Homeಮುಖಪುಟಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

- Advertisement -
- Advertisement -

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ.

ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಸುನಾಲಿ ಖಾತುನ್, ಅವರ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.

ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.

ಗಡಿಯಾಚೆಗೆ ತಳ್ಳುವಾಗ ತುಂಬು ಗರ್ಭಿಣಿಯಾಗಿದ್ದ ಕಾರಣ, ಸುನಾಲಿ ಖಾತೂನ್ ಮತ್ತು ಅವರ ಮಗ ಸಾಬಿರ್‌ನನ್ನು ಮಾನವೀಯತೆಯ ಆಧಾರದ ಮೇಲೆ 2025ರ ಡಿಸೆಂಬರ್‌ನಲ್ಲಿ ಮರಳಿ ಭಾರತಕ್ಕೆ ಕರೆತರಲಾಗಿತ್ತು.

ಬುಧವಾರ ಖಾತೂನ್ ಅವರ ಪತಿ ಡ್ಯಾನಿಶ್ ಶೇಖ್, ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಇವರ ಊರಿನವರಾದ ಬೀರ್‌ಭೂಮ್‌ನ ಪೈಕರ್ ಗ್ರಾಮದ ನಿವಾಸಿಸೋಯೆಫ್ ಅಲಿ ತಿಳಿಸಿರುವುದಾಗಿ scroll.in ವರದಿ ಮಾಡಿದೆ.

ನಾಲ್ವರು ಮಾಲ್ಡಾ ಜಿಲ್ಲೆಯ ಮಹಾದಿಪುರ ಗಡಿ ಕ್ರಾಸಿಂಗ್ ಮೂಲಕ ಪಶ್ಚಿಮ ಬಂಗಾಳ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಡಿಯಾಚೆಗೆ ತಳ್ಳಿರುವ ಆರು ಜನರ ಪೈಕಿ ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಈಗಾಗಲೇ ಭಾರತಕ್ಕೆ ಕರೆ ತಂದಿರುವುದರಿಂದ, ಇನ್ನುಳಿದ ನಾಲ್ವರನ್ನು ಭಾರತಕ್ಕೆ ವಾಪಸ್ ಕರೆತಂದು ಅವರ ಪೌರತ್ವವನ್ನು ಮರು ಪರಿಶೀಲಿಸುವುದಾಗಿ ಮೇ 22ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿತ್ತು.

ಆರೂ ಜನರ ಗಡಿಪಾರು ಆದೇಶವನ್ನು ವಜಾಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿತ್ತು.

ಗಡಿಯಾಚೆಗೆ ತಳ್ಳಿದವರನ್ನು ನಾಲ್ಕು ವಾರಗಳ ಒಳಗಾಗಿ ಪಶ್ಚಿಮ ಬಂಗಾಳ ಮರಳಿ ಕರೆತರಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿತ್ತು. ಸುನಾಲಿ ಖಾತೂನ್ ಅವರ ತಂದೆ ಭೋದು ಸೇಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಆದೇಶ ನೀಡಿತ್ತು.

ನಾಲ್ಕು ವಾರಗಳ ಅವಧಿ ಮುಗಿಯಲು ಎರಡು ದಿನಗಳು ಬಾಕಿ ಇರುವಾಗ, ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಹೈಕೋರ್ಟ್‌ಗೆ ವ್ಯಾಪ್ತಿ ಇದೆಯೇ ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಪ್ರಶ್ನಿಸಿದ್ದರು.

ನಾಲ್ವರನ್ನು ಭಾರತಕ್ಕೆ ವಾಪಸ್ ಕರೆ ತಂದಿರುವ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದ ಸಮೀರುಲ್ ಇಸ್ಲಾಂ ಪ್ರತಿಕ್ರಿಯಿಸಿದ್ದು, “ನ್ಯಾಯಾಂಗದ ಮಧ್ಯಸ್ಥಿಕೆಯ ಕಾರಣದಿಂದಾಗಿ ಮಾತ್ರ ಕೇಂದ್ರ ಸರ್ಕಾರ ಕೊನೆಗೂ ಬಡ ಭಾರತೀಯ ನಾಗರಿಕರನ್ನು ಮರಳಿ ಕರೆ ತಂದಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, “ನಿಜವಾಗಿಯೂ ಅಕ್ರಮ ನುಸುಳುಕೋರರಾಗಿರುವವರನ್ನು ಗಡಿಪಾರು ಮಾಡುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ” ಎಂದಿದ್ದಾರೆ. “ನಮ್ಮ ಮೂಲಭೂತ ಪ್ರಶ್ನೆ ಏನೆಂದರೆ: ಗಡಿಪಾರು ಹೆಸರಿನಲ್ಲಿ ಬಡ ಮತ್ತು ನಿಜವಾದ ಭಾರತೀಯ ನಾಗರಿಕರನ್ನು ಏಕೆ ಇಂತಹ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಪಡಿಸಬೇಕು?” ಎಂದು ಇಸ್ಲಾಂ ಪ್ರಶ್ನಿಸಿದ್ದಾರೆ.

ಏಪ್ರಿಲ್ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ವ್ಯಕ್ತಿಗಳನ್ನು, ಹೆಚ್ಚಾಗಿ ಮುಸ್ಲಿಮರನ್ನು ವಶಕ್ಕೆ ಪಡೆಯುತ್ತಿದ್ದಾರೆ ಮತ್ತು ಅವರು ಭಾರತೀಯ ನಾಗರಿಕರು ಎಂಬುದನ್ನು ಸಾಬೀತುಪಡಿಸುವಂತೆ ಒತ್ತಾಯಿಸುತ್ತಿದ್ದಾರೆ.

ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಹಲವಾರು ವ್ಯಕ್ತಿಗಳನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿದೆ. ಈ ಪೈಕಿ ಹಲವು ಮಂದಿಯನ್ನು ತಪ್ಪಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂದು ಇಲ್ಲಿನ ರಾಜ್ಯ ಅಧಿಕಾರಿಗಳು ಸಾಬೀತುಪಡಿಸಿದ ನಂತರ, ಮರಳಿ ಕರೆ ತರಲಾಗಿದೆ.ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...