Homeಕರ್ನಾಟಕ'ಅನ್ನಭಾಗ್ಯ'ಕ್ಕೆ ಕೇಂದ್ರ ಕತ್ತರಿ: ಕೊಟ್ಟ ಮಾತು ಉಳಿಸಿಕೊಳ್ಳಲು ಸಿದ್ದು ಸರ್ಕಾರ ಕಸರತ್ತು; ಇಂದು ಉನ್ನತ ಮಟ್ಟದ...

‘ಅನ್ನಭಾಗ್ಯ’ಕ್ಕೆ ಕೇಂದ್ರ ಕತ್ತರಿ: ಕೊಟ್ಟ ಮಾತು ಉಳಿಸಿಕೊಳ್ಳಲು ಸಿದ್ದು ಸರ್ಕಾರ ಕಸರತ್ತು; ಇಂದು ಉನ್ನತ ಮಟ್ಟದ ಸಭೆ

- Advertisement -
- Advertisement -

‘ಅನ್ನ ಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ಹಾಕಿದ್ದು, ಇದೀಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಕಿ ಖರೀದಿಗೆ ಕಸರತ್ತು ಮುಂದುವರಿಸಿದ್ದು, ಅನ್ಯ ರಾಜ್ಯಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅಕ್ಕಿ ಖರೀದಿ ನಿರ್ಧಾರ ಅಂತಿಮಗೊಳಿಸಲು ಇಂದು (ಸೋಮವಾರ) ಉನ್ನತ ಮಟ್ಟದ ಸಭೆ ನಡೆಯಲಿದೆ.

ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಹಾಗಾಗಿ ತೆಲಂಗಾಣದಿಂದ ಅಕ್ಕಿ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ಅಲ್ಲಿ ದಾಸ್ತಾನು ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಇನ್ನು ಛತ್ತೀಸಗಢದಲ್ಲಿ 1.5 ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ಅದನ್ನು ಪೂರೈಸಲು ಅಲ್ಲಿನ ರಾಜ್ಯ ಸರ್ಕಾರದ ಒಪ್ಪಿಗೆಗಾಗಿ ರಾಜ್ಯದ ಅಧಿಕಾರಿಗಳು ಕಾಯುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ.

ಅಕ್ಕಿ ಖರೀದಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ನಿರತರಾಗಿರುವ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ”ಛತ್ತೀಸಗಢದಿಂದ ಅಕ್ಕಿ ಖರೀದಿಸುವ ಕುರಿತು ಶನಿವಾರದಿಂದಲೂ ಮಾತುಕತೆ ನಡೆಯುತ್ತಿದೆ. ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು ಮಾರಾಟ ಮಾಡಲು ಅಲ್ಲಿನ ಸರ್ಕಾರ ಅಧಿಕೃತವಾಗಿ ಒಪ್ಪಿಗೆ ನೀಡಿದ ಬಳಿಕವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲು ಸಾಧ್ಯ. ಅಕ್ಕಿಯ ದರ, ಸಾಗಣೆ ವೆಚ್ಚ ಸೇರಿದಂತೆ ಹಲವು ವಿಷಯಗಳಲ್ಲಿ ಇನ್ನಷ್ಟೇ ತೀರ್ಮಾನವಾಗಬೇಕಿದೆ” ಎಂದು ತಿಳಿಸಿದ್ದಾರೆ.

ಅಕ್ಕಿ ಮಾರಟಕ್ಕೆ ಛತ್ತೀಸಗಢ ಸರ್ಕಾರ ಒಪ್ಪಿದರೆ ಸಾಗಣೆ ಹೇಗೆ ಮಾಡಬೇಕು ಎನ್ನುವ ಬಗ್ಗೆ ಯೋಜನೆ ರೂಪಿಸಬೇಕಿದೆ. ಅಲ್ಲಿಂದ ರಾಜ್ಯಕ್ಕೆ ಅಕ್ಕಿ ಸಾಗಿಸಲು ದೀರ್ಘ ಸಮಯ ಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಅನ್ನಭಾಗ್ಯ ಯೋಜನೆ ಅನುಷ್ಠಾನದ ವೇಳಾಪಟ್ಟಿಯನ್ನು ಹೊಂದಾಣಿಕೆ ಮಾಡಬೇಕಾಗುತ್ತದೆ. ಛತ್ತೀಸಗಢ ಸರ್ಕಾರ 1.5 ಲಕ್ಷ ಟನ್ ಅಕ್ಕಿ ಪೂರೈಸಲು ಒಪ್ಪಿಕೊಂಡರೂ ಪೂರ್ಣ ಪ್ರಮಾಣದ ಬೇಡಿಕೆ ಈಡೇರಿದಂತಾಗುವುದಿಲ್ಲ. ಉಳಿದಂತೆ ಕೊರತೆಯಾಗುವ ಅಕ್ಕಿಯನ್ನು ಯಾವ ಮೂಲದಿಂದ ಖರೀದಿಸಬೇಕು ಎಂಬ ನಿರ್ಧಾರ ಆಗಬೇಕಾಗುತ್ತದೆ. ಹಾಗಾಗಿ ಈ ಎಲ್ಲ ವಿಚಾರವಾಗಿ ಸೋಮವಾರದ ಸಭೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು, ಹಲವು ರಾಜ್ಯಗಳ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ, ರಾಜ್ಯಕ್ಕೆ ಅಕ್ಕಿ ಒದಗಿಸುವಂತೆ ಮನವಿ ಮಾಡಿದ್ದಾರೆ. ಸೋಮವಾರ ಕೆಲವು ರಾಜ್ಯಗಳಿಂದ ಪ್ರತಿಕ್ರಿಯೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿ ಇದ್ದಾರೆ.

ರಾಜ್ಯದ ಅನ್ನಭಾಗ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಅಡ್ಡಗಾಲು

”ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

”ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ತಿಳಿಸಿದರು.

”ಭಾರತೀಯ ಆಹಾರ ನಿಗಮದ ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...