Homeಮುಖಪುಟಡಿಜಿಟಲ್ ದತ್ತಾಂಶ ರಕ್ಷಣೆ : ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

ಡಿಜಿಟಲ್ ದತ್ತಾಂಶ ರಕ್ಷಣೆ : ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕುರಿತ ಕರಡು ನಿಯಮಾವಳಿಗಳನ್ನು (ಡಿಪಿಡಿಪಿ) ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಶುಕ್ರವಾರ (ಜ.3) ಬಿಡುಗಡೆ ಮಾಡಿದೆ.

ಕರಡು ನಿಯಮಾವಳಿ ಕುರಿತು MyGov ಪೋರ್ಟಲ್ ಮೂಲಕ ಫೆಬ್ರವರಿ 18 ರವರೆಗೆ ಸಾರ್ವಜನಿಕರು ಸಲಹೆ, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ 2023ರ ಸೆಕ್ಷನ್ 40ರ ಸಬ್‌ ಸೆಕ್ಷನ್‌ (1) ಮತ್ತು (2) ಅಡಿ ನೀಡಿರುವ ಅಧಿಕಾರ ಚಲಾಯಿಸುವುದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು ಈ ನಿಯಮಾವಳಿಗಳನ್ನು ರೂಪಿಸಿದೆ.

ಕರಡು ನಿಯಮಾವಳಿಗಳಲ್ಲಿ ಮಕ್ಕಳ ವೈಯಕ್ತಿಕ ಮಾಹಿತಿ ಸೇರಿದಂತೆ ದತ್ತಾಂಶ ರಕ್ಷಣೆ ಸಂಬಂಧ ಮುಂದೆ ಜಾರಿಯಾಗುವ ಕಾನೂನಿನ ಮಹತ್ವದ ಅಂಶಗಳಿವೆ. ಹೊಸ ಕಾಯ್ದೆಯಡಿ ದೇಶದಲ್ಲಿ ಮೊದಲ ಬಾರಿಗೆ ದತ್ತಾಂಶ ಸಂರಕ್ಷಣಾ ಮಂಡಳಿಯ ಸ್ಥಾಪಿಸುವ ಕುರಿತು ನಿಬಂಧನೆಗಳನ್ನು ವಿವರಿಸಲಾಗಿದೆ ಎಂದು ವರದಿಗಳು ಹೇಳಿವೆ.

ದತ್ತಾಂಶ ರಕ್ಷಣೆ ಕಾನೂನು ಪ್ರತಿಯೊಬ್ಬ ವ್ಯಕ್ತಿಗೂ ಅನ್ವಯಿಸುವುದರಿಂದ, ಅದನ್ನು ಜಾರಿಗೊಳಿಸುವ ಮುನ್ನ ನಿಯಮಾವಳಿಗಳ ಕುರಿತು ಮಾಹಿತಿ ನೀಡಿ, ಆಕ್ಷೇಪಣೆಗಳಿದ್ದರೆ ತಿಳಿಸಲು ಜನರಿಗೆ ಸರ್ಕಾರ ಅವಕಾಶ ನೀಡಿದೆ.

ಇಂದಿನ ಡಿಜಿಟಲ್ ಯುಗದಲ್ಲಿ ಜನರ ವೈಯಕ್ತಿಕ ಮಾಹಿತಿಗಳು ಕೇವಲ ಒಂದು ಸಂಖ್ಯೆಯೋ, ಪದವೋ ಅಲ್ಲ. ಅದು ನಮ್ಮ ಅಭ್ಯಾಸಗಳು, ಆಯ್ಕೆಗಳು ಮತ್ತು ಗುರುತಿನ ಪ್ರತಿಬಿಂಬವಾಗಿದೆ. ಆದ್ದರಿಂದ ಈ ಮಾಹಿತಿಗಳು ಕಾರ್ಪೋರೇಟ್‌ ಸಂಸ್ಥೆಗಳಿಗೆ ಚಿನ್ನದಷ್ಟೇ ಅಮೂಲ್ಯ. ಭಾರತದಲ್ಲಿ ಜನರ ವೈಯಕ್ತಿಕ ಮಾಹಿತಿಗಳನ್ನು ಪಡೆಯುದಕ್ಕೆ ಮತ್ತು ಅದನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಲಗಾಮು ಇಲ್ಲದಂತಾಗಿದೆ. ಈ ಕಾರಣಕ್ಕೆ ದತ್ತಾಂಶ ಸಂರಕ್ಷಣೆ ಅಗತ್ಯವಾಗಿದೆ.

ಜನರ ವೈಯಕ್ತಿಕ ದತ್ತಾಂಶಗಳನ್ನು ಬಳಸಿಕೊಂಡು ಅವರನ್ನು ವಂಚಿಸುವುದು, ಕಿರುಕುಳ ಕೊಡುವುದನ್ನು ಹಲವರು ಕಸುಬಾಗಿ ಮಾಡಿಕೊಂಡಿದ್ದಾರೆ. ಅವರಿಗೆ ಮೂಗುದಾರ ಹಾಕುವವರು ಸದಸ್ಯಕ್ಕೆ ಇಲ್ಲ. ಜನರು ಮೋಸ ಹೋದ ಮೇಲೆ ಕ್ರಮ ಕೈಗೊಳ್ಳುವ ಬದಲು, ಡಿಜಿಟಲ್ ವಂಚನೆಗೆ ಒಳಗಾಗದಂತೆ ತಡೆಯುವುದು ಅನಿವಾರ್ಯವಾಗಿದೆ. ಈ ಕಾರಣಕ್ಕೆ ದತ್ತಾಂಶ ರಕ್ಷಣೆಗೆ ಕಾನೂನು ಅಗತ್ಯವಾಗಿದೆ. ಈ ಕಾರಣಕ್ಕೆ ದತ್ತಾಂಶ ಸಂರಕ್ಷಣಾ ಕಾಯ್ದೆ ಮಹತ್ವವೆನಿಸಿದೆ.

ಕರಡು ನಿಯಮಾವಳಿ ನೋಡಲು ಇಲ್ಲಿ ಒತ್ತಿ

ಇದನ್ನೂ ಓದಿ : ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...