Homeಮುಖಪುಟರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

ರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

- Advertisement -
- Advertisement -

ಚೆನ್ನೈನ ಸಿಬಿಎಸ್ಇ ಶಾಲೆಯಲ್ಲಿ 10 ನೇ ತರಗತಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆಯಲ್ಲಿ ವಿದಾತ್ಮಕ ಪ್ರಶ್ನೆಯನ್ನು ಕೇಳಲಾಗಿದ್ದು, ‘ಗಣರಾಜ್ಯೋತ್ಸವದಂದು ಕಿಡಿಗೇಡಿಗಳು ಬಾಹ್ಯ ಪ್ರಚೋದನೆಯಡಿ ಹಿಂಸೆ ನೆಡೆಸಿದ್ದು, ಈ ಹಿಂಸಾಚಾರವನ್ನು ಖಂಡಿಸಿ ದಿನ ಪತ್ರಿಕೆಯೊಂದಕ್ಕೆ ಪತ್ರ ಬರೆಯಿರಿ’ ಎಂದು 5 ಅಂಕಕ್ಕೆ ಪ್ರಶ್ನೆಯನ್ನು ಕೇಳಲಾಗಿದೆ.

ವಿವಾದಿತ ಪ್ರಶ್ನೆ ಪತ್ರಿಕೆಯ ಚಿತ್ರವನ್ನು ಖ್ಯಾತ ಸಂಗೀತಕಾರ ಟಿ.ಎಂ. ಕೃಷ್ಣ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಪ್ರಸ್ತುತ ಚಿತ್ರವು ವ್ಯಾಪಕವಾಗಿ ಹರಿದಾಡುತ್ತಿದೆ. ಅವರು ತನ್ನ ಟ್ವೀಟ್‌ನಲ್ಲಿ, “ಇದು ಜನಪ್ರಿಯ ಚೆನ್ನೈ ಶಾಲೆಯ 10 ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯ ಮಾದರಿ. ಘಟನೆ ಬಗ್ಗೆ ಮತ್ತು ಕೃಷಿ ಮಸೂದೆಗಳ ಬಗ್ಗೆ ಇನ್ನೂ ಚರ್ಚಿಸಲಾಗುತ್ತದೆ. ಆದರೆ ಇಲ್ಲಿ ಘಟನೆಯನ್ನು ‘ಬಾಹ್ಯ ಪ್ರಚೋದನೆಯಡಿ ಹಿಂಸೆ ನಡೆಸುತ್ತಿರುವ ಕಿಡಿಗೇಡಿಗಳು’ ಎಂದು ಹೇಳಲಾಗುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಪತ್ರಿಕೆಯ ಪರೀಕ್ಷೆ ಫೆಬ್ರವರಿ 11 ರಂದು ನಡೆದಿದ್ದು, ಈ ಪ್ರಶ್ನೆಯು ಎರಡನೇ ಪರಿಷ್ಕರಣೆ ಪರೀಕ್ಷೆಯ ಭಾಗವಾಗಿತ್ತು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

“ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಹಿಂಸಾಚಾರವು ನಾಗರಿಕರಲ್ಲಿ ಅಸಮಾಧಾನ ಸೃಷ್ಟಿಸಿದೆ. ಕೃಷಿ ಕಾನೂನು ವಿರುದ್ದದ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದರು ಮತ್ತು ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದರು. ವೈಯಕ್ತಿಕ ಅಗತ್ಯ ಮತ್ತು ಲಾಭಗಳಿಗಿಂತಲೂ ದೇಶ ಮೊದಲು ಎಂದು ಅರಿತುಕೊಳ್ಳಲು ವಿಫಲವಾದ ದುಷ್ಕರ್ಮಿಗಳ ಇಂತಹ ಭಯಾನಕ, ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸಿ, ನಿಮ್ಮ ನಗರದಲ್ಲಿನ ದಿನಪತ್ರಿಕೆಯೊಂದರ ಸಂಪಾದಕರಿಗೆ ಪತ್ರ ಬರೆಯಿರಿ” ಎಂದು ಪ್ರಶ್ನೆಯು ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನು ನೀಡಿದೆ.

“ಸಾರ್ವಜನಿಕ ಆಸ್ತಿಯನ್ನು ನಾಶಪಡಿಸುವುದು, ರಾಷ್ಟ್ರಧ್ವಜವನ್ನು ಅವಮಾನಿಸುವುದು ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು ಸೇರಿದಂತೆ ಇನ್ನಿತರ ಅಕ್ರಮ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗುವುದಿಲ್ಲ. ಬಾಹ್ಯ ಪ್ರಚೋದನೆಯಡಿಯಲ್ಲಿ ಕಾರ್ಯನಿರ್ವಹಿಸುವ ಇಂತಹ ಹಿಂಸಾತ್ಮಕ ಕಿಡಿಗೇಡಿಗಳನ್ನು ತಡೆಯಲು ಹಲವು ಸಲಹೆಗಳನ್ನು ನೀಡಿ” ಎಂದು ಕೂಡಾ ಪ್ರಶ್ನೆ ಪತ್ರಿಕೆಯು ಕೇಳಿದೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ 2 ತಿಂಗಳುಗಳ ಕಾಲದಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್‍ಯಾಲಿ ನಡೆಸಿದ್ದರು. ಈ ವೇಳೆ ರ್‍ಯಾಲಿಯು 99% ಶಾಂತಿಯುತವಾಗಿತ್ತು. ಆದರೆ ರೈತ ಸಂಘಟನೆಯ ಒಂದು ಗುಂಪು ಕೆಂಪುಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿತ್ತು. ಆನಂತರ ದೀಪ್‌ ಸಿಧು ಎಂಬ ನಟನನ್ನು ಬಂಧಿಸಿದ್ದು ಆತ ಬಿಜೆಪಿ ಕಾರ್ಯಕರ್ತ ಎಂದು ಆರೋಪಿಸಲಾಗಿದೆ.

ಆದರೆ ಈ ಘಟನೆಯನ್ನು ರೈತ ಮುಖಂಡರು ಖಂಡಿಸಿದ್ದು, ಘಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 152 ಜನರನ್ನು ಬಂಧಿಸಿದ್ದಾರೆ. ಘಟನೆಯ ಪ್ರಮುಖ ಆರೋಪಿ ದೀಪ್‌ ಸಿಧು, ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದವರು ಎಂದು ಈಗಾಗಲೇ ವರದಿಯಾಗಿದೆ.

ಇದನ್ನೂ ಓದಿ: ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...