Homeಮುಖಪುಟಹಳ್ಳಿ ಜನರ ಪ್ರತಿಭಟನೆಗೆ ಬೆದರಿದ ಕೇಂದ್ರ : ಮಹತ್ವದ ಖನಿಜ ಗಣಿ ಹರಾಜು ರದ್ದು

ಹಳ್ಳಿ ಜನರ ಪ್ರತಿಭಟನೆಗೆ ಬೆದರಿದ ಕೇಂದ್ರ : ಮಹತ್ವದ ಖನಿಜ ಗಣಿ ಹರಾಜು ರದ್ದು

- Advertisement -
- Advertisement -

ಗ್ರಾಮಸ್ಥರ ತೀವ್ರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ತಮಿಳುನಾಡಿನ ನಾಯಕರಪಟ್ಟಿಯ ಟಂಗ್‌ಸ್ಟನ್ ಖನಿಜ ಗಣಿ ಹರಾಜು ರದ್ದುಗೊಳಿಸಲು ನಿರ್ಧರಿಸಿದೆ.

ಮಧುರೈ ಬಳಿಯ ನಾಯಕರಪಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ಟಂಗ್‌ಸ್ಟನ್ ಖನಿಜ ಗಣಿಗಾರಿಕೆ ನಡೆಸುವ ಹಕ್ಕನ್ನು ಕೇಂದ್ರ ಸರ್ಕಾರವು ನವೆಂಬರ್ 2024 ರಲ್ಲಿ ಹಿಂದೂಸ್ತಾನ್ ಝಿಂಕ್ ಲಿಮಿಟೆಡ್‌ಗೆ ನೀಡಿತ್ತು.

ಆದರೆ, ಗಣಿಗಾರಿಕೆಗೆ ಗುರುತಿಸಿದ್ದ ಪ್ರದೇಶವನ್ನು 2022ರಲ್ಲಿ ಜೀವವೈವಿಧ್ಯ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಅಲ್ಲದೆ, ಈ ಪ್ರದೇಶ ಹಲವಾರು ಅಪರೂಪದ ಸಸ್ಯ ಮತ್ತು ಪ್ರಾಣಿಗಳು, ಗುಹಾ ದೇವಾಲಯಗಳು, ಜೈನ ದೇವಾಲಯಗಳು, ತಮಿಳು-ಬ್ರಾಹ್ಮಿ ಶಾಸನಗಳು ಮತ್ತು ಪಂಚಪಾಂಡವರ ಕಲ್ಲಿನ ಹಾಸಿಗೆಗಳನ್ನು ಒಳಗೊಂಡಿದೆ.

ಜನವರಿ 23, 2025ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ, “ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಅವರು ಜನವರಿ 22ರಂದು ಬುಧವಾರ ನವದೆಹಲಿಯಲ್ಲಿ ಮಧುರೈನ ಅಂಬಲಕರರನ್ನು (ಸಾಂಪ್ರದಾಯಿಕ ಸಮುದಾಯದ ಮುಖಂಡರು) ಭೇಟಿಯಾಗಿದ್ದಾರೆ. ಈ ವೇಳೆ, ಖನಿಜ ಗಣಿಗಾರಿಕೆಗಾಗಿ ಗುರುತಿಸಲಾದ ಪ್ರದೇಶದಲ್ಲಿ ಅರಿಟ್ಟಪಟ್ಟಿ ಜೀವವೈವಿಧ್ಯ ಪರಂಪರೆಯ ತಾಣ ಮತ್ತು ಹಲವಾರು ಸಾಂಸ್ಕೃತಿಕ ಪರಂಪರೆಯ ತಾಣಗಳು ಸೇರಿರುವುದರಿಂದ ಹರಾಜನ್ನು ರದ್ದುಗೊಳಿಸಬೇಕೆಂದು ಸಮುದಾಯದ ಸದಸ್ಯರು ಒತ್ತಾಯಿಸಿದ್ದಾರೆ ಎಂದು ಹೇಳಿದೆ.

ಮುಂದುವರಿದು, “ವಿವರವಾದ ಚರ್ಚೆಗಳ ನಂತರ, ಈ ಪ್ರದೇಶದ ಜೀವವೈವಿಧ್ಯ ಪರಂಪರೆಯ ತಾಣದ ಪ್ರಾಮುಖ್ಯತೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಸರ್ಕಾರದ ಸಾಂಪ್ರದಾಯಿಕ ಹಕ್ಕುಗಳನ್ನು ರಕ್ಷಿಸುವ ಬದ್ಧತೆಯನ್ನು ಪರಿಗಣಿಸಿ, ನಾಯಕರಪಟ್ಟಿ ಟಂಗ್‌ಸ್ಟನ್ ಖನಿಜ ಗಣಿ ಹರಾಜನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಕೂಡ, ಜನವರಿ 7ರಂದು ಚೆನ್ನೈ ಮತ್ತು ಮಧುರೈ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲೂರಿನಿಂದ ತಲ್ಲಕುಳಂವರೆಗೆ ಸಾವಿರಾರು ಗ್ರಾಮಸ್ಥರು ಮತ್ತು ರೈತರು ರ್‍ಯಾಲಿ ನಡೆಸಿ ಗಣಿಗಾರಿಕೆಯನ್ನು ವಿರೋಧಿಸಿದ್ದರು.

ಕೇಂದ್ರ ಸರ್ಕಾರ ಗಣಿಗಾರಿಕೆಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 2024ರ ಡಿಸೆಂಬರ್ 9ರಂದು ತಮಿಳುನಾಡು ವಿಧಾನಸಭೆಯು ನಿರ್ಣಯ ಅಂಗೀಕರಿಸಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗ್ರಾಮಸ್ಥರ ಕಳವಳವನ್ನು ವಿವರಿಸಿದ್ದರು.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...