Homeಮುಖಪುಟಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಒಂದು ದಿನದ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ. ಕದನ ವಿರಾಮದ

ಮೇ 10 ರಂದು ಬರೆದ ತಮ್ಮ ಪತ್ರದಲ್ಲಿ, ಹಿರಿಯ ಕಾಂಗ್ರೆಸ್ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಭಯೋತ್ಪಾದನೆಯ ವಿರುದ್ಧ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕೆಂಬ ವಿರೋಧ ಪಕ್ಷದ ಸರ್ವಾನುಮತದ ವಿನಂತಿಯನ್ನು ಪುನರುಚ್ಚರಿಸಿದ್ದಾರೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸುವುದು ಪ್ರಮುಖವಾಗಿದೆ. ಮುಂಬರುವ ಸವಾಲುಗಳನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಇದು ಒಂದು ಅವಕಾಶವಾಗಿದೆ” ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 28 ರಂದು ಪ್ರಧಾನಿಯವರನ್ನು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ವಿನಂತಿಸಿ ಬರೆದ ತನ್ನ ಮತ್ತು ರಾಹುಲ್ ಗಾಂಧಿಯವರ ಪತ್ರಗಳನ್ನು ನೆನಪಿಸಿಕೊಂಡಿದ್ದಾರೆ. “ರಾಜ್ಯಸಭೆಯಲ್ಲಿ ವಿಪಕ್ಷ ನಾಯಕನಾಗಿ, ನಾನು ಈ ವಿನಂತಿಯನ್ನು ಬೆಂಬಲಿಸಿ ಬರೆಯುತ್ತಿದ್ದೇನೆ. ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದಕ್ಕೂ ಮೊದಲು, ಕಾಶ್ಮೀರ ಸಮಸ್ಯೆಯನ್ನು ಅಂತರರಾಷ್ಟ್ರೀಯೀಕರಣಗೊಳಿಸುವ ಪ್ರಯತ್ನಗಳನ್ನು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತೀವ್ರವಾಗಿ ಆಕ್ಷೇಪಿಸಿದ್ದಾರೆ. ವಿಶೇಷ ಸಂಸತ್ತಿನ ಅಧಿವೇಶನ ಮತ್ತು ಸರ್ವಪಕ್ಷ ಸಭೆಗಾಗಿ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರುವ ಅವರು, ಭಾರತ ಮತ್ತು ಪಾಕಿಸ್ತಾನಗಳು ಅದನ್ನು ಘೋಷಿಸುವ ಮೊದಲೆ ಸರ್ಕಾರವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸಿ ಅದನ್ನು ಘೋಷಿಸಿರುವ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಸಮಸ್ಯೆಯು ದ್ವಿಪಕ್ಷೀಯ ವಿಷಯವಾಗಿದ್ದು, ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಸ್ವೀಕಾರಾರ್ಹವಲ್ಲ ಎಂದು ಸಚಿನ್ ಪೈಲಟ್ ಹೇಳಿದ್ದಾರೆ. ಜೊತೆಗೆ ಎರಡೂ ದೇಶಗಳು ತಟಸ್ಥ ಸ್ಥಳದಲ್ಲಿ ಸಭೆ ಸೇರುತ್ತವೆ ಎಂಬ ಅಮೆರಿಕದ ಅಧಿಕಾರಿಗಳ ಹೇಳಿಕೆಯನ್ನು ಅವರು ಸಹ ಪ್ರಶ್ನಿಸಿದ್ದಾರೆ. ಕದನ ವಿರಾಮದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...