Homeಕರ್ನಾಟಕಸಿಬಿಐ ಸಮನ್ಸ್: ನ.25 ಕ್ಕೆ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದ ಡಿ.ಕೆ.ಶಿವಕುಮಾರ್!

ಸಿಬಿಐ ಸಮನ್ಸ್: ನ.25 ಕ್ಕೆ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದ ಡಿ.ಕೆ.ಶಿವಕುಮಾರ್!

- Advertisement -
- Advertisement -

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಸಿಬಿಐ ಮತ್ತೆ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ನವೆಂಬರ್‌‌ 23 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಆದರೆ ತಾನು ರಾಜ್ಯ ಪ್ರವಾಸದಲ್ಲಿದ್ದು 25 ರಂದು ಹಾಜರಾಗುತ್ತೇನೆ ಎಂದು ಸಿಬಿಐಗೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌ ಪ್ರಶ್ನೆ

ಸಿಬಿಐ ಸಮಸ್ಸ್‌ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಬಿಐಯಿಂದ ನೋಟಿಸ್ ಬಂದಿದೆ. ನವೆಂಬರ್‌ 23‌ ಕ್ಕೆ ಹಾಜರಾಗಲು ತಿಳಿಸಿದ್ದರು. ಆದರೆ ಅಂದು ಸಾಧ್ಯವಾಗುತ್ತಿಲ್ಲ, 25 ಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದ್ದೇನೆ. ಕಳೆದ ಆಕ್ಟೋಬರ್ 5 ರಂದು ನನ್ನ ಹಾಗೂ ಸೋದರ ಡಿ.ಕೆ. ಸುರೇಶ್ ಬೆಂಗಳೂರಿನ ನಿವಾದ ಮೇಲೆ ಸಿಬಿಐ ದಾಳಿ ನಡೆದಿತ್ತು. ರಾಜ್ಯ ಪ್ರವಾಸ ನಿಗದಿ ಆಗಿರುವ ಹಿನ್ನೆಲೆ ದೆಹಲಿಯಲ್ಲಿರುವ ಸಿಬಿಐ ಕಚೇರಿ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

23 ಕ್ಕೆ ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ಮನವಿ ಮಾಡಿರುವುದಕ್ಕೆ ಅಧಿಕಾರಿಗಳು ಒಪ್ಪಿದ್ದಾರೆ ಎಂದಿರುವ ಅವರು 25 ರ ಸಂಜೆ 4 ಗಂಟೆಗೆ ಬೆಂಗಳೂರಿನ ಸಿಬಿಐ ಕಚೇರಿ ತೆರಳಿ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...