Homeಮುಖಪುಟಮನರೇಗಾ ಬಾಕಿ ಹಣ ಕೊಡದ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಪ್ರತಿಭಟನೆ

ಮನರೇಗಾ ಬಾಕಿ ಹಣ ಕೊಡದ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಪ್ರತಿಭಟನೆ

- Advertisement -
- Advertisement -

ರಾಜ್ಯಕ್ಕೆ ನೀಡಬೇಕಾದ ‘ಮನರೇಗಾ’ ಬಾಕಿಯನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವುದನ್ನು ವಿರೋಧಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರದಿಂದ ಕಲ್ಕತ್ತಾದಲ್ಲಿ ಧರಣಿ ನಡೆಸಲಿದ್ದಾರೆ.

‘ಪ್ರಜಾಪ್ರಭುತ್ವದಲ್ಲಿ ಜನರು ಒಗ್ಗೂಡಿದಾಗ, ಬಹುಮತದ ಸರ್ಕಾರವೂ ಸಹ ಪಶ್ಚಾತ್ತಾಪ ಪಡಬೇಕಾಗುತ್ತದೆ. ಮನರೇಗಾ ದಿವಸದಂದು ನಾವು ವಂಚಿತ ಫಲಾನುಭವಿಗಳೊಂದಿಗೆ ಒಗ್ಗಟ್ಟಿನಿಂದ ಒಂದಾಗುತ್ತೇವೆ, ನಮ್ಮ ದೃಢವಾದ ಧರಣಿಯ ಮೂಲಕ ಅನ್ಯಾಯವನ್ನು ಕಟುವಾಗಿ ವಿರೋಧಿಸುತ್ತೇವೆ’ ಎಂದು ಟಿಎಂಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ’ (MGNREGA) ಅಡಿಯಲ್ಲಿ ಕೇಂದ್ರವು ಬಾಕಿಯನ್ನು ತಡೆಹಿಡಿದಿರುವ ವಿಷಯವು ರಾಜ್ಯ ಮತ್ತು ಕೇಂದ್ರದ ನಡುವೆ ವಿವಾದಕ್ಕೆ ಕಾರಣವಾಗಿದೆ.

‘ಇಂದು ಮಧ್ಯಾಹ್ನದಿಂದ ರೆಡ್ ರೋಡ್ ಪ್ರದೇಶ ಮೈದಾನದಲ್ಲಿ ಧರಣಿ ಆರಂಭವಾಗಲಿದೆ. ನಮ್ಮ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂದೋಲನದ ನೇತೃತ್ವ ವಹಿಸಲಿದ್ದಾರೆ. ಪಕ್ಷದ ಇತರ ಹಿರಿಯ ನಾಯಕರು ಸಹ ಉಪಸ್ಥಿತರಿರುತ್ತಾರೆ’ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಪಕ್ಷದ ಶಾಸಕರು, ಸಂಸದರು, ಸಚಿವರು ಮತ್ತು ಎಂಜಿಎನ್ಆರ್ಇಜಿಎ ಕಾರ್ಯಕರ್ತರ ಸಮೂಹದೊಂದಿಗೆ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಹಾಗೂ ಕಲ್ಕತ್ತಾದ ರಾಜಭವನದ ಹೊರಗೆ ಐದು ದಿನಗಳ ಧರಣಿಯು ನಡೆಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ 2005, ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಯ ಕೂಲಿ ಉದ್ಯೋಗವನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿನ ಕುಟುಂಬಗಳ ಜೀವನೋಪಾಯದ ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಟಿಎಂಸಿ ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆಗೆ ಮುನ್ನ ಈ ವಿಷಯದ ಕುರಿತು ಮೂರನೇ ಪ್ರಮುಖ ಧರಣಿಯನ್ನು ಆರಂಭಿಸಲಾಗಿದೆ. ಹಿಂದಿನ ವರ್ಷದ ಮಾರ್ಚ್ನಲ್ಲಿ ಬ್ಯಾನರ್ಜಿಯವರ ನೇತೃತ್ವದಲ್ಲಿ ಇದೇ ರೀತಿಯ ಎರಡು ದಿನಗಳ ಧರಣಿ, ಹಾಗೆಯೇ ನವದೆಹಲಿಯಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಆಂದೋಲನ ಮತ್ತು ಕೋಲ್ಕತ್ತಾದ ರಾಜಭವನದ ಹೊರಗೆ ನಂತರದ ಧರಣಿಯ ನಡೆಸಲಾಗುತ್ತಿದೆ.

ಇದನ್ನೂ ಓದಿ; ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂಪೈ ಸೊರೇನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

0
ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದ ಕಾರಣಕ್ಕೆ ಬಿಜೆಪಿ...