Homeಅಂತರಾಷ್ಟ್ರೀಯಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ...

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ.

ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ.

ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೆ (ಅ.21) ಕನಿಷ್ಠ 97 ರಿಂದ 100 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಸಾವೀಗೀಡಾದವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿದು ಅಮಾಯಕರ ಹತ್ಯೆ ಮಾಡುತ್ತಿದ್ದರೂ, ಅಮೆರಿಕ ಹಮಾಸ್‌ನತ್ತ ಕೈ ತೋರಿಸುತ್ತಿದೆ. “ಹಮಾಸ್‌ ಅನ್ನು ನಿರ್ಣಾಮ ಮಾಡುತ್ತೇವೆ, ನರಕ ತೋರಿಸುತ್ತೇವೆ” ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಹಮಾಸ್ ಜೀವಂತ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 2 ಸಾವಿರ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡಬೇಕಿತ್ತು.

ವರದಿಗಳ ಪ್ರಕಾರ, ಇಸ್ರೇಲ್ ಸುಮಾರು 1, 950ರಷ್ಟು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ. ಆದರೆ, ಅವರಲ್ಲಿ ಕೆಲವರನ್ನು ಬೇರೆ ಬೇರೆ ದೇಶಗಳಲ್ಲಿ ಕರೆದೊಯ್ದು ಬಿಡುವ ಮೂಲಕ ಅಮಾನವೀಯ ಕೃತ್ಯವೆಸಗಿದ ಆರೋಪವಿದೆ.

ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಆರೋಗ್ಯವಂತರಾಗಿದ್ದರೆ, ಇಸ್ರೇಲ್ ಬಿಡುಗಡೆ ಮಾಡಿದ ಪ್ಯಾಲೆಸ್ತೀನಿಯರ ಪರಿಸ್ಥಿತಿ ಶೋಚಣೀಯವಾಗಿದೆ. ಇಸ್ರೇಲಿ ಬಂಧಿಖಾನೆಗಳಲ್ಲಿ ಅವರು ತೀವ್ರ ಹಿಂಸೆಗೆ ಒಳಗಾಗಿರುವುದನ್ನು ಅವರ ದೇಹದ ಸ್ಥಿತಿ ತೋರಿಸುತ್ತಿದೆ ಎಂದು ಹಲವಾರು ವರದಿಗಳು ಹೇಳಿವೆ.

ಹಮಾಸ್ 28 ಮೃತ ಒತ್ತೆಯಾಳುಗಳ ಪೈಕಿ, ಬಹುತೇಕರ ದೇಹಗಳನ್ನು ಇಸ್ರೇಲ್‌ಗೆ ಹಸ್ತಾಂತರಿಸಿದೆ. ಈ ನಡುವೆ ಹಮಾಸ್ ಮೃತದೇಹ ಹಸ್ತಾಂತರಿಸಲು ವಿಳಂಬ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ಇಡೀ ಗಾಝಾ ಪಟ್ಟಿಯನ್ನು ನಾಶ ಮಾಡಿರುವ ಪರಿಣಾಮ ಮೃತದೇಹಗಳ ಹಸ್ತಾಂತರಕ್ಕೆ ಅಡೆತಡೆಗಳು ಉಂಟಾಗಿವೆ ಎಂದಿದೆ.

ಇನ್ನು, ಇಸ್ರೇಲ್ ಕದನ ವಿರಾಮ ಮುರಿದು ಈಗಾಗಲೇ ದಾಳಿ ಆರಂಭಿಸಿರುವ ಹಿನ್ನೆಲೆ, ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದರೆ ಅಮೆರಿಕ ಮತ್ತು ಇಸ್ರೇಲ್ ಸೇರಿಕೊಂಡು ಮಾತು ಬದಲಿಸುವ ಆತಂಕವನ್ನು ಹಮಾಸ್ ವ್ಯಕ್ತಪಡಿಸಿದೆ. ಇವೆಲ್ಲದರ ಪರಿಣಾಮ ಗಾಝಾದ ಅಮಾಯಕರ ನಾಗರಿಕರು ನರಳುವಂತಾಗಿದೆ.

ಇಸ್ರೇಲ್-ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದವನ್ನು ಮತ್ತೆ ಹಳಿಗೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ವರದಿಗಳು ಹೇಳಿವೆ.

ಈ ನಡುವೆ ಸೋಮವಾರ ಪೂರ್ವ ಗಾಝಾ ನಗರದ ತುಫಾ ಸಮೀಪದ ಅಲ್-ಶಾಫ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಎರಡೂ ಬಾರಿಯೂ ಅಮಾಯಕರ ಜನರು ತಮ್ಮ ಮನೆಗಳನ್ನು ಪರಿಶೀಲಿಸಲು ವಾಪಾಸ್ ಬಂದಾಗ ಇಸ್ರೇಲ್ ಗುಂಡಿನ ದಾಳಿ ಮಾಡಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಹಳದಿ ಗಡಿ ರೇಖೆ ಅಥವಾ ಯೆಲ್ಲೋ ಲೇನ್ ದಾಟಿ ತುಫಾಹ್‌ಗೆ ಹೊಂದಿಕೊಂಡಿರುವ ಶುಜಾಯೆಯಾ ಸಮೀಪ ಸೈನಿಕರನ್ನು ಸಮೀಪಿಸಿದ ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲ್ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 4ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ನಕ್ಷೆಯಲ್ಲಿ ಸೂಚಿಸಲಾದ ಹಳದಿ ರೇಖೆಯು, ಇಸ್ರೇಲಿ ಪಡೆಗಳು ಹಿಂದೆ ಸರಿದು ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ನೆಲೆಗೊಂಡಿರುವ ಗಡಿಯಾಗಿದೆ.

ಗಾಝಾ ನಗರದ ನಿವಾಸಿಗಳು ಈ ಹಳದಿ ಗಡಿ ರೇಖೆಯ ಬಗ್ಗೆ ಗೊಂದಲ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಕಣ್ಣಿಗೆ ಗೋಚರಿಸುವ ಯಾವುದೇ ಗಡಿ ರೇಖೆ ಗುರುತುಗಳಿಲ್ಲ. ಇಡೀ ಪ್ರದೇಶ ಹಾಳಾಗಿದೆ. ಹೀಗಿರುವಾಗ ಗಡಿರೇಖೆ ಎಲ್ಲಿದೆ ಎಂದು ನಮಗೆ ಗೊತ್ತಿಲ್ಲ” ಗಾಝಾ ನಗರದ ಪೂರ್ವದಲ್ಲಿರುವ ತುಫಾದಲ್ಲಿ ವಾಸಿಸುವ 50 ವರ್ಷದ ಸಮೀರ್ ಹೇಳಿದ್ದಾರೆ ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...