Homeಮುಖಪುಟಜಮ್ಮು ಕಾಶ್ಮೀರ ಮುಸ್ಲಿಂ ಲೀಗ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ಜಮ್ಮು ಕಾಶ್ಮೀರ ಮುಸ್ಲಿಂ ಲೀಗ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ(ಮಸರತ್ ಆಲಂ ಬಣ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ಈ ಕುರಿತು ಎಕ್ಸ್‌ ಮೂಲಕ ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) (MLJK-MA)ಸಂಘಟನೆಯನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿರುವುದಾಗಿ ಹೇಳಿದ್ದಾರೆ.

“ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದರು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುವ ಮೂಲಕ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು” ಎಂದು ಅಮಿತ್ ಶಾ ತಿಳಿಸಿದ್ದಾರೆ.

“ನಮ್ಮ ರಾಷ್ಟ್ರದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ವರ್ತಿಸುವ ಯಾರೇ ಆಗಲಿ ಬಿಡುವುದಿಲ್ಲ ಎಂಬ ನರೇಂದ್ರ ಮೋದಿ ಸರ್ಕಾರದ ಸಂದೇಶ ಸ್ಪಷ್ಟವಾಗಿದೆ” ಎಂದು ಅಮಿತ್ ಹೇಳಿದ್ದಾರೆ.

“ಪ್ರತ್ಯೇಕ ಅಧಿಸೂಚನೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಜಮ್ಮು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಮುಸ್ಲಿಂ ಲೀಗ್ ಬಯಸಿತ್ತು. ಇದು ಭಾರತದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಅಪಾಯಕಾರಿಯಾಗಿದೆ” ಎಂದು ಹೇಳಿದೆ.

“ಮುಸ್ಲಿಂ ಲೀಗ್ ನಿಷೇಧ ಮಾತ್ರವಲ್ಲದೆ, ಈ ಸಂಘಟನೆಯ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967, ಭಾರತೀಯ ದಂಡ ಸಂಹಿತೆಯ 1860, ದಿ ಆರ್ಮ್ಸ್ ಆಕ್ಟ್ 1959 ಮತ್ತು ರಣಬೀರ್ ದಂಡ ಸಂಹಿತೆ 1932 ರ ವಿವಿಧ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಸಚಿವಾಲಯ ತಿಳಿಸಿದೆ.

ಸರ್ಕಾರವು 2023 ರಲ್ಲಿ ನಾಲ್ಕು ಸಂಘಟನೆಗಳನ್ನು ‘ಭಯೋತ್ಪಾದಕ ಸಂಘಟನೆಗಳು’, ಆರು ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಮತ್ತು ಎರಡು ಸಂಸ್ಥೆಗಳನ್ನು ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಿರುವುದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಭಾರತೀಯ ಕುಸ್ತಿ ಫೆಡರೇಶನ್‌ ಮುನ್ನಡೆಸಲು ತಾತ್ಕಾಲಿಕ ಸಮಿತಿ ರಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...