Homeಕರ್ನಾಟಕಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಕ್ಸ್ (ಟ್ವಿಟರ್)ನಲ್ಲಿ ಬುಧವಾರ ಸಂಜೆ ನಡೆದ ‘ನಮ್ಮ ತೆರಿಗೆ, ನಮ್ಮ ಹಕ್ಕು’ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡೀ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿದೆ. ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ. 4.71 ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ. 3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ, ಶೇ. 1.07 ನಮಗೆ ಕಡಿತ ಆಗಿದೆ. ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದಿದ್ದು, ಬರೊಬ್ಬರಿ 1,87000 ಕೋಟಿ ರೂಪಾಯಿ ನಷ್ಟ ಆಗಿದೆ. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ತಿಳಿಸಿದರು.

ಬೆಂಗಳೂರು ಫೆರಿಫೆರಲ್ ರಸ್ತೆ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಕೊಡಲು ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ಕರ್ನಾಟಕದಿಂದ ಆಯ್ಕೆಯಾದ ಅವರು ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಹೇಳಿದರು.

ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗುವ ತೆರಿಗೆಗಳಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ, ಇದರಲ್ಲೂ ನಾವು (ರಾಜ್ಯ) ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ‘ನನ್ನ ತೆರಿಗೆ ನನ್ನ ಹಕ್ಕು’ ಎನ್ನೋದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗುವುದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ. ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ರೂಪಾಯಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದ್ದಾರೆ. ಇದನ್ನು ಸಹಿಸಬೇಕಾ? ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ, ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ ಎಂದು ಸಿಎಂ ಹೇಳಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.30 ರಿಂದ ಶೇ.22.5ಕ್ಕೆ ಇಳಿಸಿದ್ದಾರೆ. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದ್ದಾರೆ. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ ಜಿಎಸ್‌ಟಿ ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ ಜೆಎಸ್‌ಟಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ? ಎಂದು ಪ್ರಶ್ನಿಸಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸಿಎಂ ಸ್ಪಷ್ಟಪಡಿಸಿದರು.

ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...