Homeಕರ್ನಾಟಕಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ಅನುದಾನವಲ್ಲ, ಸಾಲ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ಅನುದಾನವಲ್ಲ, ಸಾಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ, “ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ ಎಂದರು.

ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋಧಿಸಿದ್ದೀರಿ ಎಂದು ಹೇಳಿದರು.

ಗ್ಯಾರಂಟಿ ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ, ನೀವೇ ಲೋಕಸಭಾ ಚುನಾವಣೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ ಎಂದು ಟೀಕಿಸಿದರು.

ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದೇವೆ ಎಂದರು.

ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು: ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...