Homeಮುಖಪುಟ`ಡಿಜಿಟಲ್ ಕಂಟೆಂಟ್' ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

`ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

- Advertisement -
- Advertisement -

ಡಿಜಿಟಲ್ ವಿಷಯ ಮತ್ತು ಸ್ಟ್ರೀಮಿಂಗ್ (ನಿರಂತರ ದತ್ತಾಂಶ ಪ್ರಸರಣ) ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸುವ ಸರ್ಕಾರದ ಹೊಸ ನಿಯಮಗಳು ಹಲವಾರು ಸಚಿವಾಲಯಗಳನ್ನು ಒಳಗೊಂಡ ಕಟ್ಟುನಿಟ್ಟಾದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಒಳಗೊಂಡಿವೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ವಿಷಯವನ್ನು ನಿಷೇಧಿಸುವ ನೀತಿ ಸಂಹಿತೆಯನ್ನು ಈ ನಿಯಮಗಳು ಒಳಗೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕರಡು ನಿಯಮಗಳನ್ನು ನೋಡಿದರೆ ಇವು ಭಯಾನಕವಾಗಿವೆ ಎಂದು ಕೆಲವು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯ ಭಾಗಿದಾರರು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಮಾರ್ಗದರ್ಶಿ) ನಿಯಮಗಳು, 2021- ಮೊದಲ ಬಾರಿಗೆ ಡಿಜಿಟಲ್ ಸುದ್ದಿ ಸಂಸ್ಥೆಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಒಟಿಟಿ ಸ್ಟ್ರೀಮಿಂಗ್ ಸೇವೆಗಳನ್ನು ಸರ್ಕಾರ ಹೇಗೆ ನಿಯಂತ್ರಿಸುತ್ತದೆ ಎಂದು ವಿವರಿಸುತ್ತದೆ.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಲಿರುವ ಕರಡು ನಿಯಮಗಳ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕರಡು ಪ್ರಕಾರ, ಮೇಲ್ವಿಚಾರಣಾ ಕಾರ್ಯವಿಧಾನವು ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಗೃಹ, ಮಾಹಿತಿ ಮತ್ತು ಪ್ರಸಾರ, ಕಾನೂನು, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಪ್ರತಿನಿಧಿಗಳ ಸಮಿತಿಯನ್ನು ಒಳಗೊಂಡಿರುತ್ತದೆ.

ಈ ಸಮಿತಿಯು ಬಯಸಿದಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯ ದೂರುಗಳ ಮೇಲೆ ವಿಚಾರಣೆ ಮಾಡಲು ಸು-ಮೋಟು ಅಧಿಕಾರಗಳನ್ನು ಹೊಂದಿರುತ್ತದೆ. ಸಮಿತಿಯು ನೀತಿಸಂಹಿತೆ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬಹುದು, ಖಂಡಿಸಬಹುದು ಇತ್ಯಾದಿ ಕ್ರಮಗಳಲ್ಲದೆ ಕ್ಷಮೆಯಾಚಿಸಲು ಸೂಚಿಸಬಹುದು.

ಜಂಟಿ ಕಾರ್ಯದರ್ಶಿ ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯ ಅಧಿಕಾರಿಯನ್ನು ಸರ್ಕಾರವು “ಅಧಿಕೃತ ಅಧಿಕಾರಿ” ಎಂದು ನೇಮಿಸುತ್ತದೆ, ಅವರು ವಿಷಯವನ್ನು ( ಕಂಟೆಂಟ್ ಅನ್ನು) ನೇರವಾಗಿ ನಿಬಂಧಿಸಬಹುದು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಕರಡು ನಿಯಮಗಳು ಪ್ರಮುಖ ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ಸಂದೇಶಗಳ ಉಗಮಸ್ಥಾನವನ್ನು ಪತ್ತೆಹಚ್ಚುವಿಕೆಯನ್ನು ಕಡ್ಡಾಯಗೊಳಿಸುತ್ತವೆ. ಇದು ವಾಟ್ಸಾಪ್ ಮತ್ತು ಸಿಗ್ನಲ್‌ನಂತಹ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳ ಎಂಡ್ ಟು ಎಂಡ್ ಎನ್‌ಕ್ರಿಪ್ಸನ್ ಪರೀಶೀಲನೆಯನ್ನೂ ಒಳಗೊಂಡಿದೆ.

ಸ್ಟ್ರೀಮಿಂಗ್ ದೂರುಗಳನ್ನು ಆಲಿಸಲು ಸ್ವತಂತ್ರ ಮೇಲ್ಮನವಿ ಸಂಸ್ಥೆಯನ್ನು ಸ್ಥಾಪಿಸಲು ಕರಡು ಅನುವು ಮಾಡುತ್ತದೆ. ಆಕ್ಷೇಪಿಸಲ್ಪಟ್ಟ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಂತಹ ಸ್ಟ್ರೀಮಿಂಗ್ ಸೇವೆಗಳ ವಿಚಾರಣೆಯನ್ನು ನಿವೃತ್ತ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಮೇಲ್ಮನವಿ ಸಂಸ್ಥೆಯ ಅಧಿಕಾರಕ್ಕೆ ಸಲ್ಲಿಸುವಂತೆ ಕರಡು ನಿರ್ದೇಶಿಸುತ್ತದೆ.

ವಿಷಯವು ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಈ ಸಮಿತಿ ನಂಬಿದರೆ, ವಿಷಯ ಕಂಟೆಂಟ್ ಅನ್ನು ನಿಬಂಧಿಸಲು ಸರ್ಕಾರಿ ನಿಯಂತ್ರಿತ ಸಮಿತಿಗೆ ಕಳುಹಿಸಲು ಅಧಿಕಾರ ನೀಡಲಾಗುತ್ತದೆ.

ಡ್ರಾಫ್ಟ್‌ನ ಪ್ರಮುಖ ಅಂಶಗಳು ಇಲ್ಲಿವೆ

  • ಅವಮಾನಕರ, ಅಶ್ಲೀಲ, ಮಾನಹಾನಿಕರ, ವರ್ಣಭೇದ ನೀತಿಯ, ಅಪ್ರಾಪ್ತ ವಯಸ್ಕರಿಗೆ ಹಾನಿಕಾರಕವಾದ ವಿಷಯ ಮತ್ತು ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತ್ವ ಮತ್ತು ಇತರ ದೇಶಗಳೊಂದಿಗಿನ ಸಂಬಂಧಕ್ಕೆ ಧಕ್ಕೆ ತರುವ ಕಂಟೆಂಟ್ ನಿಷೇಧಿಸುವುದು.
  • ಅಂತಹ ಯಾವುದೇ ವಿಷಯವು ಪ್ರಸಾರವಾದರೆ, ಸೂಚನೆ ನೀಡಿದ 36 ಗಂಟೆಗಳ ಒಳಗೆ ಅಥವಾ ನ್ಯಾಯಾಲಯದ ಆದೇಶದೊಳಗೆ ಅದನ್ನು ಸಾಧ್ಯವಾದಷ್ಟು ಬೇಗ ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
  • ಸೋಶಿಯಲ್ ಮೀಡಿಯಾ ಮೆಸೇಜಿಂಗ್ ಸೈಟ್‌ಗಳು ಮಾಹಿತಿಯನ್ನು ಮೊದಲು ಹುಟ್ಟು ಹಾಕಿದವರ ಟ್ರ್ಯಾಕಿಂಗ್ ಅನ್ನು ಸಕ್ರಿಯಗೊಳಿಸಬೇಕು.
  • ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಮಧ್ಯವರ್ತಿ/ ಮಧ್ಯ ಭಾಗಿದಾರ ಸೈಬರ್ ಭದ್ರತಾ ಲೋಪದ ವಿವರಗಳನ್ನು 72 ಗಂಟೆಗಳ ಒಳಗೆ ಒದಗಿಸಬೇಕು.
  • ದೂರುಗಳನ್ನು ಸ್ವೀಕರಿಸಲು, ಅಂಗೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕಂಪನಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.
  • ಮಧ್ಯ ಭಾಗಿದಾರನು ದೂರಿನ 24 ಗಂಟೆಗಳ ಒಳಗೆ, ಕಾನೂನುಬಾಹಿರ ಅಥವಾ ಆಕ್ರಮಣಕಾರಿ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
  • ನೀತಿ ಸಂಹಿತೆಯನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ: ಸ್ವಯಂ ನಿಯಂತ್ರಣ; ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ; ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನ.

ಇದನ್ನೂ ಓದಿ: ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...