Homeಮುಖಪುಟಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

ಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

- Advertisement -
- Advertisement -

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಹತ್ಯೆ ಮಾಡಿದ ಆರೋಪದಡಿ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಸಿಬಿಐಗೆ ವಿಶೇಷ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ. ಇದೇ ಪ್ರಕರಣದಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಮಗಳ ಕೊಲೆ ಪ್ರಕರಣದ ಸಹ ಆರೋಪಿಗಳಾದ ಇಂದ್ರಾಣಿ ಮುಖರ್ಜಿ ಮತ್ತು ಅವರ ಪತಿ ಪೀಟರ್ ಮುಖರ್ಜಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ನ ಮಾಜಿ ಪ್ರವರ್ತಕರಾಗಿದ್ದಾರೆ. ಚಿದಂಬರಂ ಮತ್ತು ಅವರ ಮಗ ಕಾರ್ತಿ ವಿರುದ್ಧ ಇಂದ್ರಾಣಿ ಮುಖರ್ಜಿ ಅವರು ತಪ್ಪೊಪ್ಪಿಗೆಯ ಹೇಳಿಕೆಯನ್ನು ದಾಖಲಿಸಿದ್ದರು. ನಂತರ ಅವರನ್ನು ಸದರಿ ಪ್ರಕರಣದಲ್ಲಿ ಅನುಮೋದಕರೆಂದು ಘೋಷಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದ ಭಾಗವಾಗಿ ಕೆಲವು ಹಣಕಾಸಿನ ವಹಿವಾಟುಗಳ ಬಗ್ಗೆ ಸ್ಪಷ್ಟತೆ ಬೇಕು ಎಂದು ಇಂದ್ರಾನಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರೀಯ ತನಿಖಾ ದಳ ಸೋಮವಾರ ನ್ಯಾಯಾಲಯದ ಅನುಮತಿಯನ್ನು ಕೋರಿತ್ತು. ವಿಶೇಷ ಸಿಬಿಐ ನ್ಯಾಯಾಧೀಶ ಜೆ ಸಿ ಜಗ್ಡೇಲ್ ಅವರು ನಗರದ ಬೈಕುಲ್ಲಾ ಜೈಲಿನೊಳಗೆ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರ ಏಜೆನ್ಸಿಗೆ ಅನುಮತಿ ನೀಡಿದರು. ಅಲ್ಲಿ ಅವರ ಮಗಳು ಶೀನಾ ಬೋರಾ ಅವರ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

47 ವರ್ಷದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿಯನ್ನು ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ನಡುವೆ ಪ್ರಶ್ನಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. ಕಾಂಗ್ರೆಸ್ ನಾಯಕನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಇಂದ್ರಾಣಿ ಮುಖರ್ಜಿ ಅವರು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು, ಅವರು ಮತ್ತು ಅವರ ಪತಿ ಸೇರಿ  ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕಚೇರಿಯಲ್ಲಿ ಚಿದಂಬರಂ ಅವರನ್ನು ಹಣಕಾಸು ಸಚಿವರಾಗಿದ್ದಾಗ ಭೇಟಿಯಾಗಿದ್ದರು ಎಂದು ಆರೋಪಿಸಲಾಗಿದೆ.

ತನ್ನ ಮಗ ಕಾರ್ತಿಗೆ ವ್ಯವಹಾರದಲ್ಲಿ ನೀವು ಸಹಾಯ ಮಾಡಿದರೆ ನಿಮ್ಮ ಐಎನ್‌ಎಕ್ಸ್ ಮೀಡಿಯಾಕ್ಕೆ ವಿದೇಶಿ ಹೂಡಿಕೆಗೆ ಅನುಮೋದನೆ ನೀಡುತ್ತೇವೆ ಎಂದು ಚಿದಂಬರಂ ಹೇಳಿದ್ದರು ಎಂದು ಇಂದ್ರಾಣಿ ಹೇಳಿಕೊಂಡಿದ್ದಾಳೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ 305 ಕೋಟಿ ರೂ.ಗಳ ವಿದೇಶಿ ಹಣವನ್ನು ಪಡೆದಿದ್ದಕ್ಕಾಗಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ಗೆ ನೀಡಿದ್ದ ಎಫ್‌ಐಪಿಬಿ ಕ್ಲಿಯರೆನ್ಸ್‌ನಲ್ಲಿನ ಅಕ್ರಮಗಳ ಆರೋಪದಲ್ಲಿ ಸಿಬಿಐ 2017 ರ ಮೇ 15 ರಂದು ಎಫ್‌ಐಆರ್ ದಾಖಲಿಸಿದೆ. ಇದಾದ ನಂತರ ಇ.ಡಿ ಈ ನಿಟ್ಟಿನಲ್ಲಿ 2018 ರಲ್ಲಿ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ.

73 ವರ್ಷದ ಚಿದಂಬರಂ ಮತ್ತು ಅವರ ಮಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಚಿದಂಬರಂ ವಿರುದ್ಧ ತನಿಖಾ ಸಂಸ್ಥೆಗಳ ಕ್ರಮವನ್ನು “ರಾಜಕೀಯ ಪ್ರೇರಿತ” ಎಂದು ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...