ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ದೆಹಲಿ ಚಲೋ ಇಂದಿಗೆ 6 ನೇ ದಿನಕ್ಕೆ ಕಾಲಿಟ್ಟಿದೆ. ಷರತ್ತುಬದ್ದ ಮಾತುಕತೆಯನ್ನು ಈ ಹಿಂದೆ ತಿರಸ್ಕರಿಸಿದ್ದ ರೈತ ಹೋರಾಟಗಾರರ ಜೊತೆ ಕೇಂದ್ರ ಸರ್ಕಾರವು ಇಂದು ಮತ್ತೇ ಮಾತುಕತೆ ನಡೆಸಲು ನಿರ್ಧರಿಸಿದೆ.
ರೈತರು ನಡೆಸುತ್ತಿವ ಪ್ರತಿಭಟನೆ ಸಂಬಂಧ ಬಿಜೆಪಿ ನಾಯಕರು ಚರ್ಚಿಸಿದ ಬಳಿಕ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.
ಇದನ್ನೂ ಓದಿ:ರೈತರ ಮೇಲಿನ ಹಲ್ಲೆ ವಿರೋಧಿಸಿ ’ಐಕ್ಯ ಹೋರಾಟ ಸಮಿತಿ’ಯಿಂದ ಪ್ರತಿಭಟನೆ
ಈ ಮಧ್ಯೆ ಗೃಹ ಸಚಿವ ಅಮಿತ್ ಶಾ ಅವರು ಬಿಕೆಯು (ಏಕತಾ ಉಗ್ರಹಾನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಹಾನ್ ಮತ್ತು ಬಿಕೆಯು (ಏಕತಾ ದಕುಂದಾ) ಅಧ್ಯಕ್ಷ ಬೂಟಾ ಸಿಂಗ್ ಬುರ್ಜ್‌ಗಿಲ್ ಜತೆ ಫೋನ್ ಮೂಲಕ ಮಾತನಾಡಿ, ಷರತ್ತು ರಹಿತವಾಗಿ ಮಾತುಕತೆ ನಡೆಸಲು ಮನವೊಲಿಸಿದ್ದಾಗಿಯು, ಅಧಿಕೃತ ಲಿಖಿತ ಆಹ್ವಾನವನ್ನು ಎದುರು ನೋಡುತ್ತಿದ್ದೇವೆ ಎಂದು ಬುರ್ಜ್‌ಗಿಲ್ ಸ್ಪಷ್ಟಪಡಿಸಿದ್ದಾರೆ.
“ಅಮಿತ್ ಶಾ ನನಗೆ ಕರೆ ಮಾಡಿ ಮಾತನಾಡಿದ್ದಾರೆ. ಯಾವುದೇ ಷರತ್ತುಗಳನ್ನು ವಿಧಿಸದೇ ಮಾತುಕತೆಗೆ ಆಗಮಿಸುವಂತೆ ಆಹ್ವಾನಿಸಿದ್ದಾರೆ. ಎಲ್ಲ ರೈತ ಸಂಘಟನೆಗಳಿಗೆ ಈ ಸಂದೇಶ ರವಾನಿಸುವಂತೆ ಕೋರಿದ್ದಾರೆ. ಈ ಹಿಂದೆ ಸಭೆಗಿಂತ ಮೊದಲು ಷರತ್ತು ವಿಧಿಸುವುದನ್ನು ನಾವು ತಿರಸ್ಕರಿಸಿದ್ದೇವೆ. ಇದೀಗ ಲಿಖಿತ ಆಹ್ವಾನ ಬಂದ ಬಳಿಕ ಸಭೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ” ಎಂದು ಬುರ್ಜ್‌ಗಿಲ್ ಹೇಳಿದ್ದಾರೆ.
ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!


