ಕೇಂದ್ರದ ಬಿಜೆಪಿ ಸರ್ಕಾರವು ನಿಜವಾದ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದ್ದು, ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಬಂಡವಾಳಶಾಹಿಗಳನ್ನು
ತಮ್ಮ ಸಂಸದೀಯ ಕ್ಷೇತ್ರಕ್ಕೆ ಎರಡು ದಿನಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮೊದಲು ಚುರುವಾ ಗಡಿಯಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದಲ್ಲಿ ಸ್ವಲ್ಪ ಸಮಯ ಕಳೆದ ನಂತರ, ಅವರು ಬಚ್ರಾವಣ ಕಡೆಗೆ ತೆರಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬಚ್ರಾವಣದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಭದ್ರಕೋಟೆಯನ್ನು ಕಾಯ್ದುಕೊಳ್ಳುವಂತೆ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ. “ಹಣದುಬ್ಬರ ಗಮನಾರ್ಹವಾಗಿ ಹೆಚ್ಚಾಗಿದೆ ಮತ್ತು ಬಿಜೆಪಿ ಸರ್ಕಾರವು ಬಂಡವಾಳಶಾಹಿಗಳನ್ನು ಮಾತ್ರ ಉತ್ತೇಜಿಸುತ್ತಿದೆ” ಎಂದು ಅವರು ಈ ವೇಳೆ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಬಂಡವಾಳಶಾಹಿಗಳನ್ನು
ಈ ಮಧ್ಯೆ, ರಾಹುಲ್ ಗಾಂಧಿಯವರ ಭೇಟಿಯ ಸಮಯದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ತಮ್ಮನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಆದಾಗ್ಯೂ, ಗೃಹಬಂಧನದ ಬಗ್ಗೆ ಪೊಲೀಸರು ಯಾವುದೆ ದೃಢೀಕರಣ ನೀಡಿಲ್ಲ. ರಾಹುಲ್ ಗಾಂಧಿ ಸಾರ್ವಜನಿಕರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
“25 ಕಾರ್ಯಕರ್ತರೊಂದಿಗೆ ನಾವು ನಗರ ಪಂಚಾಯತ್ ಕಚೇರಿಯಲ್ಲಿ ಬಂಧಿತರಾಗಿದ್ದೇವೆ. ರಾಯ್‌ಬರೇಲಿಯ ಜನರು ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿರುವುದರಿಂದ ಅವರು ಇಲ್ಲಿಯೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸುವುದು ಮತ್ತು ಅವುಗಳನ್ನು ಪರಿಹರಿಸುವುದು ಸಂಸದರ ಜವಾಬ್ದಾರಿಯಾಗಿದೆ” ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರವೇಶ್ ವರ್ಮಾ ಹೇಳಿದ್ದಾರೆ.
ಇದನ್ನೂಓದಿ: ಯುಜಿಸಿ ಕರಡು ಪ್ರಸ್ತಾವನೆಗಳು ಉನ್ನತ ಶಿಕ್ಷಣದಿಂದ ರಾಜ್ಯಗಳ ಪಾತ್ರ ಕಡೆಗಣನೆ: ಪಿಣರಾಯಿ ವಿಜಯನ್
ಯುಜಿಸಿ ಕರಡು ಪ್ರಸ್ತಾವನೆಗಳು ಉನ್ನತ ಶಿಕ್ಷಣದಿಂದ ರಾಜ್ಯಗಳ ಪಾತ್ರ ಕಡೆಗಣನೆ: ಪಿಣರಾಯಿ ವಿಜಯನ್


