Homeಮುಖಪುಟಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ

- Advertisement -
- Advertisement -

ಒಟಿಟಿ ಪ್ಲಾಟ್‌ಫಾರ್ಮ್‌ ಮತ್ತು ಆನ್ಲೈನ್ ಸುದ್ದಿ ಮಾಧ್ಯಮಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಆದೇಶ ಜಾರಿಗೊಳಿಸಿದ್ದು, ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ.

ಆನ್ಲೈನ್ ಸುದ್ದಿ ಮಾಧ್ಯಮಗಳು ಸೇರಿದಂತೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಅಮೇಜಾನ್ ಪ್ರೈಮ್, ನೆಟ್‌ಫ್ಲಿಕ್ಸ್‌ ಹಾಟ್‌ಸ್ಟಾರ್‌ ಮತ್ತು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟ್ಟರ್‌, ಇನ್‌ಸ್ಟಾಗ್ರಾಮ್ ಸೇರಿದಂತೆ ಅನ್ಲೈನ್‌ನಲ್ಲಿ ಪ್ರಸಾರವಾಗುವ ಸಿನೆಮಾ, ಆಡಿಯೋ-ವೀಡಿಯೋಗಳೆಲ್ಲವೂ ಇನ್ನುಮುಂದೆ ಸರ್ಕಾರದ ನಿಯಂತ್ರಣದಲ್ಲಿ ಬರುತ್ತವೆ ಎಂದು ಆದೇಶವು ತಿಳಿಸಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ದೇಶದ ಸುಮಾರು 15 ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್‍ಗಳು ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಎಂಬ ಸಂಘಟನೆಯಡಿ ಒಂದಾಗಿ, ತಮ್ಮದೇ ನಿಯಂತ್ರಣದ ನಿಯಮಗಳನ್ನು ರಚಿಸಿಕೊಳ್ಳುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಸಹಿ ಮಾಡಿದ್ದವು. ಆದರೆ ಇದಕ್ಕೆ ಸಚಿವಾಲಯ ಒಪ್ಪಿಗೆ ಸೂಚಿಸಿರಲಿಲ್ಲ.

ಒಟಿಟಿ ಪ್ಲಾಟ್‍ಫಾರ್ಮ್‍ಗಳನ್ನು ಸ್ವಾಯತ್ತ ಸಂಸ್ಥೆಯ ನಿಯಂತ್ರಣಕ್ಕೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಕಳೆದ ತಿಂಗಳು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಇದರ ಕುರಿತು, ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ತನ್ನ ಹೇಳಿಕೆ ನೀಡುವಂತೆ ಕೋರಿತ್ತು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಸಿತ್ತು.

“ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಕೇಂದ್ರ ಹೇಳಿತ್ತು.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...