Homeಮುಖಪುಟ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

ಜೆಜೆಪಿ ನಾಯಕ, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಕೂಡ ರೈತರಿಗೆ ಬೆಂಬಲವಾಗಿ ಬಹಿರಂಗವಾಗಿ ಹೊರಬರಬೇಕು ಎಂದು ಮಜ್ರಾ ಒತ್ತಾಯಿಸಿದ್ದಾರೆ.

- Advertisement -
- Advertisement -

ಹರಿಯಾಣ ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯ ಸಂಸದೀಯ ಕಾರ್ಯದರ್ಶಿ ರಾಂಪಾಲ್ ಮಜ್ರಾ ಅವರು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಮತ್ತು ರೈತ ಹೋರಾಟವನ್ನು ಬೆಂಬಲಿಸಿ ಗುರುವಾರ ಪಕ್ಷ ತೊರೆದಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರೊಂದಿಗೆ ನಾನು ಸಂಪೂರ್ಣವಾಗಿ ನಿಲ್ಲುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮಾತ್ರವಲ್ಲ, ಜಾರಿಗೆ ಬಂದಾಗ ಸಮಾಜದ ಇತರ ವರ್ಗಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಹೇಳಿದ್ದಾರೆ.

ಮೂರು ಬಾರಿ ಶಾಸಕರಾಗಿದ್ದ ಮಜ್ರಾ ಅವರು 2019 ರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಐಎನ್‌ಎಲ್‌ಡಿಯಿಂದ ಬಿಜೆಪಿಗೆ ಸೇರಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲೇ ಅವರು ಕೇಂದ್ರದ ಕೃಷಿ ಮಸೂದೆಗಳನ್ನು “ರೈತ ವಿರೋಧಿ” ಎಂದು ಜರಿದಿದ್ದರು. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಬಗ್ಗೆ ಆತಂಕಗಳು ಶುರುವಾಗಿವೆ ಎಂದಿದ್ದರು.

ಜನವರಿ 26 ರಂದು ರೈತರ ಟ್ರಾಕ್ಟರ್ ರ‍್ಯಾಲಿಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಕೇಂದ್ರ ಸರ್ಕಾರವನ್ನು ದೂಷಿಸಿದ ಮಜ್ರಾ, ರೈತರ ಶಾಂತಿಯುತ ಪ್ರತಿಭಟನೆಯನ್ನು ಹಾಳುಮಾಡಲು ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಹೃದಯಾಘಾತ ಮತ್ತು ರಸ್ತೆ ಅಪಘಾತಗಳು ಸೇರಿದಂತೆ ರೈತರ ಆಂದೋಲನದಲ್ಲಿ 150 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರ ಈವರೆಗೆ ಅವರ ಬಗ್ಗೆ ಒಂದು ಮಾತನ್ನೂ ಹೇಳಿಲ್ಲ ಎಂದು ಮಜ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರಿಗೆ ಬೆಂಬಲವಾಗಿ ನಿಲ್ಲುವ ಐಎನ್‌ಎಲ್‌ಡಿ ಮುಖಂಡ ಅಭಯ್ ಸಿಂಗ್ ಚೌತಲಾ ಅವರ ನಿರ್ಧಾರವನ್ನು ಮಜ್ರಾ ಶ್ಲಾಘಿಸಿದರು.

‘ಇದು ಅಭಯ್ ಅವರ ಧೈರ್ಯಶಾಲಿ ನಿರ್ಧಾರ, ಇದು ರೈತರ ಆಂದೋಲನಕ್ಕೆ ಉತ್ತೇಜನ ನೀಡುತ್ತದೆ. ಅವರ ನಿರ್ಧಾರವನ್ನು ಶ್ಲಾಘಿಸಬೇಕಾಗಿದೆ. ಏಕೆಂದರೆ ಪ್ರಸ್ತುತ ಕಾಲದಲ್ಲಿ ಜನರು ಸರಪಂಚ್ ಅಥವಾ ಜಿಲ್ಲಾ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಸಹ ಸಿದ್ಧರಿಲ್ಲ’ ಎಂದು ಅವರು ಹೇಳಿದರು.

ಸರ್ಕಾರದಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿರುವ ಜೆಜೆಪಿ ನಾಯಕ, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಕೂಡ ಆಂದೋಲನದ ರೈತರಿಗೆ ಬೆಂಬಲವಾಗಿ ಬಹಿರಂಗವಾಗಿ ಹೊರಬರಬೇಕು ಎಂದು ಮಜ್ರಾ ಒತ್ತಾಯಿಸಿದ್ದಾರೆ.

ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಹೊಂದಿರುವ ಮತ್ತು ಹರಿಯಾಣದ ಹಿರಿಯ ನಾಯಕರಲ್ಲಿ ಒಬ್ಬರಾದ ಮಜ್ರಾ, ಯಾವ ಪಕ್ಷಕ್ಕೆ ಸೇರಬೇಕು ಎಂದು ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಹೇಳಿದರು.

ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ನನ್ನ ಬೆಂಬಲಿಗರು, ಸ್ನೇಹಿತರು ಮತ್ತು ಹಿತೈಷಿಗಳನ್ನು ಸಂಪರ್ಕಿಸುತ್ತೇನೆ ಎಂದು ಅವರು ಹೇಳಿದರು.


ಇದನ್ನೂ ಓದಿ: ‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ...

0
'ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ' ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...