Homeಕರ್ನಾಟಕಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಗುರುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

”ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶಾ-ಸಿದ್ದು ಭೇಟಿ ವೇಳೆ ಅಕ್ಕಿ ವಿಚಾರ ಚರ್ಚೆ

ಈ ಸೌಹಾರ್ದ ಭೇಟಿಯ ವೇಳೆ ಸಿದ್ದರಾಮಯ್ಯ ಅವರು, ”ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಅಮಿತ್ ಶಾ ಅವರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೀತಿಯಿಂದ ಬಡವರಿಗೆ ಅಹಾರ ನೀಡುವ ಯೋಜನೆಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

”ಕೇಂದ್ರ ಸರ್ಕಾರದ ಹೊಸ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಬಡವರ ಎರಡು ಹೊತ್ತಿನ ಊಟಕ್ಕೆ ತೊಂದರೆಯಿಂಟು ಮಾಡುತ್ತಿದೆ. ರಾಜ್ಯ ಸರ್ಕಾರಗಳಿಗೆ ಆಹಾರಧಾನ್ಯ ಪೂರೈಕೆ ಮಾಡದಿರುವ ನೀತಿಯನ್ನು ಬದಲಾಯಿಸುವುದು ಒಳಿತು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರ ಜತೆ ಗುರುವಾರ ಮಾತುಕತೆ ನಡೆಸುವುದಾಗಿ ಅಮಿತ್ ಶಾ ಅವರು ಆಶ್ವಾಸನೆ ನೀಡಿದ್ದಾರೆ.

ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯೂ ಒಂದಾಗಿದ್ದು, ಇದನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಕ್ಕಿಯ ಅಭಾವ ಕಾಡುತ್ತಿದೆ.

ಅಕ್ಕಿ ಪೂರೈಸಿ ಎಂದು ಭಾರತೀಯ ಆಹಾರ ನಿಗಮಕ್ಕೆ ರಾಜ್ಯ ಸರ್ಕಾರ ಮಾಡಿದ್ದ ಮನವಿ ತಿರಸ್ಕೃತವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:

ಶಾ ಭೇಟಿಗೂ ಮುನ್ನ ಸಿದ್ದು ಹೇಳಿದ್ದೇನು?

”ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು” ಎಂದರು.

”ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್‌ಸಿಐ ನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದು ಬೇಸರವ್ಯಕ್ತಪಡಿಸಿದ್ದರು.

”ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದರು.

”ಎಫ್‌ಸಿಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...