Homeಮುಖಪುಟಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಕೇಂದ್ರ - ರೈತ ಹೋರಾಟದ ಬಗ್ಗೆ ಸಂಸತ್ತಿನಲ್ಲಿ 15 ಗಂಟೆ ಚರ್ಚೆಗೆ...

ಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಕೇಂದ್ರ – ರೈತ ಹೋರಾಟದ ಬಗ್ಗೆ ಸಂಸತ್ತಿನಲ್ಲಿ 15 ಗಂಟೆ ಚರ್ಚೆಗೆ ಒಪ್ಪಿಗೆ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ ನಡೆಸುತ್ತಿರುವ ರೈತ ಹೋರಾಟ ತೀವ್ರಗೊಂಡಿದೆ. ರೈತರು ಸರ್ಕಾರದ ಯಾವುದೆ ಬೆದರಿಕೆಗೂ ರೈತರು ಜಗ್ಗುತ್ತಿಲ್ಲ. ಬುಧವಾರ(ಇಂದು) ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಬಗ್ಗೆ ಸತತ 15 ಗಂಟೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವಿಪಕ್ಷಗಳು ಈ ಬೇಡಿಕೆಯನ್ನು ಇಟ್ಟಿದ್ದು, ಇಂದು ಚರ್ಚೆಗೆ ಸರ್ಕಾರ ಅನುಮೋದನೆ ನೀಡಿದೆ.

ಈ ಹಿನ್ನಲೆ, ರಾಜ್ಯಸಭೆಯಲ್ಲಿ ರೈತರ ಪ್ರತಿಭಟನೆ ಬಗ್ಗೆ ಧೀರ್ಘ ಚರ್ಚೆ ನಡೆಯಲಿದ್ದು, ಎರಡು ದಿನಗಳ ಕಾಲ ಪ್ರಶ್ನಾವಳಿ ಅವಧಿ ರದ್ದು ಮಾಡಲಾಗಿದೆ. ಆದರೆ, ಶುಕ್ರವಾರ ಜಂಟಿ ಸಭೆಗೆ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲೆ ಚರ್ಚೆ ನಡೆದ ನಂತರ ರೈತರ ಕುರಿತು ಚರ್ಚೆ ನಡೆಲಿದೆ ಎಂದು ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಘೋಷಿಸಿದ್ದು ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟಿತು.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಹಿಂದೆಯೆ 16 ಕ್ಕೂ ಹೆಚ್ಚು ವಿರೋಧ ಪಕ್ಷಗಳು ರೈತ ಪ್ರತಿಭಟನೆ ಕುರಿತು ಐದು ಗಂಟೆಗಳ ಸ್ವತಂತ್ರ ಚರ್ಚೆಗೆ ಒತ್ತಾಯಿಸಿದ್ದವು. ಸರ್ಕಾರವು ಪ್ರತಿಪಕ್ಷಗಳ ಬೇಡಿಕೆಯನ್ನು ಒಪ್ಪಿದ್ದು, ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಝಾದ್, “ಪ್ರಸ್ತಾಪವನ್ನು ಸರ್ಕಾರ ಒಪ್ಪಿಕೊಂಡಿರುವುದರಿಂದ ನಾವು ಚರ್ಚೆಗೆ ಸಿದ್ಧರಿದ್ದೇವೆ. ಧನ್ಯವಾದ ನಿಲುವಳಿಗೆ ಮೊದಲು ರೈತರ ಬಗ್ಗೆ ಚರ್ಚೆ ನಡೆಯದಿದ್ದರೆ, ಸಮಯವನ್ನು ವಿಸ್ತರಿಸಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...