Homeಕರ್ನಾಟಕಕಬ್ಬಿಗೆ 'ಎಫ್‌ಆರ್‌ಪಿ' ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಬ್ಬಿಗೆ ‘ಎಫ್‌ಆರ್‌ಪಿ’ ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಬ್ಬಿಗೆ ಎಫ್‌ಆರ್‌ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು. ಅದರಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಹಾಗೆಯೇ, ರೈತರಿಗೂ ಮನವೊಲಿಸುವ ಕೆಲಸ ಮಾಡಿದ್ದಾರೆ” ಎಂದರು.

“ವಿರೋಧ ಪಕ್ಷಗಳವರು ಈ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವುದರಿಂದ ವಿಷಯ ತುಸು ಗೊಂದಲಕರವಾಗಿದೆ. ವಾಸ್ತವವಾಗಿ ನೋಡಿದರೆ, ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ನಗಣ್ಯವಾಗಿದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ ‍ಎಫ್‌ಆರ್‌ಪಿಯನ್ನು ನಿಗದಿಪಡಿಸುತ್ತದೆ. ಅದರಂತೆ, ದಿನಾಂಕ:06.05.2025 ರಂದು ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು ಹೊರಡಿಸಿರುವ ಆದೇಶದ ಪ್ರಕಾರ, ಈ ದರವನ್ನು ಕೇಂದ್ರ ಸರ್ಕಾರವೆ ನಿಗದಿ ಮಾಡಿದೆ. ಕೇಂದ್ರ ಸರ್ಕಾರವು ನಿಗದಿ ಮಾಡಿರುವ ದರ ರೈತರಿಗೆ ಲಭಿಸುತ್ತಿದೆಯೇ ಎಂದು ನೋಡಿಕೊಳ್ಳುವುದು ಹಾಗೂ ರೈತರಿಗೆ ತೂಕ, ಬೆಲೆ, ಹಾಗೂ ನಿಗದಿತ ಅವಧಿಯಲ್ಲಿ ಪಾವತಿ ಇತ್ಯಾದಿಗಳನ್ನು ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ” ಎಂದರು.

“ಎಫ್‌ಆರ್‌ಪಿಯನ್ನು ನಿಗದಿಪಡಿಸುವುದಷ್ಟೆ ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲ. ಸಕ್ಕರೆ ಮೇಲಿನ ನಿಯಂತ್ರಣವನ್ನು ಅಗತ್ಯ ವಸ್ತುಗಳ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಹೊಂದಿರುತ್ತದೆ. ಹಿಂದೆ ಯುಪಿಎ ಸರ್ಕಾರದ ಅವಧಿಯಿಂದಲೂ 2017-18 ರವರೆಗೆ ರಿಕವರಿ ಪ್ರತಿ ಕ್ವಿಂಟಾಲಿಗೆ ಶೇ. 9.5 ರಷ್ಟನ್ನು ನಿಗದಿಪಡಿಸಲಾಗುತ್ತಿತ್ತು. 2018-19 ನಿಂದ 2021-22 ರವರೆಗೆ ಅದನ್ನು ಶೇ.10 ಕ್ಕೆ ಹೆಚ್ಚಿಸಲಾಯಿತು. 2022-23 ರಿಂದ ಈಚೆಗೆ ಎಫ್.ಆರ್.ಪಿ. ಯನ್ನು ಶೇ. 10.25 ಕ್ಕೆ ಏರಿಕೆ ಮಾಡಲಾಗಿದೆ. ಈ ವಿಚಾರದಲ್ಲೂ ನಮ್ಮ ರೈತರಿಗೆ ಅನ್ಯಾಯ ಮಾಡಲಾಗಿದೆ” ಎಂದು ಅವರು ಆರೋಪಿಸಿದರು.

“ಸಕ್ಕರೆಗೆ 2019 ರಲ್ಲಿ ಎಂ.ಎಸ್.ಪಿ ಯನ್ನು ಕಡೆಯದಾಗಿ ನಿಗದಿಪಡಿಸಲಾಯಿತು. ಆಗ, ಪ್ರತಿ ಕೆ.ಜಿ. ಗೆ 31 ರೂ. ನಿಗದಿ ಮಾಡಲಾಗಿತ್ತು. ಆನಂತರ ಎಂ.ಎಸ್.ಪಿ ಯನ್ನು ಪರಿಷ್ಕರಿಸಲಿಲ್ಲ. ಜೊತೆಗೆ, ಕಳೆದ ಕೆಲವು ವರ್ಷಗಳಿಂದಲೂ ಕೇಂದ್ರ ಸರ್ಕಾರವು ಸಕ್ಕರೆ ರಫ್ತನ್ನು ನಿಲ್ಲಿಸಿದೆ. ಕಳೆದ ವರ್ಷ ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ರಫ್ತು ಮಾಡಲು ಮಾತ್ರ ಅವಕಾಶ ನೀಡಲಾಗಿತ್ತು. ಕರ್ನಾಟಕವೊಂದರಲ್ಲೆ 41 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು. ಈ ಕಾರಣದಿಂದಲೂ ರೈತರಿಗೆ ಸಮಸ್ಯೆಯಾಗುತ್ತಿದೆ. ಇದಷ್ಟೆ ಅಲ್ಲದೆ, ಎಥನಾಲ್ ವಿಚಾರದಲ್ಲೂ ಸಹ ಕೇಂದ್ರ ಸರ್ಕಾರವು ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿದೆ. ಕರ್ನಾಟಕದಲ್ಲಿ 270 ಕೋಟಿ ಲೀಟರ್‌ ಉತ್ಪಾದನಾ ಸಾಮರ್ಥ್ಯ ಇದ್ದರೂ ಸಹ 2024-25 ರಲ್ಲಿ 47 ಕೋಟಿ ಲೀಟರ್‌ಗಳನ್ನು ತೈಲ ಕಂಪನಿಗಳಿಗೆ ಖರೀದಿ ಮಾಡಲು ಹಂಚಿಕೆ ಮಾಡಲಾಗಿದೆ. ಇದು ಕೇಂದ್ರ ಸರ್ಕಾರವು ರಾಜ್ಯದ ರೈತರ ಬದುಕಿನೊಂದಿಗೆ ಆಡುತ್ತಿರುವ ಚೆಲ್ಲಾಟಕ್ಕೆ ಸ್ಪಷ್ಟ ನಿದರ್ಶನವಾಗಿದೆ” ಎಂದು ಅವರು ವಾಗ್ಧಾಳಿ ನಡೆಸಿದರು.

“ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ. ಇದರ ಜೊತೆಗೆ ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನೆಗೆ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರವು ಉಚಿತವಾಗಿ ಎಪಿಎಂಸಿಗಳಲ್ಲಿ ಸ್ಥಾಪಿಸಿರುವ ತೂಕದ ಯಂತ್ರಗಳಲ್ಲಿ ಉಚಿತವಾಗಿ ತೂಕ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಿದ್ದೇವೆ. 2024-25 ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು 522 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದಿವೆ. ರೈತರಿಗೆ ಈ ಅವಧಿಯಲ್ಲಿ 18,221.88 ಕೋಟಿ ರೂ. ಗಳನ್ನು ಎಫ್.ಆರ್.ಪಿ. ದರದಂತೆ ಪಾವತಿಸಬೇಕಾಗಿತ್ತು. ಆದರೂ ಸಹ ಕೆಲವು ಕಡೆ ರಿಕವರಿ (ಸಕ್ಕರೆ ಇಳುವರಿ) ಹೆಚ್ಚು ಬಂದ ಕಾರಣ 19,569.15 ಕೊಟಿ ರೂ. ಗಳನ್ನು ರೈತರಿಗೆ ಪಾವತಿಸುವಂತೆ ನೋಡಿಕೊಳ್ಳುವಲ್ಲಿ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದೆ” ಎಂದು ಸಿಎಂ ವಿವರಿಸಿದರು.

ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು

“ಇಷ್ಟೆಲ್ಲಾ ಮಾಡಿದ್ದರೂ ಸಹ, ರೈತರ ಮುಗ್ಧತೆಯನ್ನು ವಿರೋಧ ಪಕ್ಷದವರು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು. ನಮ್ಮ ಸರ್ಕಾರವು ಸಂವಾದದಲ್ಲಿ ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ನಂಬಿಕೆ ಇಟ್ಟುಕೊಂಡಿದೆ. ನಿರಂತರವಾಗಿ ರೈತ ಪರವಾದ ತೀರ್ಮಾನಗಳನ್ನು ಕೈಗೊಳ್ಳುತ್ತಾ ಬಂದಿದೆ. ಆದ್ದರಿಂದ, ನಾಳೆ ಬೆಳಿಗ್ಗೆ 11.00 ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರುಗಳ ಜೊತೆ ಹಾಗೂ ಮಧ್ಯಾಹ್ನ 1.00 ಗಂಟೆಗೆ ರೈತ ಮುಖಂಡರುಗಳ ಜೊತೆ ಚರ್ಚಿಸಲು ಸಭೆ ಕರೆದಿದ್ದೇವೆ. ಸದರಿ ಸಭೆಯಲ್ಲಿ ಎರಡೂ ಕಡೆಯ ಅಹವಾಲುಗಳನ್ನು ಆಲಿಸಿ ಸೂಕ್ತ ತೀರ್ಮಾನವನ್ನು ರಾಜ್ಯ ಸರ್ಕಾರವು ತನ್ನ ಮಿತಿಯಲ್ಲಿ ತೀರ್ಮಾನವನ್ನು ಕೈಗೊಳ್ಳಲಿದೆ. ರಾಜ್ಯದ ಕಬ್ಬು ಬೆಳೆಯುವ ರೈತರು ಸರ್ಕಾರದ ಮೇಲೆ ವಿಶ್ವಾಸವಿಡಬೇಕೆಂದು ಹಾಗೂ ವಿರೋಧ ಪಕ್ಷಗಳ ರಾಜಕಾರಣಕ್ಕೆ ಬಲಿಯಾಗಬಾರದೆಂದು ನಾನು ಮನವಿ ಮಾಡುತ್ತೇನೆ” ಎಂದರು.

“ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಪ್ರಧಾನ ಮಂತ್ರಿಗಳನ್ನು ಮಾನ್ಯ ಮುಖ್ಯಮಂತ್ರಿಗಳು ಭೇಟಿ ಮಾಡಿ ಕಬ್ಬು ಬೆಳೆಗಾರರ ವಿಚಾರದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತುರ್ತಾಗಿ ಭೇಟಿಗೆ ಅವಕಾಶ ನೀಡಬೇಕೆಂದು ಪತ್ರ ಬರೆಯಲು ಹಾಗೂ ಪ್ರಧಾನ ಮಂತ್ರಿಗಳ ಕಛೇರಿಯನ್ನು ಸಂಪರ್ಕಿಸಲು ತೀರ್ಮಾನಿಸಲಾಯಿತು. ಕೂಡಲೇ ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಮುಖ್ಯವಾಗಿ ರಿಕವರಿ ಪ್ರಮಾಣವನ್ನು ಇಳಿಸುವುದು, ಎಫ.ಆರ್.ಪಿ. ದರ ಪರಿಷ್ಕರಿಸುವುದು, ಸಕ್ಕರೆ ರಫ್ತು, ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಒತ್ತಾಯಿಸುವಂತೆ ಚರ್ಚಿಸಲಾಯಿತು ಎಂಬುದನ್ನು ರೈತ ಮುಖಂಡರುಗಳ ಗಮನಕ್ಕೆ ತರಬಯಸುತ್ತೇವೆ. ಕೇಂದ್ರ ಸರ್ಕಾರವು ರಾಜ್ಯದ ವಿಚಾರದಲ್ಲಿ ನಡೆಸುತ್ತಿರುವ ಮಲತಾಯಿ ಧೋರಣೆಯು ರೈತರ ಅನ್ನದ ತಟ್ಟೆಯವರೆಗೂ, ರೈತರ ಭೂಮಿಯವರೆಗೂ ಬಂದಿದೆ. ಈ ವಿಚಾರದಲ್ಲಿ ನಾವು ಅಧಿಕಾರಕ್ಕೆ ಬಂದಾಗಿನಿಂದ ಧ್ವನಿ ಎತ್ತುತ್ತಿದ್ದೇವೆ. ಹಾಗಾಗಿ ನಮ್ಮ ಎಲ್ಲಾ ಪ್ರಯತ್ನಗಳ ಜೊತೆಯಲ್ಲಿ ತಾವೂ ಜೊತೆಗೂಡಬೇಕೆಂದು ಮನವಿ ಮಾಡುತ್ತೇನೆ” ಎಂದು ಹೇಳಿದರು.

“ಎಷ್ಟೇ ಬಿಕ್ಕಟ್ಟುಗಳು ಬಂದರೂ ನಮ್ಮ ಸರ್ಕಾರವು ರೈತ ಪರವಾಗಿದೆ ಎಂಬುದನ್ನು ಸಹ ತಮ್ಮ ಗಮನಕ್ಕೆ ತರಬಯಸುತ್ತೇನೆ. ಕೆಲವು ರೈತ ಮುಖಂಡರುಗಳು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳ ಕುರಿತು ಪ್ರಸ್ತಾಪಿಸಿರುವುದು ಗಮನಕ್ಕೆ ಬಂದಿದೆ. ನನಗೆ ಮಾಹಿತಿ ಇರುವ ಹಾಗೆ ಮಹಾರಾಷ್ಟ್ರದಲ್ಲಿ ಸುಮಾರು 40 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳು ಅಲ್ಲಿ 2515 ರೂ. ರಿಂದ 3635 ರೂ. ಗಳವರೆಗೆ ಕಬ್ಬಿಗೆ ಬೆಲೆಗಳನ್ನು ನೀಡುತ್ತಿವೆ. ನಾಳೆಯ ಸಭೆಯಲ್ಲಿ ಈ ವಿಚಾರವನ್ನು ಸಹ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಹೊನ್ನಾವರ ಬಂದರು ಯೋಜನೆ ಕೈ ಬಿಡಿ : ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...