Homeಮುಖಪುಟಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ 'ಡಾರ್ಕ್ ಪ್ಯಾಟರ್ನ್ಸ್' ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ ‘ಡಾರ್ಕ್ ಪ್ಯಾಟರ್ನ್ಸ್’ ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

- Advertisement -
- Advertisement -

ಗ್ರಾಹಕ ರಕ್ಷಣಾ ನಿಯಮಗಳನ್ನು ಅನುಸರಿಸಲು ಬೇಕಾಗಿ ಡಾರ್ಕ್ ಪ್ಯಾಟರ್ನ್‌ಗಳನ್ನು ವಿಶ್ಲೇಷಿಸಲು ಮತ್ತು ತೊಡೆದುಹಾಕಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇ-ಕಾಮರ್ಸ್ ಸಂಬಂಧಪಟ್ಟವರ ಜೊತೆಗೆ ನಡೆದ ಸಭೆಯ ನಂತರ ಸಚಿವರು ಈ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ವರದಿಯಾದ ಡಾರ್ಕ್ ಪ್ಯಾಟರ್ನ್‌ಗಳ ಕುರಿತು ಗ್ರಾಹಕರ ದೂರುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದ್ದು, ಹಾಗಾಗಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ – ಡಾರ್ಕ್ ಪ್ಯಾಟರ್ನ್ಸ್ ಎಂಬ ಆಧುನಿಕ ಕಾಲದ ಆಧುನಿಕ ಶೋಷಣೆ!

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಬಳಸುವ ದಾರಿ ತಪ್ಪಿಸುವ ಅಭ್ಯಾಸಗಳನ್ನು ಪರಿಹರಿಸಲು ಹೆಚ್ಚು ಪರಿಣಾಮಕಾರಿ ತಂತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಭೆ ಹೊಂದಿದೆ. ಈ ಸಮಸ್ಯೆಗಳ ಬಗ್ಗೆ ಇ-ಕಾಮರ್ಸ್ ಕಂಪನಿಗಳಿಗೆ ಶಿಕ್ಷಣ ನೀಡಲು ಜಂಟಿ ಕಾರ್ಯ ಸಮೂಹದ ರಚನೆಯನ್ನು ಜೋಶಿ ಪ್ರಸ್ತಾಪಿಸಿದ್ದಾರೆ. 

“ಡಾರ್ಕ್ ಪ್ಯಾಟರ್ನ್” ಎಂದರೆ ಬಳಕೆದಾರರನ್ನು ದಾರಿತಪ್ಪಿಸುವ ಅಥವಾ ಅವರನ್ನು ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಒತ್ತಾಯಿಸುವ ಬಳಕೆದಾರ ಇಂಟರ್ಫೇಸ್‌ಗಳಲ್ಲಿ (ವೆಬ್ ಪುಟಗಳಂತಹ) ಬಳಸಲಾಗುವ ವಂಚನೆ ಮಾಡುವ ವಿನ್ಯಾಸ ತಂತ್ರವಾಗಿದೆ. ಈ ಅಭ್ಯಾಸವು ಗ್ರಾಹಕರ ಸ್ವಾಯತ್ತತೆ, ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಒಟ್ಟಾರೆ ಆಯ್ಕೆಯನ್ನು ದುರ್ಬಲಗೊಳಿಸುತ್ತದೆ.

ಡಾರ್ಕ್ ಪ್ಯಾಟರ್ನ್‌ಗಳಿಗೆ ಕೆಲವು ಉದಾಹರಣೆಗಳೆಂದರೆ, ಗ್ರಾಹಕರು ವಹಿವಾಟುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾಗಿಸುವುದು ಅಥವಾ ರದ್ದುಗೊಳಿಸಲು ಕಷ್ಟಕರವಾಗಿಸುವುದು, ಮುಗಿಯದ ಸ್ಕ್ರೋಲಿಂಗ್, ಆಟೋಪ್ಲೇ ವೀಡಿಯೊಗಳು ಅಥವಾ ನಿರಂತರ ನೋಟಿಫಿಕೇಷನ್‌ಗಳಂತಹ ವೈಶಿಷ್ಟ್ಯಗಳನ್ನು ಬಳಸುವುದು ಸೇರಿವೆ. ಸರ್ಕಾರವು 13 ನಿರ್ದಿಷ್ಟ ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಿದೆ.

ಮೋಸಗೊಳಿಸುವ ಆನ್‌ಲೈನ್ ಅಭ್ಯಾಸಗಳನ್ನು ನಿರ್ಮೂಲನೆ ಮಾಡುವ ಕುರಿತು ಮಾತನಾಡಲು ಗ್ರಾಹಕ ವ್ಯವಹಾರಗಳ ಇಲಾಖೆ ಬುಧವಾರ ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಜೊಮಾಟೊ, ಮೇಕ್‌ಮೈಟ್ರಿಪ್, ಮೆಟಾ, ವಾಟ್ಸಾಪ್, ಓಲಾ ಮತ್ತು ಆಪಲ್ ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳ ಸಭೆಯನ್ನು ಕರೆದಿದೆ.

ಡಾರ್ಕ್ ಪ್ಯಾಟರ್ನ್‌ಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ವಿವರವಾದ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಿದೆ. ಎಲ್ಲಾ ಕಂಪನಿಗಳು ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಮತ್ತು ಅವುಗಳನ್ನು ತಮ್ಮ ಆಂತರಿಕ ಆಡಳಿತ ಮತ್ತು ಗ್ರಾಹಕ ರಕ್ಷಣಾ ಕಾರ್ಯವಿಧಾನಗಳಲ್ಲಿ ಸಂಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ, ಟ್ಯಾಕ್ಸಿ ಮತ್ತು ಬೈಕ್ ಸೇವೆಯ ಕಂಪನಿಗಳಾದ ಉಬರ್ ಮತ್ತು ರಾಪಿಡೊಗಳು, ವೇಗವಾಗಿ ಸೇವೆ ಬೇಕೆಂದರೆ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿತ್ತು.

ಇಂತಹ ಅಭ್ಯಾಸಗಳನ್ನು “ಅನ್ಯಾಯ ವ್ಯಾಪಾರ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದನ್ನು ನಿಲ್ಲಿಸಬೇಕು ಎಂದು ಜೋಶಿ ಹೇಳಿದ್ದರು. ಟಿಪ್ಪಿಂಗ್ ಐಚ್ಛಿಕವಾಗಿರಬೇಕು, ಗ್ರಾಹಕರು ತಮ್ಮ ಸೇವಾ ಅನುಭವದ ಆಧಾರದ ಮೇಲೆ ಈ ಮೊತ್ತವನ್ನು ನಿರ್ಧರಿಸುತ್ತಾರೆ ಎಂದು ಅವರು ಒತ್ತಿ ಹೇಳಿದ್ದರು.

ಎಡ್‌ಟೆಕ್, ಟ್ರಾವೆಲ್, ಏರ್‌ಲೈನ್ಸ್, ಇಕಾಮರ್ಸ್, ಕ್ವಿಕ್ ಕಾಮರ್ಸ್, ಆನ್‌ಲೈನ್ ಬ್ಯಾಂಕಿಂಗ್ ಮತ್ತು ಪಾವತಿಗಳು, ಟ್ಯಾಕ್ಸಿ ಅಪ್ಲಿಕೇಶನ್‌ಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅತಿ ಹೆಚ್ಚು ಡಾರ್ಕ್ ಪ್ಯಾಟರ್ನ್‌ಗಳನ್ನು ಅಭ್ಯಾಸ ಮಾಡಿಕೊಂಡಿವೆ ಎಂದು ಗ್ರಾಹಕರ ಜಾಗೃತಿ ಮೂಡಿಸುವ ಲೋಕಲ್‌ಸರ್ಕಲ್ಸ್ ಹೇಳಿದೆ. ಈ ವೇಳೆ 392 ಜಿಲ್ಲೆಗಳಲ್ಲಿ ಆನ್‌ಲೈನ್ ಸಮೀಕ್ಷೆ ನಡೆಸಿ 2.30 ಲಕ್ಷ ಗ್ರಾಹಕರೊಂದಿಗೆ ಲೋಕಲ್‌ಸರ್ಕಲ್ಸ್‌ ಸಮಾಲೋಚನೆ ನಡೆಸಿತ್ತು.  ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...