Homeಮುಖಪುಟಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಕಾಂಗ್ರೆಸ್ ಹೆಸರು ಕೊಡದಿದ್ದರೂ ಶಶಿ ತರೂರ್‌ಗೆ ಸ್ಥಾನ

- Advertisement -
- Advertisement -

ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ.

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ.

“ಸರ್ವಪಕ್ಷ ಸಂದರ ನಿಯೋಗ ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸುವ ದೇಶದ ದೃಢ ನಿರ್ಧಾರವನ್ನು ವಿಶ್ವಕ್ಕೆ ತಿಳಿಸಲಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲಿದೆ” ಎಂದು ಸಚಿವಾಲಯ ಹೇಳಿದೆ.

ವಿವಿಧ ಪಕ್ಷಗಳ ಸಂಸತ್ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಗಣ್ಯ ರಾಜತಾಂತ್ರಿಕರು ನಿಯೋಗದ ಭಾಗವಾಗಿರುತ್ತಾರೆ ಎಂದು ತಿಳಿಸಿದೆ.

ಸರ್ವಪಕ್ಷ ನಿಯೋಗದ ಸದಸ್ಯರ ಹೆಸರು ಹೀಗಿದೆ..

  1. ಶಶಿ ತರೂರ್, ಕಾಂಗ್ರೆಸ್

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡೆ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ಕಾಂಗ್ರೆಸ್ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿಲ್ಲ

ಸರ್ಕಾರ ಬಿಡುಗಡೆ ಮಾಡಿರುವ ಸರ್ವಪಕ್ಷ ನಿಯೋಗದ ಸದಸ್ಯರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರಂಭದಲ್ಲೇ ಇದೆ. ಆದರೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿದೆ ಶಶಿ ತರೂರ್ ಹೆಸರೇ ಇಲ್ಲ.

“ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದ ಮೂಲದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು ಕೇಳಿದ್ದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ನಿನ್ನೆ ಮೇ 16 ರಂದು ಮಧ್ಯಾಹ್ನದ ಹೊತ್ತಿಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದು ಕಾಂಗ್ರೆಸ್ ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

1. ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವ
2.  ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪನಾಯಕ
3. ⁠ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯಸಭೆ ಸಂಸದ
4. ⁠ ರಾಜಾ ಬ್ರಾರ್ ರಾಜ್ಯಸಭೆ ಸಂಸದ

ಜೈರಾಮ್ ರಮೇಶ್ ಅವರ ಪೋಸ್ಟ್‌ನಿಂದ ಕಾಂಗ್ರೆಸ್ ಶಶಿತರೂರ್ ಹೆಸರು ಕಳಿಸದಿದ್ದರೂ ಕೇಂದ್ರ ಸರ್ಕಾರ ನಿಯೋದಲ್ಲಿ ಅವರ ಹೆಸರನ್ನು ಸೇರಿಸಿದೆ. ಕಾಂಗ್ರೆಸ್ ಕಳಿಸಿದ ಒಂದು ಹೆಸರನ್ನೂ ಸ್ವೀಕಾರ ಮಾಡಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಕೇಂದ್ರದ ಮೋದಿ ಸರ್ಕಾರವನ್ನು ಶಶಿ ತರೂರ್ ಹೊಗಳಿರುವುದು ಮತ್ತು ಅದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವುದು ಇಲ್ಲಿ ಗಮನಾರ್ಹ.

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ವಿಭಾಗ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...