Homeಕರ್ನಾಟಕಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಎಫ್‌ಐಆರ್‌ ದಾಖಲಾದ ಹಿನ್ನಲೆಯಲ್ಲಿ ಕೆಲದಿನಗಳಲ್ಲಿಯೇ ಸಂತ್ರಸ್ತ ಯುವತಿಯು ಖುದ್ದು ಎಸ್‌ಐಟಿ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾಳೆ ಎನ್ನಲಾಗಿದೆ.

- Advertisement -
- Advertisement -

ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂತ್ರಸ್ತ ಯುವತಿ ದೂರು ನೀಡಿದ ಬೆನ್ನಲ್ಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ವಿರುದ್ಧ ಬೆಂಗಳೂರಿನ ಕಬ್ಬನ್‌ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿಯವರು ಉದ್ಯೋಗದ ಭರವಸೆ ನೀಡಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ಇಂದು ಎರಡು ಪುಟಗಳ ದೂರು ಸಲ್ಲಿಸಿದ್ದರು.

ಇಂದು ಬೆಳಿಗ್ಗೆ ಸಂತ್ರಸ್ತ ಯುವತಿಯು 29 ಸೆಕೆಂಡ್‌ಗಳ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, “ಎಲ್ಲರ ಬೆಂಬಲದಿಂದ ನಾನು ಇಂದು ಬದುಕುಳಿದಿದ್ದೇನೆ. ಕಳೆದ 24 ದಿನಗಳಿಂದ ಜೀವ ಕೈಯಲ್ಲಿಡಿದು ಬದುಕಿದೆ. ಈಗ ನಿಮ್ಮ ಬೆಂಬಲದಿಂದ ನಾನು ರಮೇಶ್ ಜಾರಕಿಹೊಳಿಯವರ ವಿರುದ್ದ ನಮ್ಮ ವಕೀಲರಾದ ಜಗದೀಶ್ ಕುಮಾರ್ ಅವರ ಮೂಲಕ ಪೊಲೀಸ್ ಕಮಿಷನರ್‌ರವರಿಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದರು.

ದೂರು ಪರಿಶೀಲಿಸಿದ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್‌ ಅವರು ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವಂತೆ ಕಬ್ಬನ್ ಪಾರ್ಕ್ ಪೊಲೀಸರಿಗೆ ನಿರ್ದೇಶಿಸಿದ್ದರು. ಅದರನ್ವಯ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ 506- ಜೀವ ಬೆದರಿಕೆ, 354(A)- ಉದ್ದೇಶಪೂರ್ವಕ ಲೈಂಗಿಕ ದೌರ್ಜನ್ಯ, 376(C)- ಅಧಿಕಾರ ದುರುಪಯೋಗಿಪಡಿಸಿಕೊಂಡು ಅತ್ಯಾಚಾರ, 506 ಅವಾಚ್ಯ ಶಬ್ದಗಳಿಂದ ನಿಂದನೆ, 417 ನೌಕರಿ ಕೊಡಿಸುವುದಾಗಿ ವಂಚನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ ದಾಖಲಾದ ಹಿನ್ನಲೆಯಲ್ಲಿ ಕೆಲದಿನಗಳಲ್ಲಿಯೇ ಸಂತ್ರಸ್ತ ಯುವತಿಯು ಖುದ್ದು ಎಸ್‌ಐಟಿ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾಳೆ ಎನ್ನಲಾಗಿದೆ.


ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...