Homeಕರ್ನಾಟಕಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

ಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಕಳೆದ ವಾರ ಮಾಧ್ಯಮಗಳಲ್ಲಿ ಪ್ರಸಾರಗೊಂಡು ರಾಜ್ಯ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಡಿ ಪ್ರಕರಣವನ್ನು ಷಡ್ಯಂತ್ರ ಎಂದು ಕರೆದಿರುವ ರಾಜ್ಯ ಸರ್ಕಾರ, ಸಿಡಿ ಮಾಡಿದ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

’ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಕರಣದ ಹಿಂದಿರುವ ವ್ಯಕ್ತಿಗಳು ಯಾರು, ಅವರ ಉದ್ದೇಶಗಳೇನು, ಸಿಡಿ ಎಲ್ಲಿ ತಯಾರಾಗಿದೆ? ವೆಬ್‌ಸೈಟ್‌ಗಳಿಗೆ ಎಲ್ಲಿಂದ ಸಿಡಿ ಅಪ್‌ಲೋಡ್ ಆಗಿದೆ ಎಂಬ ಬಗ್ಗೆ ಈ ವಿಶೇಷ ತನಿಖಾ ತಂಡ ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಹಲವರು ಸೇರಿ ತಮ್ಮ ವಿರುದ್ಧ ಷಡ್ಯಂತ್ರ ರಚಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ ಎಂದಿದ್ದಾರೆ.

ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ಕರೆದಿದ್ದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದರು. ಜೊತೆಗೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಸಿಡಿ 100 ರಷ್ಟು ನಕಲಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದ ಜನ, ನನ್ನನ್ನು ಎದುರಿಸಲಾಗದವರು ಈ ಕೆಲಸ ಮಾಡಿದ್ದಾರೆ.  ನಾನು ನಿರಪರಾಧಿ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು.

ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಸಿಡಿ ನಕಲಿ ಎಂದು ಹೇಳಿ ಈಗ ಎಸ್‌ಐಟಿ ತನಿಖೆ ಯಾಕೆ ಎಂದು ಹಲವರು ಪ್ರಶ್ನಿಸಿದ್ದಾರೆ. ಮಾಜಿ ಸಚಿವರೇ ತನಗೆ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಯಾರು ಶತ್ರುಗಳಿಲ್ಲ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್, ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಮೇಶ್ ಜಾರಕಿಹೊಳಿಯವರ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಕಳೆದೆರಡು ದಿನಗಳ ಹಿಂದೆ ದೂರ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.

ರಾಜ್ಯ ರಾಜಕಾರಣದಲ್ಲಿ ಸಿಡಿ ಎಂಬ ಪದವೇ ಹೆಚ್ಚು ಓಡಾಡುತ್ತಿದೆ. ಹಲವು ರಾಜಕಾರಣಿಗಳ ಸಿಡಿಗಳು ಹೊರಬರಲಿವೆ ಎಂಬ ಮಾತುಗಳು ಹರಿದಾಡುತ್ತಿವೆ. ಆರು ಮಂದಿ ಸಚಿವರು ಈಗಾಗಲೇ ಮಾಧ್ಯಮಗಳಲ್ಲಿ ಸಿಡಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆ ತಂದಿವೆ.


ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...