Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...