Homeಕರ್ನಾಟಕಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯ ಬಂಧನ ಇನ್ನೂ ಆಗಿಲ್ಲ

- Advertisement -
- Advertisement -

ರಾಜ್ಯ ರಾಜಕಾರಣವನ್ನು ಅಲ್ಲೋಲ ಕಲ್ಲೋಲ ಮಾಡಿದ್ದ ಲೈಂಗಿಕ ಹಗರಣದಲ್ಲಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ದ ಅತ್ಯಾಚಾರ ಆರೋಪ ಹೊರಿಸಿದ್ದ ಸಂತ್ರಸ್ತೆ ಯುವತಿಗೆ ಬಂಧನದ ಭೀತಿ ಎದುರಾಗಿದೆ. ಯುವತಿಯ ವಿರುದ್ದ ರಮೇಶ್‌ ಜಾರಕಿಹೊಳಿ ದೂರು ನೀಡಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಯುವತಿಯ ಪರ ವಕೀಲರು ಹೈಕೋಟ್‌ಗೆ ಹೇಳಿಕೆ ನೀಡಿದ್ದಾರೆ.

ರಮೇಶ್‌ ಜಾರಕಿಹೊಳಿ ವಿರುದ್ದ ಕೂಡಾ ಸಂತ್ರಸ್ತ ಯುವತಿ ದೂರು ನೀಡಿದ್ದರು. ಅತ್ಯಾಚಾರದ ಆರೋಪ ಹೊರಿಸಿದ್ದರು. ಪೊಲೀಸರು ಅವರನ್ನು ಇದುವರೆಗೂ ಬಂಧಿಸಿಲ್ಲ. ಆದರೆ, ಜಾರಕಿಹೊಳಿ ನೀಡಿದ ದೂರಿನಂತೆ ಯುವತಿಯನ್ನು ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಯುವತಿಯನ್ನು ಬಂಧಿಸದಂತೆ ಎಸ್‌ಐಟಿ ಪೊಲೀಸರಿಗೆ ನಿರ್ದೇಶಿಸುವಂತೆ ಹೈಕೋರ್ಟ್‌ಗೆ ಯುವತಿ ಪರ ವಕೀಲರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ ಪರಿಷತ್

ಯುವತಿಯ ಪರವಾಗಿ ವಕೀಲರು, ಸಿಆರ್‌ಪಿಸಿ 482 ರದ್ದು ಮಾಡುವಂತೆ ಹೈಕೋರ್ಟ್‌‌ಗೆ ಕೋರಿದ್ದರು. ಆದರೆ ಸಿಆರ್‌ಪಿಸಿ 482 ಅಡಿ ಬಂಧಿಸದಂತೆ ಸೂಚಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಬಂಧಿಸದಂತೆ ಇರಲು ಪ್ರತ್ಯೆಕವಾಗಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಲಿ ಎಂದು ಹೈಕೋರ್ಟ್ ನ್ಯಾಯಮೂರ್ತಿ‌‌ ಸುನೀಲ್ ದತ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲೆ ಇಂದಿರಾ ಜೈಸಿಂಗ್‌ ಅವರು ಸಂತ್ರಸ್ತೆ ಯುವತಿಯ ಪರ ವಕಾಲತು ನಡೆಸಲು ಒಪ್ಪಿಕೊಂಡಿದ್ದಾರೆ. ಇನ್ನೊಂದು ಕಡೆ ಮಾಜಿ ಸಚಿವ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಮುಗಿಸಲು ಮತ್ತು ತನಗೆ ಸಚಿವ ಸ್ಥಾನ ಕೊಡಿಸುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಫಡ್ನವಿಸ್ ಕರ್ನಾಟಕ ರಾಜಕೀಯದಲ್ಲಿ ತಾನು ತಲೆ ಹಾಕುವುದಿಲ್ಲ ಆದರೆ ತಮ್ಮ ಬೇಡಿಕೆಯನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ಪ್ರಕರಣ ಬೆಳಕಿಗೆ ಬಂದಿದ್ದ ಸಮಯದಲ್ಲಿ ವಿಡಿಯೊದಲ್ಲಿ ಇರುವುದು ತಾನಲ್ಲ ಎಂದು ಹೇಳಿದ್ದ ಜಾರಕಿಹೊಳಿ, ಇತ್ತೀಚೆಗೆ ಎಸ್‌ಐಟಿ ಮುಂದೆ ವಿಡಿಯೊದಲ್ಲಿ ಇರುವುದು ತಾನೆ ಎಂದು ಒಪ್ಪಿಕೊಂಡಿದ್ದರು. ಆದರೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಆರೋಪಿ ಜಾರಕಿಹೊಳಿಯನ್ನು ಇದುವರೆಗೂ ಬಂಧಿಸಿಲ್ಲ. ಇದು ಸಂತ್ರಸ್ತೆ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದರು.

ಪ್ರಕರಣದ ಕುರಿತು ಕಾನೂನು ತಜ್ಞರು, “ಪ್ರಕರಣದ ತನಿಖೆ ಮುಂದುವರೆಯಬೇಕಾದರೆ, ಅತ್ಯಾಚಾರ ಆರೋಪಿಯ ವೈದ್ಯಕೀಯ ಸಾಕ್ಷ್ಯಗಳನ್ನು ಸಂಗ್ರಹಿಸುವ ಹಾಗೂ ಅತ್ಯಾಚಾರ ಆರೋಪಿಯ ಗಂಡಸುತನದ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಆಗಲೇಬೇಕಿದೆ. ಈ ಕಾರಣದಿಂದ ತನಿಖಾಧಿಕಾರಿಯು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯರ ಮುಂದೆ ಹಾಜರು ಪಡಿಸಬೇಕಿರುತ್ತದೆ. ಆದರೆ ಪ್ರಕರಣವು ರಾಜ್ಯದ ಪ್ರಭಾವಿ ರಾಜಕೀಯ ನಾಯಕನ ವಿರುದ್ದವೇ ಇರುವುದರಿಂದ ಈ ಪ್ರಕ್ರಿಯೆ ನಡೆಯುತ್ತಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: ಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...