Homeಮುಖಪುಟನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನ್ಯಾ. ನಾಗರತ್ನ ಭಿನ್ನಾಭಿಪ್ರಾಯ ಕಡೆಗಣಿಸಿದ ಸರ್ಕಾರ

- Advertisement -
- Advertisement -

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಮಾಹಿತಿಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಬುಧವಾರ (ಆ.27) ಮಧ್ಯಾಹ್ನ ಎಕ್ಸ್‌ನಲ್ಲಿ ಪ್ರಕಟಿಸಿದ್ದಾರೆ.

34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿರುವ ಸುಪ್ರೀಂ ಕೋರ್ಟ್ ಪ್ರಸ್ತುತ 32 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ, 2 ಹುದ್ದೆಗಳು ಖಾಲಿ ಇವೆ. ಈ ನೇಮಕಾತಿಗಳೊಂದಿಗೆ, ಸುಪ್ರೀಂ ಕೋರ್ಟ್ ತನ್ನ ಪೂರ್ಣ ಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಆಗಸ್ಟ್ 25 ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ಕೊಲಿಜಿಯಂ, ನ್ಯಾಯಮೂರ್ತಿಗಳಾದ ಆರಾಧೆ ಮತ್ತು ಪಂಚೋಲಿ ಅವರಿಗೆ ಬಡ್ತಿ ನೀಡಲು ಶಿಫಾರಸು ಮಾಡಿತ್ತು.

ಆದರೆ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಪ್ರಸ್ತಾಪಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು.

ನ್ಯಾಯಮೂರ್ತಿ ಆರಾಧೆ ಅವರನ್ನು 2009ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. 2011ರಲ್ಲಿ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಮಾಡಲಾಗಿತ್ತು.

2016ರಲ್ಲಿ ಅವರನ್ನು ಜಮ್ಮು ಕಾಶ್ಮೀರದ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು ಮತ್ತು 2018ರಲ್ಲಿ 3 ತಿಂಗಳು ಅದರ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಅದಾದ ನಂತರ, ನವೆಂಬರ್ 17, 2018 ರಂದು ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು 2022ರಲ್ಲಿ ಕೆಲವು ತಿಂಗಳುಗಳ ಕಾಲ ಅದರ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಜುಲೈ 2023ರಲ್ಲಿ, ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. ನಂತರ ಅವರನ್ನು ಜನವರಿ 2025ರಲ್ಲಿ ಬಾಂಬೆ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಯಿತು, ಅಲ್ಲಿ ಅವರು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

ನ್ಯಾಯಮೂರ್ತಿ ಪಾಂಚೋಲಿ ಅವರ ಮಾತೃ ನ್ಯಾಯಾಲಯ ಗುಜರಾತ್ ಹೈಕೋರ್ಟ್ ಆಗಿದೆ. ಅವರನ್ನು ಜುಲೈ 2023ರಲ್ಲಿ ಪಾಟ್ನಾಗೆ ವರ್ಗಾಯಿಸಲಾಗಿತ್ತು.

ಮೇ 28, 1968ರಂದು ಜನಿಸಿದ ಪಾಂಚೋಲಿ ಅವರು, ಸೆಪ್ಟೆಂಬರ್ 1991ರಲ್ಲಿ ವಕೀಲಿಕೆ ವೃತ್ತಿಗೆ ಸೇರಿದರು ಮತ್ತು ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಪ್ರಾರಂಭಿಸಿದರು.

ಅಕ್ಟೋಬರ್ 1, 2014ರಂದು ಗುಜರಾತ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದ ಅವರು, ಜೂನ್ 10, 2016 ರಂದು ಶಾಶ್ವತ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

ನಂತರ, ಜುಲೈ 2023ರಲ್ಲಿ ಗುಜರಾತ್ ಹೈಕೋರ್ಟ್ ವಕೀಲರ ಸಂಘ (ಜಿಹೆಚ್‌ಸಿಎಎ) ವಿರೋಧದ ನಡುವೆಯೂ ಗುಜರಾತ್‌ನಿಂದ ಪಾಟ್ನಾ ಹೈಕೋರ್ಟ್‌ಗೆ ಪಾಂಚೋಲಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವಿಷಯ ವಿವಾದದ ಸ್ವರೂಪ ಪಡೆದಿತ್ತು.

ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡಿದ ವರದಿಯಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರು ಉತ್ತಮ ನ್ಯಾಯಾಧೀಶರು ಹೊಂದಿರಬೇಕಾದ ಎಲ್ಲಾ ಗುಣಗಳನ್ನು ಹೊಂದಿದ್ದಾರೆ ಎಂದು ಜಿಹೆಚ್‌ಸಿಎಎ ಹೇಳಿತ್ತು.

ನ್ಯಾಯಮೂರ್ತಿ ಪಾಂಚೋಲಿ 35,000ಕ್ಕೂ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಅದು ಮತ್ತಷ್ಟು ಎತ್ತಿ ತೋರಿಸಿತ್ತು. ವಿರೋಧದ ಹೊರತಾಗಿಯೂ, ವರ್ಗಾವಣೆ ಜಾರಿಗೆ ಬಂದಿತ್ತು.

ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸುವುದಕ್ಕೆ ನ್ಯಾಯಮೂರ್ತಿ ಬಿ.ವಿ ನಾಗರತ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ ಭಾರತ ಪಟ್ಟಿಯಲ್ಲಿ ನ್ಯಾಯಮೂರ್ತಿ ಪಾಂಚೋಲಿ ಪ್ರಸ್ತುತ 57ನೇ ಸ್ಥಾನದಲ್ಲಿದ್ದಾರೆ ಎಂದು ವರದಿಗಳು ಹೇಳಿವೆ.

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿದ ಮೂರು ತಿಂಗಳೊಳಗೆ, ಮೂಲತಃ ಅದೇ ಹೈಕೋರ್ಟ್‌ನವರಾದ ಮತ್ತೊಬ್ಬರು ನ್ಯಾಯಾಧೀಶರನ್ನು ಶಿಫಾರಸು ಮಾಡುವುದಕ್ಕೆ ನಾಗರತ್ನ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಮೇ ತಿಂಗಳಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಬಗ್ಗೆ ಚರ್ಚೆ ಶುರುವಾಗಿತ್ತು. ಆಗ ಸುಪ್ರೀಂ ಕೋರ್ಟ್ ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಪಾಂಚೋಲಿಯವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಹಿರಿಯರನ್ನು ಈ ನೇಮಕ ಬೈಪಾಸ್ ಮಾಡಲಿದೆ ಎಂದಿದ್ದರು.

ಹಿರಿತನದ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ಪಾಂಚೋಲಿ ಬದಲಿಗೆ ಹಿರಿಯರಾದ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನೇಮಿಸಿತ್ತು.

ಆ ಬಳಿಕ ಇದೀಗ ಪಾಂಚೋಲಿಯವರ ಹೆಸರು ಮತ್ತೆ ಪ್ರಸ್ತಾಪವಾಗಿರುವುದರಿಂದ ನ್ಯಾಯಮೂರ್ತಿ ನಾಗರತ್ನ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆಂದು ತಿಳಿದುಬಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಅತಿಯಾದ ಪ್ರಾತಿನಿಧ್ಯವನ್ನು ನಾಗರತ್ನ ಅವರು ಕೇಂದ್ರೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನ್ಯಾಯಮೂರ್ತಿ ಪಾಂಚೋಲಿ ಅವರನ್ನು ನೇಮಿಸಿದರೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಅಂಜಾರಿಯಾ ಮತ್ತು ಪಾಂಚೋಲಿ ಸೇರಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನು ಹೊಂದಲಿದೆ. ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಪಾಂಚೋಲಿ ಇಬ್ಬರೂ 2028ರಲ್ಲಿ ಕ್ರಮವಾಗಿ ಎರಡು ವರ್ಷಗಳ ಅವಧಿಗೆ ಮತ್ತು 2031ರಲ್ಲಿ ಏಳು ತಿಂಗಳ ಅವಧಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಳ್ಳಲಿದ್ದಾರೆ.

ಮೇ ತಿಂಗಳವರೆಗೆ, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ, ಎಂ.ಆರ್. ಶಾ ಮತ್ತು ಬೇಲಾ ಎಂ ತ್ರಿವೇದಿ ಸೇರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಇದ್ದರು. ನ್ಯಾಯಮೂರ್ತಿ ಶಾ ಮೇ ತಿಂಗಳಲ್ಲಿ ನಿವೃತ್ತರಾದರೆ, ನ್ಯಾಯಮೂರ್ತಿ ತ್ರಿವೇದಿ ಅವರು ಮೇ 16ರಂದು ನಿವೃತ್ತಿ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ತಲಾ ಮೂವರು ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿದ್ದಾರೆ.

ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು, ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೈಕೋರ್ಟ್‌ನ ಅನುಮೋದಿತ ಬಲವನ್ನು ಪರಿಗಣಿಸಲಾಗುತ್ತದೆ. ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸುಪ್ರೀಂ ಕೋರ್ಟ್‌ನಲ್ಲಿ ಇತರ ಹೈಕೋರ್ಟ್‌ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸುತ್ತವೆ.

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...