Homeಮುಖಪುಟರಾಹುಲ್ ಗಾಂಧಿ ಕಂಡರೆ ಇಡೀ ಕೇಂದ್ರ ಸರ್ಕಾರಕ್ಕೆ ಭಯ: ಶಿವಸೇನೆ

ರಾಹುಲ್ ಗಾಂಧಿ ಕಂಡರೆ ಇಡೀ ಕೇಂದ್ರ ಸರ್ಕಾರಕ್ಕೆ ಭಯ: ಶಿವಸೇನೆ

- Advertisement -
- Advertisement -

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಹಾಗಾಗಿ ಗಾಂಧಿ ಕುಟುಂಬವನ್ನು ಅವಮಾನಿಸುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಶಿವಸೇನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರವಾಗಿ ಬ್ಯಾಟಿಂಗ್ ಮಾಡಿದೆ.

ಇದನ್ನೂ ಓದಿ: ಚಹಾ ನೀಡಿ ರೈತ ಹೋರಾಟಕ್ಕೆ ಹುಮ್ಮಸ್ಸು ತುಂಬುವ ಗುರ್‌ನಾಮ್ ಸಿಂಗ್!

ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದು, ರಾಹುಲ್ ಗಾಂಧಿ ಮತ್ತೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ತಯಾರಿಯಲ್ಲಿದ್ದಾರೆ. ಇದು ಉತ್ತಮ ಬೆಳವಣಿಗೆ. ಬಿಜೆಪಿಗೆ ನರೇಂದ್ರ ಮೋದಿ ಹೇಗೋ ಕಾಂಗ್ರೆಸ್‌ಗೆ ರಾಹುಲ್ ಗಾಂಧಿ ಬಿಟ್ಟರೆ ಬೇರೆ ಮಾರ್ಗವಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಸ್ವಲ್ಪ ಸಮಯದ ವರೆಗೆ ರಾಹುಲ್ ಗಾಂಧಿ ಹೋದ ನಂತರ, ಪಕ್ಷದ ಹಿಡಿತವು ದುರ್ಬಲಗೊಂಡಿದೆ. ಈಗ ರಾಹುಲ್ ಗಾಂಧಿ ಮತ್ತೆ ಅಧಿಕಾರಕ್ಕೆ ಮರಳುತ್ತಿದ್ದಾರೆ ಎಂದು ಹೇಳಿದೆ.

ರಾಹುಲ್ ಗಾಂಧಿಯನ್ನು ದುರ್ಬಲ ನಾಯಕ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಇಲ್ಲವೆಂದರೆ ಗಾಂಧಿ ಕುಟುಂಬವನ್ನು ದೂರುವ ಅನಗತ್ಯ ಅಭಿಯಾನವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ಸಂಪಾದಕಿಯ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...