Homeಮುಖಪುಟಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು

- Advertisement -
- Advertisement -

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆಗಿನ ತನ್ನ ಸೆಟಲ್‌ಮೆಂಟ್ ಖಾತೆಯಿಂದ ರೂ 13.97 ಕೋಟಿ ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ (ಸೈಫನ್ ಮಾಡಲಾಗಿದೆ) ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಸಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅಪರಿಚಿತ ವ್ಯಕ್ತಿಗಳು ತನ್ನ ಕೋರ್ ಬ್ಯಾಂಕಿಂಗ್ ಸಿಸ್ಟಮ್‌ನ ಸ್ಟ್ರಕ್ಚರ್ಡ್ ಫೈನಾನ್ಷಿಯಲ್ ಮೆಸೇಜಿಂಗ್ ಸಿಸ್ಟಮ್ (ಎಸ್‌ಎಫ್‌ಎಮ್‌ಎಸ್‌) ಸರ್ವರ್ ಮೂಲಕ ಆರ್‌ಬಿಐ ಒಡೆತನದ ಇಂಡಿಯನ್ ಫೈನಾನ್ಶಿಯಲ್ ಟೆಕ್ನಾಲಜಿ ಅಂಡ್ ಅಲೈಡ್ ಸರ್ವೀಸಸ್ (ಇಫ್ತಾಸ್-ಐಎಫ್‌ಟಿಎಸ್‌) ಸಂಸ್ಥೆಯ ಕೇಂದ್ರೀಯ ಸರ್ವರ್ ಅನ್ನು ಹ್ಯಾಕ್ ಮಾಡಿ, ಅಕ್ಟೋಬರ್ 15 ರಿಂದ 17ರ ನಡುವೆ 187 ಅನಧಿಕೃತ ವಹಿವಾಟುಗಳ ಮೂಲಕ ಹಣವನ್ನು ದೋಚಿದ್ದಾರೆ ಎಂದು ಬ್ಯಾಂಕ್ ಪೊಲೀಸರಿಗೆ ತಿಳಿಸಿದೆ.

ಸರಳವಾಗಿ ಹೇಳುವುದಾದರೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಬ್ಯಾಂಕಿಂಗ್ ವ್ಯವಸ್ಥೆಯು (ಕೋರ್ ಬ್ಯಾಂಕಿಂಗ್ ಸಿಸ್ಟಮ್‌) ಹಣ ವರ್ಗಾವಣೆಗಾಗಿ ಆರ್‌ಬಿಐನ ಅಂಗಸಂಸ್ಥೆಯಾದ ಇಫ್ತಾಸ್ ನಿರ್ವಹಿಸುವ ಕೇಂದ್ರೀಯ ಹಣಕಾಸು ಸಂದೇಶ ವ್ಯವಸ್ಥೆಯ (ಎಸ್‌ಎಫ್‌ಎಮ್‌ಎಸ್‌) ಸರ್ವರ್‌ಗೆ ಸಂಪರ್ಕ ಹೊಂದಿರುತ್ತದೆ. ಹ್ಯಾಕರ್‌ಗಳು ಈ ಸಂಪರ್ಕ ವ್ಯವಸ್ಥೆಯೊಳಗೆ ಅಕ್ರಮವಾಗಿ ನುಗ್ಗಿದ್ದಾರೆ. ಹೀಗೆ ಸರ್ವರ್ ನಿಯಂತ್ರಣ ಪಡೆದ ಅಪರಿಚಿತರು, ಅಕ್ಟೋಬರ್ 15 ಮತ್ತು 17 ರ ನಡುವೆ ಕೇವಲ ಮೂರು ದಿನಗಳಲ್ಲಿ ಒಟ್ಟು 187 ಬಾರಿ ಬ್ಯಾಂಕಿಗೆ ತಿಳಿಯದಂತೆ ಹಣವನ್ನು ವರ್ಗಾಯಿಸಿದ್ದಾರೆ ಎನ್ನಲಾಗಿದೆ.

ಆರ್‌ಬಿಐನ ಆರ್‌ಟಿಜಿಎಸ್ ಮತ್ತು ನೆಫ್ಟ್ ವ್ಯವಸ್ಥೆಗಳ ಮೂಲಕ ಬ್ಯಾಂಕುಗಳು ಪರಸ್ಪರ ವಿನಿಮಯ ಮಾಡಿಕೊಳ್ಳುವ ಪಾವತಿ ಸಂದೇಶಗಳನ್ನು ಎಸ್‌ಎಫ್‌ಎಮ್‌ಎಸ್ ಹೊತ್ತೊಯ್ಯುತ್ತದೆ. 

ಬ್ಯಾಂಕ್ ದಾಖಲಿಸಿದ ಎಫ್‌ಐಆರ್ ಪ್ರಕಾರ, ಹಣವು 36 ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದೆ; ಇದರಲ್ಲಿ ಅಕ್ಟೋಬರ್ 15 ರಂದು ಆರು ಬಾರಿ, ಅಕ್ಟೋಬರ್ 16 ರಂದು 88 ಬಾರಿ ಮತ್ತು ಅಕ್ಟೋಬರ್ 17 ರಂದು 93 ಬಾರಿ ಹಣ ವರ್ಗಾವಣೆ ನಡೆದಿದೆ.

ಬ್ಯಾಂಕಿನ ದೂರಿನ ಪ್ರಕಾರ, ಈ 187 ವಹಿವಾಟುಗಳಲ್ಲಿ ಹಣ ಕಳುಹಿಸಿದವರು ಎಂದು ನಮೂದಿಸಲಾದ ಖಾತೆಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಸೇರಿದ್ದಲ್ಲ. ಅಲ್ಲದೆ, ಬ್ಯಾಂಕಿನ ಆಂತರಿಕ ತನಿಖಾ ತಂಡವು ಯಾವುದೇ ಶಾಖೆಯಲ್ಲಿ, ಇಂಟರ್ನೆಟ್ ಅಥವಾ ಮೊಬೈಲ್ ಬ್ಯಾಂಕಿಂಗ್‌ನಲ್ಲಿ ಅಥವಾ ಯಾವುದೇ ಇತರ ಚಾನೆಲ್‌ಗಳಲ್ಲಿ ಈ 187 ವಹಿವಾಟುಗಳ ವಿವರಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ವರದಿಯಲ್ಲಿ ಹೆಸರು ಹೇಳಲು ಇಚ್ಚಿಸದ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಲಾಗಿದ್ದು, ಈ ವಹಿವಾಟುಗಳ ಬಗ್ಗೆ ಸದ್ಯಕ್ಕೆ ತೀರಾ ಕಡಿಮೆ ಮಾಹಿತಿ ಲಭ್ಯವಿರುವುದರಿಂದ ‘ಹಣವನ್ನು ಹೇಗೆ ದೋಚಲಾಗಿದೆ ಎಂಬುದನ್ನು ಪತ್ತೆಹಚ್ಚುವುದು ತುಂಬಾ ಕಷ್ಟಕರವಾಗಿದೆ’ ಎಂದು ಅವರು ಹೇಳಿದ್ದಾಗಿ ತಿಳಿಸಲಾಗಿದೆ.

ಬ್ಯಾಂಕ್ ಅಧಿಕಾರಿಗಳ ಗಮನಕ್ಕೆ ಈ ಘಟನೆ ಬಂದ ತಕ್ಷಣ, ಬ್ಯಾಂಕ್ ತಕ್ಷಣವೇ ಆರ್‌ಬಿಐ, ಇಫ್ತಾಸ್, ದಕ್ಷ್ ಪೋರ್ಟಲ್, ರಾಷ್ಟ್ರೀಯ ನಿರ್ಣಾಯಕ ಮಾಹಿತಿ ಮೂಲಸೌಕರ್ಯ ಸಂರಕ್ಷಣಾ ಕೇಂದ್ರ (ಎನ್‌ಸಿಐಐಪಿಸಿ) ಮತ್ತು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಗೆ ಮಾಹಿತಿ ನೀಡಿದೆ ಎಂದು ವರದಿ ಉಲ್ಲೇಖಿಸಿದೆ.

ಮುಂಬೈ ಪೊಲೀಸರು ವಂಚನೆ ಮತ್ತು ಗುರುತು ಮರೆಮಾಚಿ ಬೇರೊಬ್ಬರಂತೆ ನಟಿಸಿದ ಆರೋಪದ ಮೇಲೆ, ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದೆ.



 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವು ಕಳ್ಳಸಾಗಣೆ ಆರೋಪ: ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು!

ಪೊಲೀಸರು ಬಿಡುಗಡೆ ಮಾಡುವ ವಿಡಿಯೊಗಳಲ್ಲಿ ಒಂದೇ ರೀತಿಯ ದೃಶ್ಯಗಳು ಮರುಕಳಿಸುತ್ತವೆ: ಕಾಲಿನ ಕೆಳಭಾಗಕ್ಕೆ ಗುಂಡೇಟು ತಗುಲಿದ ವ್ಯಕ್ತಿಯೊಬ್ಬರು ಕತ್ತಲಿನಲ್ಲಿ ಕುಂಟುತ್ತಾ ಸಾಗುತ್ತಿದ್ದರೆ, ಪೊಲೀಸರು ಅವರನ್ನು ಸುತ್ತುವರಿದು ಕರೆದೊಯ್ಯುತ್ತಾರೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ...

ಡಿ.ಕೆ ಶಿವಕುಮಾರ್, ಕೇರಳ ಸಿಎಂ ಸತೀಶನ್‌ಗೆ ಸ್ಟಿಂಗ್ ಆಪರೇಷನ್ ಬಲೆ? ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂಬ ಆರೋಪದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಕಾಂಗ್ರೆಸ್ ಹೈಕಮಾಂಡ್...

‘ಬಿಳೇಕಹಳ್ಳಿ’ ಮೆಟ್ರೋ ನಿಲ್ದಾಣಕ್ಕೆ ಕೇವಲ ‘ಐಐಎಂಬಿ’ ಹೆಸರಿಟ್ಟಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ : ಮರುನಾಮಕರಣಕ್ಕೆ ಆಗ್ರಹ

ಬೆಂಗಳೂರಿನ 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) 'ಬಿಳೇಕಹಳ್ಳಿ' ನಿಲ್ದಾಣಕ್ಕೆ ಕೇವಲ ಐಐಎಂಬಿ (ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು) ಎಂದು ಹೆಸರಿಟ್ಟಿರುವುದಕ್ಕೆ ಊರಿನ ಜನರು ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದು,...

ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಸೌದಿಯಲ್ಲಿ ಮರಣದಂಡನೆ: ವಿಶ್ವಸಂಸ್ಥೆ ತಜ್ಞರ ತೀವ್ರ ಖಂಡನೆ, ಇಬ್ಬರ ಜೀವ ಉಳಿಸಲು ಆಗ್ರಹ

ಸೌದಿ ಅರೇಬಿಯಾದಲ್ಲಿ ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಮರಣದಂಡನೆಗೆ ಗುರಿಯಾಗಿದ್ದ ಹಸನ್ ಝಾಕಿ ಅಲ್-ಫರಾಜ್ ಅವರನ್ನು ಗಲ್ಲಿಗೇರಿಸಿರುವುದಕ್ಕೆ ವಿಶ್ವಸಂಸ್ಥೆಯ ತಜ್ಞರು ತೀವ್ರ ಆಘಾತ ಮತ್ತು ಖಂಡನೆ ವ್ಯಕ್ತಪಡಿಸಿದ್ದಾರೆ. ಇದೇ ಪ್ರಕರಣದ ಮಾದರಿಯಲ್ಲಿ ಮರಣದಂಡನೆ ಎದುರಿಸುತ್ತಿರುವ...

ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್‌ ದಾಖಲು

ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಉತ್ತರ ಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸುತ್ತಿದ್ದ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; ಆರು ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ದಲಿತ ಸಮುದಾಯದ ಪುರುಷರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ನಾಲ್ವರು...

‘ಮತ್ತೊಂದು ಗಾಲ್ವಾನ್ ಸಂಭವಿಸುತ್ತಿದೆಯೇ?’: ಅರುಣಾಚಲದಲ್ಲಿ ಚೀನಾ ಸೇನೆ ಜೊತೆಗಿನ ಮುಖಾಮುಖಿ ವರದಿ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಮುಖಾಮುಖಿ ಮುಂದುವರಿದಿರುವ ವರದಿಗಳ ಕುರಿತು ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಶುಕ್ರವಾರ (ಅ.23) ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಗಡಿ ಭದ್ರತೆ ಮತ್ತು...

ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ...

ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಚುನಾವಣಾ ಆಯೋಗದತ್ತ ಮೆರವಣಿಗೆ, ಹಲವರನ್ನು ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸಿ, ದೆಹಲಿಯಲ್ಲಿ ಶುಕ್ರವಾರ ನಡೆದ ‘ಪೀಪಲ್ ಅಗೇನ್ಸ್ಟ್ ಎಸ್‌ಐಆರ್’ ಪ್ರತಿಭಟನಾ...