Homeಮುಖಪುಟನಿಮಿಷಾ ಪ್ರಿಯಾ ಪ್ರಕರಣ ಎಲ್ಲಿಗೆ ಬಂತು..ಸುಪ್ರೀಂ ಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?

ನಿಮಿಷಾ ಪ್ರಿಯಾ ಪ್ರಕರಣ ಎಲ್ಲಿಗೆ ಬಂತು..ಸುಪ್ರೀಂ ಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?

- Advertisement -
- Advertisement -

ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಕುರಿತು ಕೇಂದ್ರ ಸರ್ಕಾರ ಗುರುವಾರ (ಅ.16) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಪ್ರಕರಣದ ಪ್ರಸ್ತುತ ಸ್ಥಿತಿಯ ಬಗ್ಗೆ ವಿವರಿಸಿದೆ.

ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಪ್ರಸ್ತುತ ತಡೆ ಹಿಡಿಯಲಾಗಿದೆ. ಯಾವುದೇ ಪ್ರತಿಕೂಲ ಬೆಳವಣಿಗೆಗಳು ನಡೆಯುತ್ತಿಲ್ಲ ಎಂದು ಕೇಂದ್ರ ಸರ್ಕಾರದ ಪರ ಭಾರತದ ಅಟಾರ್ನಿ (ಎಜೆ) ಜನರಲ್ ಆರ್. ವೆಂಕಟರಮಣಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ಹೊಸ ಮಧ್ಯಸ್ಥಿಕೆದಾರರು ಆಗಮಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠಕ್ಕೆ ಎಜೆ ಮಾಹಿತಿ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಮರಣದಂಡನೆ ಏನಾಯಿತು?” ಎಂದು ಕೇಳಿದೆ.

ನಿಮಿಷಾ ಪ್ರಿಯಾ ಅವರಿಗೆ ಕಾನೂನು ಬೆಂಬಲ ನೀಡುತ್ತಿರುವ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರು ಕೂಡ, “ಮರಣದಂಡನೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ” ಎಂದು ಖಚಿತಪಡಿಸಿದ್ದಾರೆ. ಹಾಗಾಗಿ, ವಿಚಾರಣೆಯನ್ನು ಮುಂದೂಡಬಹುದು ಎಂದಿದ್ದಾರೆ.

ಈ ವೇಳೆ ಪೀಠವು, ಜನವರಿ 2026ಕ್ಕೆ ಪ್ರಕರಣವನ್ನು ಮುಂದಿನ ವಿಚಾರಣೆಗೆ ಪಟ್ಟಿ ಮಾಡಿ ಎಂದು ಸೂಚಿಸಿದೆ. ಅಲ್ಲದೆ, ಪರಿಸ್ಥಿತಿಗೆ ಅನುಗುಣುವಾಗಿ ಅಗತ್ಯವಿದ್ದರೆ ಪಕ್ಷಕಾರರು ವಿಚಾರಣೆಗೆ ಅರ್ಜಿ ಸಲ್ಲಿಸಲು ಮುಕ್ತರಾಗಿರುತ್ತಾರೆ ಎಂದಿದೆ.

2017ರಲ್ಲಿ ತನ್ನ ಯೆಮೆನ್ ವ್ಯವಹಾರ ಪಾಲುದಾರನನ್ನು ಕೊಲೆ ಮಾಡಿದ ಆರೋಪದಲ್ಲಿ ಮರಣದಂಡನೆ ಘೋಷಣೆಯಾಗಿರುವ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ಆಗಸ್ಟ್ 14ರಂದು, ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ವಕೀಲರು ಪ್ರಿಯಾಗೆ “ತಕ್ಷಣಕ್ಕೆ ಯಾವುದೇ ಅಪಾಯ ಇಲ್ಲ” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಜುಲೈ 16ರಂದು ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ತಡೆಹಿಡಿಯಲಾಗಿದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿತ್ತು. ಜುಲೈ 18 ರಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು, ಪ್ರಿಯಾ ಅವರನ್ನು ಸುರಕ್ಷಿತವಾಗಿ ಜೈಲಿನಿಂದ ಹೊರ ತರಲು ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ ಎಂದು ಹೇಳಿತ್ತು.

ಪ್ರಿಯಾ ಅವರ ತಾಯಿ ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸಲು ಯೆಮೆನ್‌ಗೆ ತೆರಳಿದ್ದಾರೆ. ಅವರಿಗೆ ಅಲ್ಲಿಗೆ ಪ್ರಯಾಣಿಸಲು ಅನುಮತಿ ನೀಡುವಂತೆ ದೆಹಲಿ ಹೈಕೋರ್ಟ್ ಸೂಚಿಸಿದ್ದರಿಂದ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಘಟನೆಯವರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಜುಲೈ 16ರಂದು ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆ ಭಾರತದ ಗ್ರ್ಯಾಂಡ್‌ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದಿಂದ ಮುಂದೂಡಿಕೆಯಾಗಿದೆ. ಆ ಬಳಿಕವಷ್ಟೇ ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ಹೇಳಿಕೆ ನೀಡಲು ಪ್ರಾರಂಭಿಸಿದೆ. ಇದಕ್ಕೂ ಮುನ್ನ ಜುಲೈ 14ರಂದು “ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ” ಎಂದು ಕೇಂದ್ರ ಸರ್ಕಾರ ಕೈ ತೊಳೆದುಕೊಂಡಿತ್ತು.

ಸಿಜೆಐ ಮೇಲೆ ದಾಳಿ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...