ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇರಾನ್ ತಕ್ಷಣವೇ ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸಬೇಕು ಮತ್ತು ಅಮೆರಿಕ ಹಾಗೂ ಇಸ್ರೇಲ್ ಮೇಲೆ ನಡೆಸುತ್ತಿರುವ ಎಲ್ಲಾ ದಾಳಿಗಳನ್ನು ನಿಲ್ಲಿಸಬೇಕು ಎಂಬ ಷರತ್ತಿನ ಮೇಲೆ ಇಸ್ರೇಲ್ ಈ ನಿರ್ಧಾರವನ್ನು ಬೆಂಬಲಿಸಿದೆ.
ಪಾಕಿಸ್ತಾನದ ಪ್ರಧಾನಿ ಕದನ ವಿರಾಮವು ಲೆಬನಾನ್‌ಗೂ ಅನ್ವಯಿಸುತ್ತದೆ ಎಂದು ಹೇಳಿದ್ದರೂ, ನೆತನ್ಯಾಹು ಕಚೇರಿ ಇದನ್ನು ನಿರಾಕರಿಸಿದೆ. ಲೆಬನಾನ್‌ನಲ್ಲಿರುವ ಇರಾನ್ ಬೆಂಬಲಿತ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಲಿದೆ ಎಂದು ತಿಳಿಸಲಾಗಿದೆ.
ಇರಾನ್‌ನ ಪರಮಾಣು ಮತ್ತು ಕ್ಷಿಪಣಿ ಬೆದರಿಕೆಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಮೆರಿಕದ ಪ್ರಯತ್ನಗಳಿಗೆ ಇಸ್ರೇಲ್ ಸಾಥ್ ನೀಡಲಿದೆ ಎಂದು ಹೇಳಲಾಗಿದೆ.
ಕದನ ವಿರಾಮದ ಘೋಷಣೆಯ ಹೊರತಾಗಿಯೂ, ಇಸ್ರೇಲ್ ತನ್ನ ಉತ್ತರ ಗಡಿಯಲ್ಲಿನ ಭದ್ರತೆಯ ದೃಷ್ಟಿಯಿಂದ ಲೆಬನಾನ್ ಮೇಲಿನ ದಾಳಿಗಳನ್ನು ನಿಲ್ಲಿಸುವ ಯಾವುದೇ ಸೂಚನೆ ನೀಡಿಲ್ಲ.


