Homeಮುಖಪುಟಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಆ ಟ್ವೀಟ್‌ಗಳಲ್ಲಿ ಯಾವುದೇ ಪದಗಳ ವ್ಯತ್ಯಾಸವಿರಲಿಲ್ಲ. ಎಲ್ಲರ ವಾಕ್ಯಗಳು ಒಂದೇ ರೀತಿ ಇದ್ದವು. ಒಂದೇ ಸಮಯದಲ್ಲಿ ಟ್ವೀಟ್ ಮಾಡಲಾಗಿದೆ. ಇದು ಗಂಭೀರ ವಿಷಯ - ಅನಿಲ್ ದೇಶ್ಮುಖ್

- Advertisement -
- Advertisement -

ರೈತ ಹೋರಾಟದ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್ ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರದ ಗೃಹ ಮಂತ್ರಿ ಅನಿಲ್ ದೇಶ್ಮುಖ್ ಆದೇಶಿಸಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್‌ ಕೂಡ ರೈತ ಹೋರಾಟ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್, ಅಜಯ್ ದೇವಗನ್ ಸೇರಿ ಹಲವರು ಟ್ವೀಟ್ ಮಾಡಿದ್ದರು.

ಈ ಕುರಿತು ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ “ಈ ಸೆಲೆಬ್ರಿಟಿಗಳು ಈ ರೀತಿ ಒಂದೇ ಥರನಾಗಿ, ಒಂದೇ ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್ ಮಾಡುವಂತೆ ಸರ್ಕಾರ ಅವರ ಮೇಲೆ ಒತ್ತಡ ಹೇರಲಾಗಿತ್ತೆ” ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು. ಮಹಾರಾಷ್ಟ್ರದ ಗೃಹ ಮಂತ್ರಿ ಅನಿಲ್ ದೇಶ್ಮುಖ್ ಕೊರೊನಾ ಸೋಂಕಿನ ಕಾರಣಕ್ಕಾಗಿ ಕ್ವಾರಂಟೈನ್‌ನಲ್ಲಿದ್ದು ಜೂಮ್ ಮೂಲಕ ನಡೆದ ಮಾತುಕತೆಯಲ್ಲಿ ತನಿಖೆಗೆ ಆದೇಶಿಸಿದ್ದಾರೆ.

ನೀವು ಎತ್ತಿರುವ ಆಕ್ಷೇಪಗಳಿಗೆ ನಮ್ಮ ಗುಪ್ತಚರ ಇಲಾಖೆಯ ಮೂಲಕ ತನಿಖೆ ನಡೆಸುತ್ತೇವೆ ಎಂದು ದೇಶ್ಮುಖ್ ಹೇಳಿದ್ದಾರೆ. ಆ ಟ್ವೀಟ್‌ಗಳಲ್ಲಿ ಯಾವುದೇ ಪದಗಳ ವ್ಯತ್ಯಾಸವಿರಲಿಲ್ಲ. ಎಲ್ಲರ ವಾಕ್ಯಗಳು ಒಂದೇ ರೀತಿ ಇದ್ದವು. ಒಂದೇ ಸಮಯದಲ್ಲಿ ಟ್ವೀಟ್ ಮಾಡಲಾಗಿದೆ. ಇದು ಗಂಭೀರ ವಿಷಯ ಎಂದು ಅವರು ಹೇಳಿದ್ದಾರೆ.

ಸಚಿನ್ ಸಾವಂತ್ ಮಾತನಾಡಿ amicable ಎಂಬ ಪದವನ್ನು ಈ ಎಲ್ಲಾ ಸೆಲೆಬ್ರಿಟಿಗಳು ಸಹ ಬಳಸಿದ್ದಾರೆ. ಬಿಜೆಪಿ ಅವರ ಮೇಲೆ ಈ ರೀತಿ ಮಾಡುವಂತೆ ಒತ್ತಡ ಹೇರಿತ್ತೆ? ಅವರೆಲ್ಲರಿಗೂ ಈಗ ರಕ್ಷಣೆ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದರು. ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು‌ ಅವರು ಶನಿವಾರ ದೂರಿದ್ದರು.

ಭಾನುವಾರ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...