಡೀ ಜಯರಾಜ್ ಮತ್ತು ಬೆನ್ನಿಕ್ಸ್ ಇಬ್ಬರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ.

“ಲಾಠಿ ಹಾಗೂ ಮೇಜಿನ ಮೇಲೆ ರಕ್ತದ ಕಲೆಗಳಿವೆ” ಎಂದು ಅವರು ಹೇಳಿದ್ದರಿಂದ ತಕ್ಷಣ ಅವುಗಳನ್ನು ವಶಕ್ಕೆ ಪಡೆಯಲು ಮ್ಯಾಜಿಸ್ಟ್ರೇಟ್ ಕೇಳಿದ್ದಾರೆ.


ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...